ಕಾರಾಗೃಹಗಳ ಸ್ಥಿತಿಗತಿ: ಅಸಮಾಧಾನ
Team Udayavani, Nov 27, 2019, 3:05 AM IST
ಬೆಂಗಳೂರು: ರಾಜ್ಯದ ಕೇಂದ್ರ, ಜಿಲ್ಲಾ ಹಾಗೂ ತಾಲೂಕು ಕಾರಾಗೃಹಗಳಲ್ಲಿ ಮಂಜೂರಾದ ವಿವಿಧ ವೃಂದದ ಹುದ್ದೆ, ನೇಮಕಗೊಂಡ ಹಾಗೂ ಖಾಲಿ ಹುದ್ದೆ ಸೇರಿ ಅಲ್ಲಿನ ವ್ಯವಸ್ಥೆ ಮತ್ತು ಸೌಲಭ್ಯ ಕುರಿತು ಡಿ.16ರೊಳಗೆ ಸಮಗ್ರ ಮಾಹಿತಿ ಒದಗಿಸುವಂತೆ ಹೈಕೋರ್ಟ್ ಆದೇಶಿಸಿದೆ.
ನಿರ್ದೇಶನ ನೀಡಿ: ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಂಖ್ಯೆಯಲ್ಲಿ ಕೈದಿಗಳನ್ನು ಇರಿಸುವುದು, ಜೈಲು ಸಿಬ್ಬಂದಿ ನೇಮಕಾತಿ, ಅಲ್ಲಿನ ವ್ಯವಸ್ಥೆ ಹಾಗೂ ಮೂಲ ಸೌಕರ್ಯ ಕುರಿತು ಆಯಾ ರಾಜ್ಯ ಸರ್ಕಾರಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕೆಂದು 2018ರ ಮೇ 8ರಂದು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಈ ಆದೇಶ ನೀಡಲಾಗಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ಅರ್ಜಿ ವಿಚಾರಣೆಗೆ ಬಂದಿತ್ತು. ಕಳೆದ ಸೆ.24ರಂದು ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ರಾಜ್ಯದ ಕಾರಾಗೃಹಗಳ ಸಂಖ್ಯೆ ಎಷ್ಟು? ಅಲ್ಲಿನ ಕೈದಿಗಳ ಸಂಖ್ಯಾ ಸಾಮರ್ಥ್ಯ ಎಷ್ಟು? ಸದ್ಯ ಎಷ್ಟು ಕೈದಿಗಳಿದ್ದಾರೆ. ಶೌಚಾಲಯ, ಕುಡಿಯುವ ನೀರು, ವೈದ್ಯಕೀಯ ವ್ಯವಸ್ಥೆ ಸೇರಿ ಮೂಲಸೌಕರ್ಯಗಳ ಸ್ಥಿತಿಗತಿ ಹೇಗಿದೆ.
ಮಹಿಳಾ ಕೈದಿಗಳ ಮಕ್ಕಳ ಆರೈಕೆಗೆ ಏನೆಲ್ಲಾ ವ್ಯವಸ್ಥೆಯಿದೆ. ಕೈದಿಗಳನ್ನು ಭೇಟಿ ಮಾಡಲು ಬರುವ ಸಂಬಂಧಿ ಕರಿಗೆ ಒದಗಿಸುತ್ತಿರುವ ಸೌಲಭ್ಯಗಳೇನು ಎಂಬುದರ ಬಗ್ಗೆ ನ.22ರೊಳಗೆ ಸಮಗ್ರ ಮಾಹಿತಿ ನೀಡಬೇಕೆಂದು ಆದೇಶಿಸಿ ವಿಚಾರಣೆಯನ್ನು ನ.26ಕ್ಕೆ ಮುಂದೂಡಿತ್ತು.
ಆದರೆ, ನ.26ರಂದು ಅರ್ಜಿ ವಿಚಾರಣೆ ಬಂದಾಗ ಕೋರ್ಟ್ ಆದೇಶದಂತೆ ಮಾಹಿತಿ ಸಲ್ಲಿಸದ ಸರ್ಕಾರದ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಸೆ.24ರಂದು ನೀಡಿದ್ದ ಆದೇಶದಂತೆ ಡಿ.16ರೊಳಗೆ ಸಮಗ್ರ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅದೇ ರೀತಿ ಜು.4ರಂದು ನೀಡಿದ ಆದೇಶದ ಅನುಪಾಲನಾ ವರದಿಯನ್ನೂ ಸಲ್ಲಿಸಬೇಕೆಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಸರ್ಕಾರ ಏನು ಹೇಳಿತ್ತು?: ರಾಜ್ಯದಲ್ಲಿ ಕೇಂದ್ರ, ಜಿಲ್ಲಾ, ತಾಲೂಕು ಹಾಗೂ ಬಯಲು ಬಂದೀಖಾನೆ ಸೇರಿ 60 ಕಾರಾಗೃಹಗಳಲ್ಲಿ 13,622 ಕೈದಿಗಳ ಸಾಮರ್ಥ್ಯ ವಿದ್ದು, ಸದ್ಯ 15,257 ಕೈದಿಗಳಿದ್ದಾರೆ. ಒಟ್ಟು ಸಾಮರ್ಥ್ಯಕ್ಕಿಂತ 1,635 ಕೈದಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದರಲ್ಲಿ 2019ರ ಜು.22ರವರೆಗಿನ ಮಾಹಿತಿಯಂತೆ 14,616 ಪುರುಷ ಹಾಗೂ 641 ಮಹಿಳೆ ಸೇರಿ ಒಟ್ಟು 15,257 ಕೈದಿಗಳಿದ್ದಾರೆ.
9 ಕೇಂದ್ರ ಕಾರಾಗೃಹಗಳ ಸಾಮರ್ಥ್ಯ 7,817 ಇದ್ದರೆ, ಸದ್ಯ 10,397 ಕೈದಿಗಳಿದ್ದಾರೆ. ಬೆಂಗಳೂರು, ಮಂಗಳೂರು, ಹಾಸನ ಮತ್ತು ಬೀದರ್ ಜಿಲ್ಲೆಯಲ್ಲಿ ಹೊಸ ಕೇಂದ್ರ ಕಾರಾಗೃಹ ಸ್ಥಾಪಿಸಲಾಗುತ್ತಿದೆ ಎಂದು ಈ ಹಿಂದೆ ಸಲ್ಲಿಸಿದ ಪ್ರಮಾಣಪತ್ರಗಳಲ್ಲಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.