ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ತೇನೆ, “ಕೈ” ಮುಖಂಡನ ಗೂಂಡಾಗಿರಿ!
Team Udayavani, Feb 20, 2018, 11:16 AM IST
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಘಟನೆ ಬೆನ್ನಲ್ಲೇ ಕೆಆರ್ ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ ಬಿಬಿಎಂಪಿ ಕಂದಾಯ ಕಚೇರಿಗೆ ಬಂದು ಗೂಂಡಾಗಿರಿ ನಡೆಸಿದ ಘಟನೆ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಇದೀಗ ನಾರಾಯಣಸ್ವಾಮಿಯನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೃಹ ಸಚಿವರಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಶಾಸಕ ಭೈರತಿ ಬಲಗೈ ಬಂಟ ನಾರಾಯಣಸ್ವಾಮಿ ಹೊರಮಾವು ಬಿಬಿಎಂಪಿ ಕಚೇರಿಗೆ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಧಮ್ಕಿ ಹಾಕಿದ್ದ ಘಟನೆ ನಡೆದಿತ್ತು. ಬಿಬಿಎಂಪಿ ಕಚೇರಿಯಲ್ಲಿ ನಾರಾಯಣಸ್ವಾಮಿ ನಡೆಸಿದ ಗೂಂಡಾಗಿರಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಈ ಸುದ್ದಿ ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿತ್ತು. ಬಿಬಿಎಂಪಿ ಕಚೇರಿಗೆ ನುಗ್ಗಿ ಚೆಂಗಲ್ ರಾಯಪ್ಪ ಹಾಗೂ ಕಚೇರಿಗೂ ಬೆಂಕಿ ಹಚ್ಚುವುದಾಗಿ ಧಮ್ಕಿ ಹಾಕಿರುವುದಾಗಿ ವರದಿ ಹೇಳಿದೆ.
ಏತನ್ಮಧ್ಯೆ ನಾರಾಯಣಸ್ವಾಮಿ ತಪ್ಪು ಮಾಡಿದ್ರೆ ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.