![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 26, 2022, 9:39 PM IST
ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ಜತೆಗೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ.
ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದಿದ್ದಾರೆ.
ಆದರೆ, ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು (ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂತ್, ಕೈ ಗಡಿಯಾರ), ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು (ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ, ಕ್ಯಾಲ್ಕುಲೇಟರ್, ಲಾಗ್ ಟೇಬಲ್) ಮತ್ತು ವೈಯಕ್ತಿಕ ವಸ್ತುಗಳನ್ನು (ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳು) ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಿಗದಿತ ವಸ್ತ್ರ ಸಂಹಿತೆ ಕಡ್ಡಾಯ
ಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳಿಗೆ ಕೋವಿಡ್ ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆಯಲ್ಲಿ ಅರೆಪಾರದರ್ಶಕ ಸರ್ಜಿಕಲ್ ಮಾಸ್ಕ್ (ಎನ್ 95 ಮತ್ತು ಇತರ ಬಗೆಯ ಮಾಸ್ಕ್ ನಿಷಿದ್ಧ) ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯಗೊಳಿಸಲಾಗಿದೆ. ಹಾಗೆಯೇ, ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ.
ಪುರುಷರಾಗಲಿ, ಮಹಿಳೆಯರಾಗಲಿ ತುಂಬುದೋಳಿನ ಉಡುಪು, ಶೂ, ಆಭರಣ (ಪದಕ, ಮೂಗುಬೊಟ್ಟು, ಕಿವಿಯೋಲೆ, ನೆಕ್ಲೇಸ್, ಬ್ರೇಸ್ಲೆಟ್) ಮತ್ತು ಆಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಲಾಗಿದೆ.
ಅಭ್ಯರ್ಥಿಗಳಿಗೆ ಯಾವುದೇ ಬ್ರ್ಯಾಂಡ್ ನ ಹೆಸರಿಲ್ಲದ ಸಾದಾ ಬಾಟಲಿಯಲ್ಲಿ ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.