D. K. Shivakuma ಜೂ.1ರಿಂದ ಕಾಂಗ್ರೆಸ್ ಕುಟುಂಬ ಸದಸ್ಯತ್ವ ಅಭಿಯಾನ
ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ
Team Udayavani, May 27, 2024, 9:12 PM IST
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಮುಂದಿನ ಚುನಾವಣೆಗಳಿಗಾಗಿ ಪಕ್ಷ ಸಂಘಟನೆಗೆ ಮುಂದಾಗಿರುವ ಕಾಂಗ್ರೆಸ್, “ಕಾಂಗ್ರೆಸ್ ಕುಟುಂಬ’ ಎಂಬ ವಿಶೇಷ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಿದೆ.
ಜೂ.1ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆಯಲಾಗಿದ್ದು, ಅಲ್ಲಿ “ಕಾಂಗ್ರೆಸ್ ಕುಟುಂಬ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸೋಮವಾರ ಪಕ್ಷದ ಕಚೇರಿಯಲ್ಲಿ ಜರಗಿದ ನೆಹರು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕು. ಆ ಬೂತ್ ಹಾಗೂ ಹಳ್ಳಿಗಳಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಆ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕು. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು. ಯಾರು ಎಷ್ಟೇ ದೊಡ್ಡ ನಾಯಕರಾಗಿದ್ದರೂ ಅವರು ಈ ಜವಾಬ್ದಾರಿ ತೆಗೆದುಕೊಂಡು ಕಾಂಗ್ರೆಸ್ ಕುಟುಂಬವನ್ನು ಬೆಳೆಸಲೇಬೇಕು. ಇದಕ್ಕೆ ನೀವು ಸಜ್ಜಾಗಬೇಕು ಎಂದು ಹೇಳಿದರು.
ಹೊಸಬರಿಗೆ ಅಧಿಕಾರ ಬಿಟ್ಟುಕೊಡಿ
ನೆಹರು ಅವರು ಪಕ್ಷದ ಕಾರ್ಯಕರ್ತನಾಗಿ ದುಡಿದಿದ್ದರು. ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್‌ನಲ್ಲಿ ಯಾರೆಲ್ಲ 2 ಅವಧಿ ಹಾಗೂ 10 ವರ್ಷಗಳ ಕಾಲ ಅಧಿಕಾರ ಮಾಡಿದ್ದಾರೋ ಅವರು ಅಧಿಕಾರ ಬಿಟ್ಟುಕೊಟ್ಟು ಹೊಸಬರಿಗೆ ಅವಕಾಶ ಮಾಡಿಕೊಡಬೇಕು. ಸಂಸತ್ ಚುನಾವಣೆ ವೇಳೆ ಯುವಕರಿಗೆ ಹೆಚ್ಚು ಟಿಕೆಟ್ ನೀಡಿದ್ದೇವೆ. ಬಿಜೆಪಿಯವರು 15 ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ. ಅವರಲ್ಲಿ ಆದ ಅಸಮಾಧಾನ, ಗೊಂದಲ ನಮ್ಮಲ್ಲಿ ಆಗಿಲ್ಲ. ಈ ಯುವಕರು ಹತ್ತಾರು ವರ್ಷ ರಾಜಕಾರಣ ಮಾಡಲು ಶಕ್ತರಾಗಿದ್ದಾರೆ ಎಂದರು.
ಡಿಕೆಶಿ ಹೇಳಿದ್ದೇನು?
– “ಕಾಂಗ್ರೆಸ್ ಕುಟುಂಬ’ ಅಭಿಯಾನದಡಿ ಪ್ರತಿ ಬೂತ್‌ನಲ್ಲಿ 50 ಸದಸ್ಯರ ಸೇರ್ಪಡೆ ಮಾಡಿ
– ಹಳ್ಳಿಯಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಈ 50 ಮಂದಿಯ ಸೇರಿಸಿ ತೀರ್ಮಾನ ಕೈಗೊಳ್ಳಿ
– ಎಷ್ಟೇ ದೊಡ್ಡ ನಾಯಕರಾಗಿದ್ದರೂ ಅವರು ಈ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು
– ಕಾಂಗ್ರೆಸ್ ಅನ್ನು ಕಾರ್ಯಕರ್ತರ ಪಕ್ಷವಾಗಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು
– ಜಿಲ್ಲಾ, ಬ್ಲಾಕ್ ಕಾಂಗ್ರೆಸ್‌ನಲ್ಲಿ 10 ವರ್ಷ ಅಧಿಕಾರ ಮಾಡಿದವರು ಈಗ ಅಧಿಕಾರ ಬಿಟ್ಟುಕೊಡಬೇಕು
– ಹೊಸಬರಿಗೆ ಅವಕಾಶ ಮಾಡಿಕೊಡಲು ಎಲ್ಲರೂ ಸಜ್ಜಾಗಬೇಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.