ಇಂದು ಕೇಂದ್ರ ಸರ್ಕಾರಿ ವಕೀಲರಿಂದ ರಾಷ್ಟ್ರೀಯ ಭದ್ರತೆ ಕುರಿತ ಸಮ್ಮೇಳನ
Team Udayavani, Dec 16, 2017, 10:15 AM IST
ಬೆಂಗಳೂರು: ರಾಷ್ಟ್ರೀಯ ಭದ್ರತೆಗೆ ವಿವಿಧೆಡೆಗಳಿಂದ ಉಂಟಾಗುತ್ತಿರುವ ಬೆದರಿಕೆಗಳನ್ನು ಕಾನೂನಾತ್ಮಕವಾಗಿ ಬಗೆಹರಿಸುವ ಕುರಿತಂತೆ ದಕ್ಷಿಣ ಭಾರತದ ಕೇಂದ್ರ ಸರ್ಕಾರಿ ವಕೀಲರಿಂದ ಶನಿವಾರ ನಗರದಲ್ಲಿ “ರಾಷ್ಟ್ರೀಯ ಭದ್ರತೆ- ನಮ್ಮ ಆದ್ಯತೆಗಳು’ ಕುರಿತ ವಿಚಾರ ಸಂಕಿರಣ ನಡೆಯಲಿದೆ.
ಅರಮನೆ ರಸ್ತೆಯಲ್ಲಿರುವ ಹೋಟೆಲ್ ಶಾಂಗ್ರಿಲಾದಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಬೆಳಗ್ಗೆ 10.30ಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಜಂಟಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಮಾರೋಪ
ಭಾಷಣ ಮಾಡಲಿದ್ದು, ಅಡಿಷನಲ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಐದು ರಾಜ್ಯಗಳನ್ನು ಪ್ರತಿನಿಧಿಸುವ ಅಡಿಷನಲ್ ಸಾಲಿಸಿಟರ್ ಜನರಲ್, ಅಸಿಸ್ಟೆಂಟ್ ಸಾಲಿಸಿಟರ್ ಜನರಲ್‌ಗಳು ಸೇರಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ 250ಕ್ಕೂ ಹೆಚ್ಚು ವಕೀಲರು ಭಾಗವಹಿಸಲಿದ್ದಾರೆ.
ಐಸಿಸ್ ಸೇರಿ ವಿದೇಶಿ ಭಯೋತ್ಪಾದಕ ಸಂಘಟನೆಗಳು, ಸೈಬರ್ ಮತ್ತಿತರೆ ಬೌದ್ಧಿಕತೆಗೆ ಸಂಬಂಧಿಸಿದ ಭಯೋತ್ಪಾದನೆ, ಆರ್ಥಿಕ
ಭಯೋತ್ಪಾದನೆ ಮುಂತಾದ ವಿಚಾರಗಳಲ್ಲಿ ನ್ಯಾಯಾಂಗ ವ್ಯವಸ್ಥೆ ಯಾವ ರೀತಿ ದೇಶದ ಭದ್ರತೆಗೆ ಸಹಕರಿಸಬೇಕು? ಕಾನೂನಿನ ಮೂಲಕ ದೇಶದ ಸುರಕ್ಷತೆಗೆ ಹೇಗೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬಿತ್ಯಾದಿ ಅಂಶಗಳ ಬಗ್ಗೆ ವಕೀಲರು ಚರ್ಚೆ
ನಡೆಸಲಿದ್ದಾರೆ.
ಪ್ರತಿಯೊಬ್ಬ ಪ್ರಜೆಗೂ ದೇಶದ ಭದ್ರತೆ, ಸುರಕ್ಷತೆ ಆದ್ಯತೆಯಾಗಿರುತ್ತದೆಯೋ ಅದೇ ರೀತಿ ನ್ಯಾಯಾಂಗ ಕ್ಷೇತ್ರದಲ್ಲಿ ಕೆಲಸ ಮಾಡುವ ವಕೀಲರಿಗೂ ಆದ್ಯತೆಯಾಗುತ್ತದೆ. ರಾಷ್ಟ್ರೀಯ ಭದ್ರತೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಆ ಕುರಿತಂತೆ
ನ್ಯಾಯಾಲಯಗಳಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ವಕೀಲರು ಹೆಚ್ಚು ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿಚಾರ ಸಂಕಿರಣದಲ್ಲಿ ಚರ್ಚೆಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.
ರಾಷ್ಟ್ರೀಯ ಭದ್ರತೆ ಪ್ರತಿಯೊಬ್ಬನ ಆದ್ಯ ಕರ್ತವ್ಯ. ಈ ನಿಟ್ಟನಲ್ಲಿ ಕಾನೂನಿನ ಮೂಲಕ ದೇಶದ ಭದ್ರತೆಯನ್ನು ಯಾವ ರೀತಿ
ಕಾಪಾಡಿಕೊಳ್ಳಬಹುದು ಎಂಬ ಬಗ್ಗೆ ವಿಚಾರ ಸಂಕಿರಣದಲ್ಲಿ ಚರ್ಚೆ ನಡೆಯಲಿದೆ. ಜತೆಗೆ ಭಯೋತ್ಪಾದಕ ಚಟುವಟಿಕೆಗಳನ್ನು ತಡೆಗಟ್ಟುವ ಕುರಿತು ಕಾನೂನಾತ್ಮಕ ಚಿಂತನೆ ಮಾಡಲಾಗುವುದು.
●ಕೆ.ಎಂ.ನಟರಾಜ್, ಅಡಿಷನಲ್ ಸಾಲಿಸಿಟರ್ ಜನರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.