![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 28, 2021, 7:10 AM IST
ಬೆಂಗಳೂರು: ವಿಧಾನಪರಿಷತ್ ಚುನಾ ವಣೆ ಟಿಕೆಟ್ ಹಂಚಿಕೆಯ ಅನಂತರ ಕಾಂಗ್ರೆಸ್‌ನಲ್ಲಿ ಭುಗಿಲೇಳುತ್ತಿರುವ ಅಸಮಾಧಾನ ಹೈಕಮಾಂಡ್ ಅಂಗಳದ ವರೆಗೂ ತಲುಪಿದೆ.
ಪಕ್ಷದ ಆಂತರಿಕ ಕಚ್ಚಾಟ ಫಲಿತಾಂಶದ ಮೇಲೆ ಪರಿಣಾಮ ಬೀರಿದರೆ ಟಿಕೆಟ್‌ಗಾಗಿ ಒತ್ತಡ ಹಾಕಿದ ನಾಯಕರೇ ಹೊಣೆ ಹೊರಬೇಕು ಎಂದು ಹೈಕಮಾಂಡ್ ಎಚ್ಚರಿಕೆ ನೀಡಿದೆ. ನಾಲ್ಕು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಿಕೆಯ ಅಸಮಾಧಾನದಿಂದ ಫಲಿತಾಂಶ ಏರುಪೇರಾಗುವ ಸಾಧ್ಯತೆಯಿದೆ ಎಂಬ ವರದಿ ಹೈಕಮಾಂಡ್‌ಗೆ ತಲುಪಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರಿಗೆ ಈ “ಹೊಣೆಗಾರಿಕೆ’ ಸಂದೇಶ ರವಾನಿಸಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಟಿಕೆಟ್ ಹಂಚಿಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಸ್ಥಳೀಯ ಮುಖಂಡರ ಜತೆ ಸಮನ್ವಯ ಸಾಧಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತದ ಅಭ್ಯರ್ಥಿ ಯನ್ನು ಆಯ್ಕೆ ಮಾಡಬೇಕು ಎಂದು ಹೈಕಮಾಂಡ್ ಮೊದಲೇ ಸೂಚಿಸಿತ್ತು. ಆದರೆ ರಾಜ್ಯದ ನಾಯಕರು “ಕೋಟಾ’ ಪದ್ಧತಿಯಡಿ ತಮ್ಮ ಬೆಂಬಲಿಗರು, ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾದರು. ಈಗ ಟಿಕೆಟ್ ಹಂಚಿಕೆಯ ಅನಂತರದ ಬೆಳವಣಿಗೆಗಳು ಹೈಕಮಾಂಡ್ ನಾಯಕರ ಕೆಂಗಣ್ಣಿಗೆ ಗುರಿಯಾಗಿವೆ. ಹೀಗಾಗಿ ರಾಜ್ಯ ಉಸ್ತುವಾರಿ ಮೂಲಕವೇ ಎಚ್ಚರಿಕೆ ಸಂದೇಶ ರವಾನೆಯಾಗಿದೆ.
ಇದನ್ನೂ ಓದಿ:ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ
ಹಲವು ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಆಂತರಿಕ ಕಚ್ಚಾಟದ ಹೊಡೆತದ ಬಗ್ಗೆ ಹೈಕಮಾಂಡ್‌ಗೆ ವರದಿ ಹೋಗಿದೆ. ಜೆಡಿಎಸ್ ಸ್ಪರ್ಧಿಸದ ಕಡೆ ಬೆಂಬಲ ಕೋರುತ್ತೇವೆ ಎನ್ನುವ ಮೂಲಕ ಬಿಜೆಪಿ ಜಾಣ ನಡೆ ಅನುಸರಿಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರ ಪ್ರತಿಷ್ಠೆ ಮತ್ತು ಟಿಕೆಟ್ ಹಂಚಿಕೆಯಲ್ಲಿನ ವ್ಯತ್ಯಾಸದಿಂದ ಗೆಲ್ಲುವ ಅವಕಾಶ ಇರುವ ಕಡೆ ಕಗ್ಗಂಟಾಗುತ್ತಿದೆ ಎಂಬ ಅಂಶ ವರದಿಯಲ್ಲಿದೆ ಎನ್ನಲಾಗಿದೆ.
ಎಚ್‌ಡಿಕೆ ಕೆಣಕಿದರಾ?
ಹಾನಗಲ್, ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ವಿರುದ್ಧ ಅನುಸರಿಸಿದ ತಂತ್ರವನ್ನೇ ವಿಧಾನಪರಿಷತ್ ಚುನಾವಣೆಯಲ್ಲೂ ಮುಂದುವರಿಸುತ್ತಿರುವ ಬಗ್ಗೆ ಕಾಂಗ್ರೆಸ್ ವಲಯ ದಲ್ಲೇ ಅಪಸ್ವರ ವ್ಯಕ್ತವಾಗಿದೆ. ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಕೆಣಕಿರುವುದು ಕಾಂಗ್ರೆಸ್‌ಗೆ ಮುಳುವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೂಂದೆಡೆ, ಕೆಲವು ಕ್ಷೇತ್ರಗಳಲ್ಲಿ ಕುಮಾರಸ್ವಾಮಿ “ರಂಗಪ್ರವೇಶ’ ಮಾಡಿದ್ದು, ಅಲ್ಲಿನ ಚಿತ್ರಣ ಬದಲಾಗುವ ಲಕ್ಷಣಗಳು ಕಂಡುಬರುತ್ತಿವೆ.
- ಎಸ್. ಲಕ್ಷ್ಮೀನಾರಾಯಣ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.