Congress ಸರ್ಕಾರದ ಆರನೇ ಗ್ಯಾರಂಟಿ ʼಕಾಸಿಗಾಗಿ ಪೋಸ್ಟಿಂಗ್ʼ: ಎಚ್ ಡಿ ಕುಮಾರಸ್ವಾಮಿ ಟೀಕೆ
Team Udayavani, Jun 28, 2023, 11:59 AM IST
ಬೆಂಗಳೂರು: ಪಂಚ ಗ್ಯಾರಂಟಿಗಳ ಕಾಂಗ್ರೆಸ್ ಸರಕಾರವು ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್ʼ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.
ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ CMofKarnataka ವೋ ಅಥವಾ Corruption of Karnataka ವೋ? ಎಂದು ಪ್ರಶ್ನಿಸಿದ್ದಾರೆ.
ನಾಲ್ಕು ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್ ಕಂಟ್ರೋಲ್ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ. ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಎಚ್ ಡಿಕೆ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.