ರೈಲ್ವೆ ಯೋಜನೆ ಸಕಾಲದಲ್ಲಿ ಪೂರ್ಣಗೊಳಿಸಿ
Team Udayavani, Jun 8, 2019, 3:00 AM IST
ಹುಬ್ಬಳ್ಳಿ: ಕರ್ನಾಟಕದಲ್ಲಿ ಬಾಕಿ ಉಳಿದಿರುವ ರೈಲ್ವೆ ಯೋಜನೆ, ಕಾಮಗಾರಿಗಳ ಕುರಿತು ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ ಅಂಗಡಿ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ನವದೆಹಲಿಯ ರೈಲ್ವೆ ಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ರೈಲ್ವೆ ಮಂಡಳಿ ಅಭಿಯಂತರ ಸದಸ್ಯ ವಿಶ್ವೇಶ ಚೌಬೆ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಪುಣೆ-ಮಿರಜ್-ಲೋಂಡಾ ಹಾಗೂ ಹುಬ್ಬಳ್ಳಿ-ದಾವಣಗೆರೆ-ತುಮಕೂರು ನಡುವೆ ಮಂಜೂರಾದ ರೈಲ್ವೆ ಜೋಡು ಮಾರ್ಗ ಕಾಮಗಾರಿ ಯಾವ ಹಂತದಲ್ಲಿದೆ ಎಂಬ ಮಾಹಿತಿ ಪಡೆದುಕೊಂಡರು.
ಅಲ್ಲದೆ, ಈ ಕಾಮಗಾರಿಗಳನ್ನು 2020ರೊಳಗೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯ ಹಾಗೂ ಕೇಂದ್ರ ಸಹಭಾಗಿತ್ವದ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಪಡೆದು, ಯೋಜನೆ ತ್ವರಿತ ಪೂರ್ಣಕ್ಕೆ ಸೂಚಿಸಿದರು.
ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಪ್ರಗತಿ ಕುರಿತು ಮಾಹಿತಿ ಪಡೆದ ಸಚಿವರು, ಅರಣ್ಯ ಇಲಾಖೆಯಿಂದ ಪರವಾನಗಿ ಸೇರಿ ಅಗತ್ಯ ಕ್ರಮ ಕೈಗೊಂಡು ಯೋಜನೆ ಪೂರ್ಣಕ್ಕೆ ಶ್ರಮಿಸುವಂತೆ ಸೂಚಿಸಿದರು. ಸಭೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸಂಸದ ಪಿ.ಸಿ.ಮೋಹನ, ರೈಲ್ವೆ ಇಲಾಖೆಯ ಅಧಿಕಾರಿಗಳು ಇದ್ದರು ಎಂದು ನೈಋತ್ಯ ರೈಲ್ವೆ ವಲಯ ಕಚೇರಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.