ಇಂದು ಕೇಂದ್ರ ವಾಣಿಜ್ಯ ಸಚಿವರ ಜೊತೆ ಕಾಫಿ ಬೆಳೆಗಾರರ ಚರ್ಚೆ
Team Udayavani, Jul 23, 2019, 3:00 AM IST
ಚಿಕ್ಕಮಗಳೂರು: ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಕೇಂದ್ರ ವಾಣಿಜ್ಯ ಸಚಿವಾಲಯ ಕರ್ನಾಟಕ ಬೆಳೆಗಾರರ ಒಕ್ಕೂಟವನ್ನು ದೆಹಲಿಗೆ ಆಹ್ವಾನಿಸಿದೆ. ಕಳೆದ ಜೂನ್‌ನಲ್ಲಿ ದೆಹಲಿಗೆ ತೆರಳಿದ್ದ ಕರ್ನಾಟಕ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳು, ಕೇಂದ್ರ ವಾಣಿಜ್ಯ ಸಚಿವರು, ವಿತ್ತ ಸಚಿವರು ಮತ್ತು ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ, ಬೆಳೆ ಕುಂಠಿತ, ಗಿಡಗಳಿಗೆ ರೋಗ ಬಾಧೆ, ಕಾರ್ಮಿಕರ ಕೊರತೆ ಸೇರಿದಂತೆ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದರು.
ಅಲ್ಲದೇ, ಕಾಫಿ ಉದ್ಯಮದ ನೆರವಿಗೆ ಧಾವಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ಒಕ್ಕೂಟದ ಕೆಜಿಎಫ್ ಘಟಕದ ಅಧ್ಯಕ್ಷ ಯು.ಎಂ.ತೀರ್ಥ ಮಲ್ಲೇಶ್ ಅವರಿಗೆ ಕರೆ ಮಾಡಿ, ಜು.23ರಂದು ಸಂಜೆ 4ಗಂಟೆಗೆ ದೆಹಲಿಯ ಪಾರ್ಲಿಮೆಂಟ್ ಭವನದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾರೆ ಎಂದು ಒಕ್ಕೂಟದ ಉಪಾಧ್ಯಕ್ಷ ಡಿ.ಎಂ.ವಿಜಯ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.