ರಾಜ್ಯದಲ್ಲಿ ಶೀಘ್ರ ಬರಲಿದೆ “ಆರ್ ಆಂಡ್ ಡಿ ನೀತಿ’: ಸಿಎಂ
Team Udayavani, Nov 17, 2021, 10:30 PM IST
ಬೆಂಗಳೂರು: ರಾಜ್ಯದಲ್ಲಿ ಶೀಘ್ರ “ಸಂಶೋಧನೆ ಮತ್ತು ಅಭಿವೃದ್ಧಿ ನೀತಿ’ (ಆರ್ ಆಂಡ್ ಡಿ) ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಹಮ್ಮಿಕೊಂಡ ಮೂರು ದಿನಗಳ ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದ ಅವರು, “ಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳು, ಖಾಸಗಿ ಕಂಪನಿಗಳಲ್ಲಿ ಗ್ಯಾರೇಜ್ ಕೇಂದ್ರಿತ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ನೂತನ ನೀತಿಯು ಈ ಎಲ್ಲ ಅಂಶಗಳನ್ನೂ ಒಳಗೊಂಡಿರಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಉದ್ದಿಮೆಗಳ ಸ್ಥಾಪನೆಗೆ ಮೂಲಸೌಕರ್ಯ ಹಾಗೂ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲಾಗಿದೆ. ಈಗಾಗಲೇ ನಾವೀನ್ಯತೆಯಲ್ಲಿ ತೊಡಗಿರುವ ಕಂಪನಿಗಳಿಗೆ ಪ್ರೋತ್ಸಾಹ ಮತ್ತು ಹೊಸದಾಗಿ ತೊಡಗಿಕೊಳ್ಳುವವರಿಗೂ ಸರ್ಕಾರ ಅಗತ್ಯ ನೆರವು ನೀಡಲಾಗುವುದು ಎಂದರು.
ಇದನ್ನೂ ಓದಿ:ಹಲ್ಲೆ ನಡೆಸಿದವರಿಗೆ 1 ಲಕ್ಷ ರೂ.: ತಮಿಳು ನಟ ಸೂರ್ಯ ನಿವಾಸಕ್ಕೆ ಬಿಗಿ ಭದ್ರತೆ
ಕನ್ನಡ ಅಳವಡಿಕೆ; ಕಾನೂನು ಪರಿಶೀಲನೆ :
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡವನ್ನು ಉನ್ನತ ಶಿಕ್ಷಣದಲ್ಲಿ ಅಳವಡಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಬಹಳ ವರ್ಷಗಳಿಂದ ಇರುವ ಪ್ರಶ್ನೆ. ಕಾನೂನಿನ ಪರಿಶೀಲನೆಗೆ ಸರ್ಕಾರ ಅಗತ್ಯ ಕ್ರಮ ವಹಿಸಿದೆ ಎಂದಷ್ಟೇ ಹೇಳಿದರು.
ಬೆಂಗಳೂರು ಟೆಕ್ ಸಮಿಟ್ ಬಹಳ ದೊಡ್ಡ ಸಮಾವೇಶ. ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಗಣ್ಯರು ವರ್ಚುಯಲ್ ಆಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಹಲವಾರು ಕಂಪನಿಗಳು ಆರೋಗ್ಯ ಕ್ಷೇತ್ರ, ಕೃತಕ ಬುದ್ಧಿಮತ್ತೆ, ನವೀಕರಿಸಬಹುದಾದ ಇಂಧನ, ಏರೋಸ್ಪೇಸ್ ಸೇರಿದಂತೆ ಹೈಟೆಕ್ ತಂತ್ರಜ್ಞಾನದ ಕ್ಷೇತ್ರದಲ್ಲಿ ಆಸಕ್ತಿ ವಹಿಸಿವೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.