ಶಾಸಕರನ್ನು ಒಬ್ಬೊಬ್ಬರನ್ನೇ ಕರೆಯುವ ದುಸ್ಥಿತಿ ಕಾಂಗ್ರೆಸ್‌ಗೆ ಬಂದಿದೆ!
Team Udayavani, Jan 18, 2019, 12:25 PM IST
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿತ ಸಮಯಕ್ಕಿಂತ ತಡವಾಗಿ ಆರಂಭವಾದದ್ದು ಮತ್ತು 4 ಶಾಸಕರ ಗೈರಿನ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಅವರು ಲೇವಡಿ ಮಾಡಿದ್ದು, ಇದು ಕಾಂಗ್ರೆಸ್‌ನ ದುಸ್ಥಿತಿ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ ಯಾವ ದುಸ್ಥಿತಿ ಗೆ ಕಾಂಗ್ರೆಸ್ ಬಂದು ತಲುಪಿದೆ,ಪಕ್ಷದಲ್ಲಿ ಒಮ್ಮತ ಎಷ್ಟಿದೆ ,ಅತೃಪ್ತಿ ಅಸಮಾಧಾನ ಎಷ್ಟಿದೆ ಎನ್ನುವುದಕ್ಕೆ ಈ ಸಭೆ ಸಾಕ್ಷಿಯಾಗಿದೆ ಎಂದರು.
ನಮ್ಮ ಬಗ್ಗೆ ಟೀಕೆ ಮಾಡುತ್ತಿರಲ್ಲಾ, ನೀವು ಈಗಲಾದರೂ ರಾಜ್ಯದ ಆಡಳಿತದ ಕಡೆ ಗಮನ ಕೊಡಿ ಎಂದು ಸಿದ್ದರಾಮಯ್ಯ ಮತ್ತು ಕೆ.ಸಿ.ವೇಣುಗೋಪಾಲ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
ನಾವು ವಿರೋಧ ಪಕ್ಷವಾಗಿ ಕೈ ಕಟ್ಟಿ ಕೂರುವುದಿಲ್ಲ ಹೋರಾಟಕ್ಕಿಳಿಯುತ್ತಿವೆ ಎಂದರು.
2008 ರಲ್ಲಿ ಆಪರೇಷನ್ ಸಂಸ್ಕೃತಿ ಆರಂಭಿಸಿದ್ದು ನಾನು ಎಂದು ಸಿದ್ದರಾಮಯ್ಯ ಹೇಳುತ್ತಾರೆ . ಇತಿಹಾಸ ನೋಡಿದರೆ 1967 ರಲ್ಲಿ ಆಯಾರಾಂ , ಗಯಾರಾಂ ಸಂಸ್ಕೃತಿ ಆರಂಭಿಸಿದ್ದು ಕಾಂಗ್ರೆಸ್ ಪಕ್ಷ , ಹರಿಯಾಣದಲ್ಲೂ 34 ಜನತಾ ಪಕ್ಷದ ಶಾಸಕರನ್ನು ಕಾಂಗ್ರೆಸ್ ಸೆಳೆದಿತ್ತು. ರಾಜಕೀಯ ಇತಿಹಾಸ ಓದಿಕೊಳ್ಳುವುದು ಒಳ್ಳೆಯದು. ಸಿದ್ದರಾಮಯ್ಯ ಕೂಡ ಆಪರೇಷನ್ ಸಂಸ್ಕೃತಿಯಿಂದ ಕಾಂಗ್ರೆಸ್‌ಗೆ ಸೇರಿಕೊಂಡಿರುವರೇ ಆಗಿದ್ದಾರೆ ಎಂದು ತಿರುಗೇಟು ನೀಡಿದರು.
ನಮಗಿರುವ ಚಿಂತೆ ಬೇರೇನು ಅಲ್ಲ ಈ ಮೈತ್ರಿ ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡುತ್ತಿಲ್ಲ. ಸಚಿವರು ಪ್ರವಾಸ ಮಾಡುತ್ತಿಲ್ಲ. ಬರ ವಿಪರೀತವಾಗಿದೆ, ಜನರು ವಲಸೆ ಹೋಗುತ್ತಿದ್ದಾರೆ. ಉದ್ಯೋಗಳು ಸಿಗುತ್ತಿಲ್ಲ , ಇನ್ನಾದರೂ ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಿ ಎಂದರು.
ತಡವಾಗಿ ಆರಂಭವಾದ ಸಿಎಲ್‌ಪಿ ಸಭೆ; ನಾಲ್ವರು ಗೈರು
3.30 ಕ್ಕೆ ನಿಗದಿಯಾದ ಶಾಸಕಾಂಗ ಪಕ್ಷದ ಸಭೆ ತಡವಾಗಿ ಅಂದರೆ 5.30 ಕ್ಕೆ ಆರಂಭವಾಗಿದೆ. ಸಭೆಗೆ ನಾಲ್ವರು ಬಂಡಾಯ ಶಾಸಕರು ಗೈರಾಗಿದ್ದಾರೆ. ಚಿಂಚೋಳಿ ಶಾಸಕ ಡಾ.ಉಮೇಶ್ ಯಾದವ್, ಅಥಣಿಯ ಮಹೇಶ್ ಕಮಟಳ್ಳಿ , ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಗೋಕಾಕ್‌ನ ರಮೇಶ್ ಜಾರಕಿಹೊಳಿ ಅವರು ಗೈರಾಗಿದ್ದಾರೆ.
ಬಿ.ಸಿ.ಪಾಟೀಲ್ ಹಾಜರು, ತುರ್ತು ನಿರ್ಗಮನ
ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅವರು ಸಭೆಗೆ ಆಗಮಿಸಿ ತುರ್ತಾಗಿ ನಿರ್ಗಮಿಸಿದರು. ಮಗಳ ಮದುವೆ ಇದೆ ಸಿದ್ದರಾಮಯ್ಯ ಅವರಿಗೆ ತಿಳಿಸಿ ಸಭೆಯಿಂದ ತೆರಳುತ್ತಿದ್ದೇನೆ.ನನಗೆ ಬಿಜೆಪಿಯ ಯಾರೂ ಸಂಪರ್ಕ ಮಾಡಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.