ಎಸ್.ಕೆ.ಭಗವಾನ್ ನಿಧನ: ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಸೇರಿ ಹಲವರಿಂದ ಸಂತಾಪ
Team Udayavani, Feb 20, 2023, 11:39 AM IST
ಬೆಂಗಳೂರು: ಕನ್ನಡದ ಮೇರು ಪ್ರತಿಭೆ ಎಸ್.ಕೆ.ಭಗವಾನ್ ಅವರ ನಿಧನಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳೆತೆರೆಯನ್ನು ಶ್ರೀಮಂತಗೊಳಿಸಿದ್ದ ಕನ್ನಡದ ಹಿರಿಮೆಯೂ ಆಗಿದ್ದ ಶ್ರೀನಿವಾಸ ಕೃಷ್ಣ ಅಯ್ಯಂಗಾರ್ (ಎಸ್.ಕೆ.ಭಗವಾನ್) ಅವರ ನಿಧನ ಅತ್ಯಂತ ಬೇಸರ ತರಿಸಿದೆ.
ನನ್ನ ಆತ್ಮೀಯರೂ ಆಗಿದ್ದ ಇವರನ್ನು ನಾನಾ ಸಂದರ್ಭಗಳಲ್ಲಿ ಭೇಟಿಯಾಗುವ ಅವಕಾಶ ಹತ್ತಾರು ಬಾರಿ ಒದಗಿ ಬಂದಿತ್ತು. 90 ವರ್ಷ ವಯಸ್ಸಿನ ಇವರು ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರು. ಕನ್ನಡ ರಂಗಭೂಮಿ ಮೂಲಕ ಸಿನಿಮಾ ರಂಗ ಪ್ರವೇಶಿಸಿ ಬೆಳ್ಳಿ ಪರದೆಯನ್ನು ಶ್ರೀಮಂತಗೊಳಿಸಿದ ಭಗವಾನ್ ಅವರು ತಮ್ಮ 65 ವರ್ಷಗಳ ಸುದೀರ್ಘ ಸಿನಿಮಾ ಸಾಹಸಗಳಲ್ಲಿ 28ಕ್ಕೂ ಹೆಚ್ಚು ಕನ್ನಡ ಕಾದಂಬರಿಗಳನ್ನು ಬೆಳ್ಳಿ ಪರದೆಗೆ ತಂದ ಕೀರ್ತಿ ಹೊಂದಿದ್ದಾರೆ.
ಭಗವಾನ್ ನಿರ್ದೇಶನದಲ್ಲಿ ಅರಳಿದ “ಕಸ್ತೂರಿ ನಿವಾಸ, ಸಂಧ್ಯಾರಾಗ, ಬಯಲುದಾರಿ, ಹೊಸ ಬೆಳಕು, ಬೆಂಕಿಯ ಬಲೆ…” ಮುಂತಾದ ಹಲವು ಸಿನಿಮಾಗಳು ಈಗಲೂ ನನ್ನ ನೆನಪಿನಲ್ಲಿ ಉಳಿದಿವೆ. ಸಿನಿಮಾ ನಿರ್ದೇಶನಕ್ಕೆ ಪೂರ್ಣವಿರಾಮ ಹಾಕಿದ ಬಳಿಕ “ಆದರ್ಶ ಸಿನಿಮಾ ಇನ್ಸ್ಟಿಟ್ಯೂಟ್”ನ ಪ್ರಾಂಶುಪಾಲರಾಗಿ ಇವರು ತಮ್ಮ ತಿಳಿವಳಿಕೆ, ಜ್ಞಾನ ಮತ್ತು ಅನುಭವವನ್ನು ಹೊಸ ತಲೆಮಾರಿನ ಕಲಾಸಕ್ತರಿಗೂ ವರ್ಗಾಯಿಸುವ ಮೂಲಕ ಕನ್ನಡದ ಜ್ಞಾನವನ್ನು ಹೆಚ್ಚಿಸಿದ್ದಾರೆ ಎಂದು ಪ್ರಾರ್ಥಿಸುತ್ತೇನೆ.
ತಮ್ಮ ಕಲಾ ಶ್ರೀಮಂತಿಕೆಯ ಕಾರಣಕ್ಕೆ ಭಗವಾನ್ ಅವರು ಕನ್ನಡ ಭಾಷೆ ಇರುವವರೆಗೂ ಕನ್ನಡ ಮಣ್ಣಿನಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎಂದು ಹೇಳುತ್ತಾ ಹಿರಿಯ ಪ್ರತಿಭೆಗೆ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆ ಎಂದಿದ್ದಾರೆ.
ಸಿಎಂ ಬೊಮ್ಮಾಯಿ ಸಂತಾಪ:
ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ದೊರೈ-ಭಗವಾನ್ ಜೋಡಿಯು ಕನ್ನಡ ಚಿತ್ರರಂಗಕ್ಕೆ ಅನೇಕ ಸದಭಿರುಚಿಯ ಚಿತ್ರಗಳನ್ನು ನೀಡಿದೆ. ಡಾ. ರಾಜ್ ಕುಮಾರ್ ನಟನೆಯ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್ ಜೊತೆ ಸೇರಿ ನಿರ್ದೇಶಿಸಿದ್ದರು. ಓಂ ಶಾಂತಿಃ ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.