ಕೊಲೆ ಪ್ರಕರಣದ ಹೋರಾಟಗಾರನಿಗೆ ಜೀವಬೆದರಿಕೆ : ರೆಡ್ಡಿ ವಿರುದ್ಧ ದೂರು
Team Udayavani, Jun 3, 2017, 4:21 PM IST
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ವಿರುದ್ಧ ಕೊಲೆ ಬೆದರಿಕೆ ಹಾಕಿದ ದೂರು ದಾಖಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯೆ ಪದ್ಮಾವತಿ ಯಾದವ್ ಕೊಲೆ ಪ್ರಕರಣದ ಹೋರಾಟ ನಡೆಸುತ್ತಿರುವ ದೂರುದಾರ ಸುಬ್ಬರಾಯುಡು ಅವರು ಜೀವ ಬೆದರಿಕೆ ಒಡ್ಡಿದ ಕುರಿತು ಬಳ್ಳಾರಿ ಎಸ್ಪಿ ಆರ್.ಚೇತನ್ ಹಾಗೂ ಐಜಿಪಿ ಮುರುಗನ್ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ.
2010 ರ ಫೆಬ್ರವರಿಯಲ್ಲಿ ನಡೆದ ಪದ್ಮಾವತಿ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಹೋದರ ಸುಬ್ಬರಾಯುಡು ಅವರು ಸಿಬಿಐ ತನಿಖೆಗೆ ಹೋರಾಟ ನಡೆಸುತ್ತಿದ್ದರು. ಈ ಹಿನ್ನಲೆಯಲ್ಲಿ ರೆಡ್ಡಿ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಲೆ ಪ್ರಕರಣವನ್ನು ಸಿಐಡಿ ತನಿಖೆ ನಡೆಸಿತ್ತು, ಸಾಕ್ಷಾಧಾರಗಳ ಕೊರತೆಯಿಂದ ಪ್ರಕರಣವನ್ನು ಅಂತ್ಯಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.