ಕಪ್ಪು ಶಿಲೀಂಧ್ರದಂತ ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ?ಎಚ್ ಡಿಕೆ ಪ್ರಶ್ನೆ
Team Udayavani, May 22, 2021, 1:00 PM IST
ಬೆಂಗಳೂರು: ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬೇಕಿರುವ ಆಂಫೊಟೆರಿಸಿನ್ ಬಿ ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. ‘ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಅತ್ತ, ಇತರ ರಾಜ್ಯಗಳು ಕೇಂದ್ರಕ್ಕೆ ಕಾಯದೇ ಖಾಸಗಿ ಸಂಸ್ಥೆಗಳಿಂದ ಖರೀದಿ ಪ್ರಕ್ರಿಯೆ ಆರಂಭಿಸಿವೆ. ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ‘ರಾಕ್ಷಸ ಅಲಸ್ಯ’ ದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ ಆಂಫೊಟೆರಿಸಿನ್ ಬಿ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ. ಮತ್ತು, ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ. ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಏಕಿಲ್ಲ ಕಾಳಜಿ ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ಪ್ರತಿ ವಾರ 400 ಮಂದಿ ಕಪ್ಪು ಶಿಲೀಂಧ್ರ ರೋಗಕ್ಕೆ ಗುರಿಯಾಗುವುದಾಗಿ ತಜ್ಞರು ಹೇಳಿದ್ದಾರೆ. ಈ ಸಂಖ್ಯೆ ಹೆಚ್ಚಲೂಬಹುದು. ಗಮನಿಸಬೇಕಾದ್ದೇನೆಂದರೆ, ಈ ಕಾಯಿಲೆಗೆ ಮೊದಲ 2 ದಿನಗಳಲ್ಲೇ ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದರೆ, ಸಾವು ತರುವ ರೋಗವಾಗಿ ಇದು ಪರಿಣಮಿಸುತ್ತದೆ. ಆದರೆ, ರಾಜ್ಯ ಸರ್ಕಾರ ಔಷಧ ಹೊಂದಿಸಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಬ್ಲಾಕ್ ಫಂಗಸ್ ಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ವ್ಯವಸ್ಥೆ: ಆರೋಗ್ಯ ಸಚಿವ ಸುಧಾಕರ್
ಆಕ್ಸಿಜನ್, ಲಸಿಕೆಗಾಗಿ ಕೇಂದ್ರದತ್ತ ನೋಡಿದ ರಾಜ್ಯ ‘ಇಲ್ಲ’ ಎನಿಸಿಕೊಂಡಿದೆ. ಅದರ ಪರಿಣಾಮ ಜನರು ಅನುಭವಿಸುತ್ತಿದ್ದಾರೆ. ಈಗ ಕಪ್ಪು ಶಿಲೀಂಧ್ರದ ವಿಚಾರದಲ್ಲೂ ರಾಜ್ಯ ಸರ್ಕಾರ ಆಲಸ್ಯದಿಂದ ಕೇಂದ್ರದ ಕಡೆ ನೋಡುತ್ತಿದೆ. ಈಗಲೂ ಕೇಂದ್ರ ಇಲ್ಲ ಎಂದಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಾದರೂ ಸ್ವತಂತ್ರ ನಿರ್ಧಾರ ಕೈಗೊಳ್ಳಲಿ. ಜನರ ಜೀವ ಉಳಿಸಲಿ. ಕೇಂದ್ರ ಸದಾ ತಾರತಮ್ಯ ಮಾಡುತ್ತದೆ. ಉದಾ: ರಾಜ್ಯದಲ್ಲಿ ಒಬ್ಬ ಕೋವಿಡ್ ರೋಗಿಗೆ ಲಭ್ಯವಿರುವ ಆಮ್ಲಜನಕ 1.90 ಲೀಟರ್. ಗುಜರಾತ್‌ನಲ್ಲಿ ಪ್ರತಿ ರೋಗಿಗೆ 10.95 ಲೀಟರ್ ಸಿಗುತ್ತಿದೆ. ಆದರೆ, ಅಲ್ಲಿಗಿಂತ ಹೆಚ್ಚು ಪ್ರಕರಣಗಳಿರುವುದು ನಮ್ಮಲ್ಲಿ. ಇದು ಕೇಂದ್ರದ ಆಕ್ಸಿಜನ್ ಮೋಸ. ಕಪ್ಪು ಶಿಲೀಂದ್ರ ಔಷಧದಲ್ಲೂ ಇದು ಮುಂದುವರಿಯುತ್ತಿದೆ ಎಂದು ಎಚ್ ಡಿಕೆ ಆರೋಪಿಸಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರವು ಪ್ರತಿಯೊಂದಕ್ಕೂ ಕೇಂದ್ರದ ಕಡೆ ನೋಡದೇ, ತಾನೇ ನಿರ್ಧಾರಗಳನ್ನು ಕೈಗೊಳ್ಳಲಿ. ಔಷಧಕ್ಕಾಗಿ ಪರ್ಯಾಯ ಮೂಲಗಳನ್ನು ಹುಡಕಲಿ. ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೇನೆ. ಕೂಡಲೇ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಪೂರೈಕೆಗೆ ಸರ್ಕಾರ ಮನವಿ ಮಾಡಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.