Congress; ಸಂಪುಟ ಪುನರ್ ರಚನೆ ವಿಚಾರ ತಳ್ಳಿ ಹಾಕಿದ ಸಿಎಂ ಸಿದ್ದರಾಮಯ್ಯ
ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಹೊರತು...
Team Udayavani, Oct 29, 2023, 7:31 PM IST
ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆಯನ್ನು ಭಾನುವಾರ ತಳ್ಳಿಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂತಹ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ”ಇಂತಹ ಮಾತುಕತೆ ಅನಗತ್ಯ. 20 ತಿಂಗಳ ನಂತರ ಸಚಿವ ಸಂಪುಟ ಪುನರ್ ರಚನೆಗೆ ಹೊಸ ಮುಖಗಳಿಗೆ ಅವಕಾಶ ನೀಡಲು ಕಾಂಗ್ರೆಸ್ ಶಾಸಕರು ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ, ಎಲ್ಲ ಶಾಸಕರಿಗೂ ಒಂದೇ ಬೇಡಿಕೆ ಇದೆಯೇ ಎಂದು ಪ್ರಶ್ನಿಸಿ, “ಇದೆಲ್ಲವೂ ಅಸಂಬದ್ಧವಾಗಿದೆ. ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆಯೇ ಹೊರತು ಶಾಸಕರಲ್ಲ ಎಂದರು.
ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ಶಾಸಕರು ನೀಡಿದ ಗೊಂದಲ ಮೂಡಿಸುವ ಹೇಳಿಕೆಗಳು, ಪಕ್ಷದೊಳಗಿನ ವಿದ್ಯಮಾನಗಳಿಂದಾಗಿ ಸಂಪುಟ ಪುನರ್ ರಚನೆ ನಡೆಸಲಾಗುತ್ತಿದೆ ಎನ್ನುವ ಚರ್ಚೆ ಜೋರಾಗಿತ್ತು.
ಜಾತಿ ಗಣತಿ ವರದಿ ಸ್ವೀಕಾರ
”ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಜಾತಿ ಗಣತಿ ವರದಿಯನ್ನು ತಮ್ಮ ಸರಕಾರ ಸ್ವೀಕರಿಸಲಿದೆ” ಎಂದು ಸಿದ್ದರಾಮಯ್ಯ ಹೇಳಿದರು. ”ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ ಅಲ್ಲಿ ಚರ್ಚೆ ನಡೆಸಲಾಗುವುದು. ಚರ್ಚೆಯ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದರು.
”ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ವರದಿಯನ್ನು ಸಲ್ಲಿಸುವುದಾಗಿ ಹೇಳಿದ್ದಾರೆ, ಅದನ್ನು ನಾವು ಸ್ವೀಕರಿಸುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜ್ ಅವರು ಸಮೀಕ್ಷೆ ನಡೆಸಿದ್ದು, ಹಿಂದಿನ ಮೂವರು ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ” ಎಂದು ಆರೋಪಿಸಿದರು.
ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ, ”ದೇಶದಲ್ಲಿಯೇ ಮೊದಲ ಬಾರಿಗೆ ಜಾತಿ ಗಣತಿ ನಡೆಸಿದ್ದು ತಮ್ಮ ಸರಕಾರ” ಎಂದು ಹೇಳಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.