ಸೀಟು ಕೈತಪ್ಪುವ ಆತಂಕ: ಸಿಇಟಿಗೆ ಮುನ್ನವೇ ಕಾಮೆಡ್-ಕೆ ಸೀಟು ಹಂಚಿಕೆ: ಆಕಾಂಕ್ಷಿಗಳಲ್ಲಿ ಆತಂಕ
ಸರಕಾರದ ವಿಳಂಬ ನೀತಿಯಿಂದ ಸಾವಿರಾರು ವಿದ್ಯಾರ್ಥಿಗಳು ಅತಂತ್ರ
Team Udayavani, Aug 8, 2022, 7:00 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕಿಂತ ಮೊದಲೇ ಕಾಮೆಡ್-ಕೆ ಪ್ರವೇಶ ಪ್ರಕ್ರಿಯೆ ನಡೆಸುತ್ತಿದ್ದು, ಇದರ ಪರಿಣಾಮವಾಗಿ ವಿದ್ಯಾರ್ಥಿಗಳಲ್ಲಿ ಸಿಇಟಿ ಸೀಟು ಕೈತಪ್ಪುವ ಆತಂಕ ಆರಂಭ ವಾಗಿದೆ. ಖಾಸಗಿ ಲಾಬಿಗೆ ಮಣಿದು ಸರಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಗಂಭೀರ ಆರೋಪವೂಕೇಳಿ ಬಂದಿದೆ.
ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿ ಕಾಮೆಡ್-ಕೆ ಆ. 26ರಿಂದ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಲಿದೆ. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇನ್ನೂ ಪ್ರಕ್ರಿಯೆ ಆರಂಭಿಸದಿರುವುದು ಆಕಾಂಕ್ಷಿಗಳ ಆತಂಕಕ್ಕೆ ಕಾರಣವಾಗಿದೆ.
ಸಾಮಾನ್ಯವಾಗಿ ವಿದ್ಯಾರ್ಥಿಗಳು ಸೀಟು ಆಯ್ಕೆ ವೇಳೆ ಕಾಲೇಜಿನಲ್ಲಿರುವ ಉತ್ತಮ ಮೂಲಸೌಕರ್ಯ, ಬೋಧನೆ, ಕಾಲೇಜಿನ ವಾತಾವರಣ, ಕ್ಯಾಂಪಸ್ ಮತ್ತು ಪ್ಲೇಸ್‌ಮೆಂಟ್‌ಗಳನ್ನು ಮಾನದಂಡವಾಗಿ ಪರಿಗಣಿಸಿ ಆಯ್ಕೆ ಮಾಡುತ್ತಾರೆ. ಇದರ ಜತೆಗೆ ಶುಲ್ಕವನ್ನೂ ಪರಿಗಣಿಸುತ್ತಾರೆ.
ಸಿಇಟಿಯಲ್ಲಿ ಕಾಲೇಜು ಶುಲ್ಕ ಕಾಮೆಡ್-ಕೆಗಿಂತ ಕಡಿಮೆ ಇರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಸೀಟು ಆಯ್ಕೆಯಲ್ಲಿ ಸಿಇಟಿ ಕೋಟಾಕ್ಕೆ ಆದ್ಯತೆ ನೀಡುತ್ತಾರೆ, ಕಾಮೆಡ್-ಕೆ ಅನಂತರದ ಆಯ್ಕೆಯಾಗಿರುತ್ತದೆ. ಈ ಕಾರಣದಿಂದ ವಿದ್ಯಾರ್ಥಿಗಳು ಸಿಇಟಿ ಮತ್ತು ಕಾಮೆಡ್-ಕೆ ಎರಡೂ ಪರೀಕ್ಷೆಗಳನ್ನು ಬರೆದು, ಸಿಇಟಿಯಲ್ಲಿ ಸೀಟು ಸಿಗದಿದ್ದರೆ ಕಾಮೆಡ್-ಕೆ ಸೀಟು ಆಯ್ಕೆ ಮಾಡಿಕೊಳ್ಳುತ್ತಾರೆ.
ಕಾಮೆಡ್-ಕೆ ವೇಳಾಪಟ್ಟಿ ಪ್ರಕಟ
ಸರಕಾರ ಕೂಡ ಪ್ರತೀ ವರ್ಷ ಆಕಾಂಕ್ಷಿಗಳಿಗೆ ಸಮಸ್ಯೆಯಾಗಬಾರದು ಎಂಬ ಉದ್ದೇಶದಿಂದ ಸಿಇಟಿ ದಾಖಲಾತಿ ಪರಿಶೀಲನೆ ಮತ್ತು ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮೊದಲು ನಡೆಸುತ್ತದೆ. ಅನಂತರ ಕಾಮೆಡ್-ಕೆ ಈ ಪ್ರಕ್ರಿಯೆ ನಡೆಸುತ್ತದೆ. ಆದರೆ ಈ ಬಾರಿ ಈಗಾಗಲೇ ಕಾಮೆಡ್-ಕೆ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆ. 18ರಿಂದ ದಾಖಲಾತಿ ಪರಿಶೀಲನೆ ನಡೆಸಲಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ. 26ರಿಂದ ಆರಂಭವಾಗಲಿದೆ. ಆ. 30ಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದೆ. ಅಂದೇ ಮಧ್ಯಾಹ್ನ 1 ಗಂಟೆಯೊಳಗೆ ಮೊದಲ ಸುತ್ತಿನಲ್ಲಿ ಸೀಟು ಆಯ್ಕೆ ಮಾಡಿಕೊಳ್ಳದ ಅಭ್ಯರ್ಥಿಗಳು ಸೀಟುಗಳನ್ನು ವಾಪಸ್ ಮಾಡಬೇಕು ಎಂದು ಕಾಮೆಡ್-ಕೆ ತಿಳಿಸಿದೆ.
ಪರಿಸ್ಥಿತಿ ಹೀಗಿದ್ದರೂ ಸೆಪ್ಟಂಬರ್‌ನಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಿದ್ದೇವೆ ಎಂದು ಕೆಇಎ ತಿಳಿಸಿದೆ. ಜತೆಗೆ ಆ. 5ರಿಂದ ಆರಂಭವಾಗಬೇಕಿದ್ದ ದಾಖಲಾತಿ ಪರಿಶೀಲನೆಯನ್ನು ಕೂಡ ಮುಂದೂಡಿದೆ. ಅಷ್ಟರಲ್ಲಿ ಕಾಮೆಡ್- ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿರುತ್ತದೆ.
ಇದರಿಂದ ಸಿಇಟಿ ಸೀಟುಗಳನ್ನೇ ನಂಬಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅನಿವಾರ್ಯವಾಗಿ ಕಾಮೆಡ್-ಕೆ ಸೀಟು ಆಯ್ಕೆ ಮಾಡಿಕೊಳ್ಳಬೇಕಾದ ಸನ್ನಿವೇಶವನ್ನು ರಾಜ್ಯ ಸರಕಾರ ನಿರ್ಮಿಸಿದೆ.
ಖಾಸಗಿ ಲಾಬಿ:
ಹೆತ್ತವರ ಆರೋಪ
ಈ ಬಾರಿ ಖಾಸಗಿ ಕಾಲೇಜುಗಳ ಸೀಟುಗಳು ಭರ್ತಿಯಾದ ಅನಂತರ ಸರಕಾರ ಪ್ರವೇಶ ಪ್ರಕ್ರಿಯೆ ಆರಂಭಿಸಲಿದೆ. ಸರಕಾರ ಖಾಸಗಿ ಕಾಲೇಜುಗಳ ಲಾಬಿಗೆ ಮಣಿದಿದ್ದು, ಹೀಗಾಗಿ ಪ್ರಕ್ರಿಯೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಹೆತ್ತವರು ಮತ್ತು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವ್ಯತ್ಯಾಸವೇನು?
2022-23ನೇ ಸಾಲಿಗೆ ಸಿಇಟಿ ಕೋಟಾ ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಪ್ರವೇಶ ಶುಲ್ಕ 37 ಸಾವಿರ ರೂ. ನಿಗದಿ ಮಾಡಲಾಗಿದೆ. ಅದೇ ಸೀಟನ್ನು ಕಾಮೆಡ್-ಕೆ ಮೂಲಕ ಪಡೆದರೆ 1.58 ಲಕ್ಷ ರೂ. ಪಾವತಿಸಬೇಕಾಗುತ್ತದೆ. ಸರಕಾರದ ವಿಳಂಬ ನೀತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ಕಮರುವಂತಾ ಗಿದೆ ಎಂದು ಸೀಟು ಆಕಾಂಕ್ಷಿ ವಿದ್ಯಾರ್ಥಿನಿ ಸುಧಾ ಕಳವಳ ವ್ಯಕ್ತಪಡಿಸಿದ್ದಾರೆ.
-ಎನ್.ಎಲ್. ಶಿವಮಾದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.