ಗ್ರಾಮ ಪಂಚಾಯತ್ ಚುನಾವಣೆಗೆ ಆಯೋಗ ಸಿದ್ಧತೆ; ಗುಂಪು ಪ್ರಚಾರ, ವಿಜಯೋತ್ಸವ ಮಾಡುವಂತಿಲ್ಲ!
ಎಸ್‌ಒಪಿ ಬಿಡುಗಡೆ
Team Udayavani, Sep 4, 2020, 6:24 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ ಪೀಡಿತರಿಗೂ ಸ್ಪರ್ಧೆಗೆ ಅವಕಾಶ, ಪ್ರಚಾರದ ವೇಳೆ ಅಭ್ಯರ್ಥಿ ಜತೆ 5 ಮಂದಿಗೆ ಮಾತ್ರ, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ, ಗೆದ್ದ ಮೇಲೆ ವಿಜಯೋತ್ಸವ ಆಚರಣೆ ಇಲ್ಲ… -ಇವು ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯ ಚುನಾವಣ ಆಯೋಗ ಬಿಡುಗಡೆ ಮಾಡಿರುವ ಪ್ರಮಾಣಿತ ಕಾರ್ಯನಿರ್ವಹಣ ವಿಧಾನ (ಎಸ್‌ಒಪಿ)ಯ ಕರಡು ಮಾರ್ಗಸೂಚಿಗಳು.
ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೋವಿಡ್ ನಿಯಂತ್ರಣಕ್ಕೆ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುತ್ತದೆ. ಅದರಂತೆ ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ತಜ್ಞರೊಂದಿಗೆ 2020ರ ಆ. 18ರಂದು ಚರ್ಚಿಸಿದ್ದು, ಅವರ ಸಲಹೆಗಳನ್ನು ಪರಿಗಣಿಸಿ ಎಸ್‌ಒಪಿ ರಚಿಸಲಾಗಿದೆ ಎಂದು ಆಯೋಗ ತಿಳಿಸಿದೆ.
ಪ್ರಮುಖ ಮಾರ್ಗಸೂಚಿಗಳು
ನಾಮಪತ್ರ ಸ್ವೀಕರಿಸುವ ಅಧಿಕಾರಿಗಳು ಮತ್ತು ಅಭ್ಯರ್ಥಿಗಳಿಗೆ ಸ್ಯಾನಿಟೈಸರ್ ಕಡ್ಡಾಯ.
ಮಾಸ್ಕ್ ಮತ್ತು ಕೈಗವಸು ಕಡ್ಡಾಯ. ಚುನಾವಣಾಧಿಕಾರಿ ಕಚೇರಿಯಲ್ಲಿ 6 ಅಡಿ ಅಂತರ ಕಾಯ್ದುಕೊಳ್ಳಬೇಕು.
ಸೋಂಕುಪೀಡಿತನಾಗಿದ್ದರೆ ಸೂಚಕರ ಮೂಲಕ ನಾಮಪತ್ರ ಸಲ್ಲಿಸಬಹುದು.
ಮತದಾನದ ದಿನ ಪುರುಷರು, ಮಹಿಳೆಯರ ಪ್ರತ್ಯೇಕ ಸರತಿ, ಸಾಮಾ ಜಿಕ ಅಂತರ ಇರಬೇಕು.
ಪ್ರಚಾರದ ವೇಳೆ ಗರಿಷ್ಠ 5 ಜನ ಮಾತ್ರ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಪ್ರಚಾರ ಉತ್ತಮ.
ಮುದ್ರಿತ ಕರಪತ್ರ ಹಂಚುವವರಿಗೆ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಕಡ್ಡಾಯ.
ಗುಂಪುಗುಂಪಾಗಿ ಪ್ರಚಾರ ಇಲ್ಲ. ಧ್ವನಿವರ್ಧಕ ಬಳಸುವಂತಿಲ್ಲ.
ಸೋಂಕುಪೀಡಿತ ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಚಾರ ಮಾಡಬಹುದು.
ಒಂದು ಮತಗಟ್ಟೆಗೆ ಗರಿಷ್ಠ 1 ಸಾವಿರ ಮತದಾರರು.
ಮತದಾನ ಮತ್ತು ಮತ ಎಣಿಕೆ ಕೊಠಡಿ ಸ್ಯಾನಿಟೈಸೇಶನ್ ಕಡ್ಡಾಯ.
ವಿಜೇತ ಅಭ್ಯರ್ಥಿಗಳಿಗೆ ದೃಢೀಕರಣ ಪತ್ರ ನೀಡುವಾಗ ಹಸ್ತಲಾಘವ ಇಲ್ಲ.
ವಿಜಯೋತ್ಸವ ಆಚರಿಸುವಂತಿಲ್ಲ.
ಪ್ರತ್ಯೇಕ ಮಾರ್ಗಸೂಚಿ
ಸೋಂಕುಪೀಡಿತರಿಗೂ ಮತ ಚಲಾಯಿಸುವ ಹಕ್ಕು ನೀಡಬೇಕಾಗಿ ರುವುದರಿಂದ ಆಸ್ಪತ್ರೆ ಅಥವಾ ಹೋಂ ಕ್ವಾರಂಟೈನ್‌ನಲ್ಲಿ ಇರುವರಿಗೆ ಅಂಚೆ ಮತಪತ್ರ ನೀಡುವ ಬಗ್ಗೆ ಅಯೋಗ ಪ್ರತ್ಯೇಕ ಆದೇಶ ಅಥವಾ ಮಾರ್ಗಸೂಚಿ ಹೊರಡಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.