ಆಯೋಗದ ವರದಿ ಜಟಾಪಟಿ
Team Udayavani, Nov 16, 2017, 8:15 AM IST
ಸುವರ್ಣಸೌಧ: ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧಾರದ ಮೇಲೆ ಮೀಸಲು ಹಂಚಿಕೆ ಮಾಡುವ ಕುರಿತಂತೆ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ವಿಚಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಜಟಾಪಟಿಗೆ ಕಾರಣವಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ, ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಆರೋಪಿಸಿದರೆ, ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ಸದಾಶಿವ ಆಯೋಗದ ವರದಿಯ ಅಂಶಗಳನ್ನು ಮುಚ್ಚಿಟ್ಟು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಚಿವ ಆಂಜನೇಯ ಮತ್ತು ನರೇಂದ್ರಸ್ವಾಮಿ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪಕ್ಷದಲ್ಲಿರುವ ದಲಿತ ಸಮುದಾಯದ ಹಿರಿಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎನ್ನಲಾಗಿದೆ. ಸಂಸದ ಕೆ.ಎಚ್. ಮುನಿಯಪ್ಪ ಕೂಡ ಸದಾಶಿವ ಆಯೋಗದ ವರದಿ ಜಾರಿಯಾಗಬೇಕೆಂದು ಒತ್ತಾಯಿಸಲು ಶಾಸಕಾಂಗ ಸಭೆಗೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.
ಸದನಕ್ಕೆ ಹಾಜರಾಗಲು ಶಾಸಕರಿಗೆ ಸಿಎಂ ಸೂಚನೆ
ಬೆಳಗಾವಿಯಲ್ಲಿ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕೊನೆಯ ಆಧಿವೇಶನ ನಡೆಯುತ್ತಿರುವುದರಿಂದ ಮುಂದಿನ ಎಲ್ಲಾ ಕಲಾಪಗಳಲ್ಲಿ ಪಕ್ಷದ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಸಭೆಯಲ್ಲಿ ಸೂಚನೆ
ನೀಡಿದ್ದಾರೆ. ಶಾಸಕರು ಕಡ್ಡಾಯವಾಗಿ ಕಲಾಪಗಳಿಗೆ ಹಾಜರಾಗಿ ಪ್ರತಿಪಕ್ಷಗಳ ಟೀಕೆಗಳಿಗೆ ಸಮರ್ಥವಾಗಿ ತಿರುಗೇಟು ನೀಡಬೇಕು. ಸಚಿವ ಜಾರ್ಜ್ ವಿಷಯ ದಲ್ಲಿ ಪ್ರತಿಪಕ್ಷದವರು ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಕೇಂದ್ರ ಮತ್ತು ರಾಜ್ಯ ನಾಯಕರ
ವಿರುದ್ಧ ಅನೇಕ ಪ್ರಕರಣಗಳಿದ್ದು, ಇವುಗಳನ್ನು ಮುಂದಿಟ್ಟುಕೊಂಡು ಬಿಜೆಪಿಯವರ ಆರೋಪಗಳಿಗೆ ಪ್ರತ್ಯುತ್ತರ ನೀಡಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.