ಕ್ಷುಲ್ಲಕ ಕಾರಣಕ್ಕೆ ಕ್ಯಾತಮಾರನಹಳ್ಳಿಯಲ್ಲಿ ಕೋಮು ಘರ್ಷಣೆ
Team Udayavani, Apr 21, 2018, 11:28 AM IST
ಮೈಸೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಮೈಸೂರಿನ ಸೂಕ್ಷ್ಮ ಪ್ರದೇಶವಾದ ಕ್ಯಾತಮಾರನಹಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಕಾಶ್ಮೀರದ ಕಥುವಾದಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಆಸಿಫಾ ಕೊಲೆ ಪ್ರಕರಣ ಖಂಡಿಸಿ ಸಮುದಾಯವೊಂದರ ಯುವಕರು ರ್ಯಾಲಿ ನಡೆಸುವ ವೇಳೆ ಅಂಗಡಿ ಮುಂಗಟ್ಟು ಬಂದ್ ಮಾಡಿಸಲು ಮುಂದಾದರು.
ಈ ವೇಳೆ ಮತ್ತೂಂದು ಸಮುದಾಯದ ಯುವಕರು ಆಕ್ಷೇಪಡಿಸಿದ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಕೆಲ ಹಿರಿಯರು ಎರಡೂ ಸಮುದಾಯಗಳ ಯುವಕರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ.
ಇದಾದ ಬಳಿಕ ರ್ಯಾಲಿಯಲ್ಲಿದ್ದ ಕೆಲ ಯುವಕರು ಸಮೀಪದ ಅಂಗಡಿಗೆ ನುಗ್ಗಿ ಅಂಗಡಿಯಲ್ಲಿದ್ದ ವಸ್ತುಗಳನ್ನು ಹೊರಗೆ ಎಸೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಅಂಗಡಿ ಮಾಲೀಕರು ಹಾಗೂ ಸ್ಥಳೀಯ ಯುವಕರು ರ್ಯಾಲಿ ನಡೆಸಿದ ಯುವಕರ ವಿರುದ್ಧ ತಿರುಗಿಬಿದ್ದಿದ್ದಾರೆ.
ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಎರಡೂ ಸಮುದಾಯಗಳ ಯುವಕರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಅಷ್ಟರಲ್ಲಾಗಲೇ ಗಲಾಟೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಎರಡೂ ಸಮುದಾಯಗಳ ಯುವಕರನ್ನು ಚದುರಿಸಿದ್ದಾರೆ.
ಕಲ್ಲು ತೂರಾಟ; ಲಾಠಿ ಪ್ರಹಾರ: ಈ ನಡುವೆ ಸಂಜೆ ವೇಳೆಗೆ ಸಂಸದ ಪ್ರತಾಪ್‌ಸಿಂಹ ಕ್ಯಾತಮಾರನಹಳ್ಳಿ ಬಡಾವಣೆಗೆ ಭೇಟಿ ನೀಡಿದ ವೇಳೆ ಯುವಕರ ಗುಂಪೊಂದು ಕಲ್ಲುತೂರಾಟ ನಡೆಸಲು ಮುಂದಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಮನಗಂಡ ಪೊಲೀಸರು ಕೂಡಲೇ ಲಾಠಿ ಪ್ರಹಾರ ನಡೆಸಿ ಚದುರಿಸಿದ್ದಾರೆ.
ಇದಾದ ಬಳಿಕ ಮತ್ತೂಂದು ಯುವಕರ ಗುಂಪು ಜನೌಷಧಿ ಕೇಂದ್ರದ ಮೇಲೆ ದಾಳಿ ಮಾಡಿದ್ದಲ್ಲದೇ, ಮಳಿಗೆಯಲ್ಲಿದ್ದ ಔಷಧಿ ದಾಸ್ತಾನನ್ನು ಹೊರಗೆ ಎಸೆದಿದೆ. ಈ ವೇಳೆ ಪೊಲೀಸರು ಮತ್ತೂಂದು ಸುತ್ತಿನ ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದರು. ಪ್ರತಿ ನಿಮಿಷಕ್ಕೂ ಇಲ್ಲಿನ ವಾತಾವರಣ ಬದಲಾಗುತ್ತಿರುವುದನ್ನು ಕಂಡ ಪೊಲೀಸರು ಕೂಡಲೇ ಹೆಚ್ಚಿನ ಪಡೆಯನ್ನು ಸ್ಥಳಕ್ಕೆ ಕರೆಸಿಕೊಂಡು ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ.
ಬೂದಿ ಮುಚ್ಚಿದ ಕೆಂಡ: ಸದ್ಯಕ್ಯಾತಮಾರನಹಳ್ಳಿಯಲ್ಲಿ ಪರಿಸ್ಥತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರು ಹೆಚ್ಚನ ನಿಗಾ ವಹಿಸಿದ್ದಾರೆ. ಸ್ಥಳೀಯ ಪೊಲೀಸರೊಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅರೆಸೇನಾ ಪಡೆ, ಕ್ಷಿಪ್ರ ಕಾರ್ಯಪಡೆ ಪೊಲೀಸರನ್ನೂ ಕೂಡ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ನಿಷೇದಾಜ್ಞೆ ಜಾರಿ: ಪರಿಸ್ಥಿತಿ ಬಿಗುವಿನಿಂದ ಕೂಡಿರುವ ಹಿನ್ನೆಲೆಯಲ್ಲಿ ಎನ್.ಆರ್. ಕ್ಷೇತ್ರದಾದ್ಯಂತ ಮುಂದಿನ 48 ಗಂಟೆಗಳ ಕಾಲ ನಿಷೇದಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಸುಬ್ರಮಣ್ಯೇಶ್ವರರಾವ್ ಅವರು ಆದೇಶ ಹೊರಡಿಸಿದ್ದಾರೆ.
ಪೊಲೀಸರ ಮೇಲೆ ಕಲ್ಲುತೂರಾಟ: ಸಮುದಾಯವೊಂದರ ಉದ್ರಿಕ್ತ ಯುವಕರ ಗುಂಪು ಒಂದು ಹಂತದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ವಿಜಯನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅನಿಲ್‌ಕುಮಾರ್ ಅವರಿಗೆ ತೀವ್ರ ಪೆಟ್ಟಾಗಿದೆ. 5ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ.
ಶಾಂತಿಯುತವಾದ ಎನ್.ಆರ್. ಕ್ಷೇತ್ರದಲ್ಲಿ ಕೆಲ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಎರಡು ಸಮುದಾಯಗಳ ನಡುವೆ ಸಂಘರ್ಷ ಮೂಡಿಸುವ ಕೆಲಸ ಮಾಡಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು. ಪೊಲೀಸರು ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.
-ತನ್ವೀರ್ ಸೇಠ್, ಸಚಿವ
ಶಾಂತಿಯುತವಾಗಿದ್ದ ಮೈಸೂರಿನಲ್ಲಿ ಕೋಮು ಸಂಘರ್ಷ ಹುಟ್ಟು ಹಾಕುವ ಮೂಲಕ ಚುನಾವಣೆಯ ಲಾಭ ಪಡೆಯುವ ತಂತ್ರ ಇದಾಗಿದೆ. ಗಲಾಟೆ ಹಿಂದೆ ಸಂಘಟನೆಯೊಂದರ ಕೈವಾಡವಿದೆ. ರಾಜ್ಯ ಸರ್ಕಾರ ಕೆಲ ಪ್ರಕರಣಗಳಲ್ಲಿ ಸಂಘಟನೆಯೊಂದರ ಸದಸ್ಯರ ಮೇಲಿನ ಪ್ರಕರಣ ಹಿಂಪಡೆದಿರುವುದು ಈ ರೀತಿಯ ಕೃತ್ಯಕ್ಕೆ ಪರೋಕ್ಷ ಬೆಂಬಲ ನೀಡಿದಂತಾಗಿದೆ.
-ಪ್ರತಾಪ್ ಸಿಂಹ, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.