ಸಿದ್ದರಾಮಯ್ಯ ಕಪಿಮುಷ್ಠಿಯಲ್ಲಿ ಕಾಂಗ್ರೆಸ್: ರಮೇಶ್ ವಾಗ್ಧಾಳಿ
Team Udayavani, Sep 29, 2019, 3:05 AM IST
ಬೆಳಗಾವಿ: ಒಬ್ಬರ ಕಪಿಮುಷ್ಠಿಯಲ್ಲಿಯೇ ಕಾಂಗ್ರೆಸ್ ಇದ್ದರೆ ಅವನತಿ ಖಚಿತ. ಇದು ಹೀಗೆಯೇ ಮುಂದು ವರಿದರೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ 30 ಶಾಸಕರೂ ಆಯ್ಕೆ ಆಗುವುದಿಲ್ಲ ಎಂದು ಗೋಕಾಕ್‌ನ ಅನರ್ಹ ಶಾಸಕ ರಮೇಶ ಜಾರಕಿ ಹೊಳಿ ವಾಗ್ಧಾಳಿ ನಡೆಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್‌ಗೆ ವಲಸೆ ಬಂದಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಪಕ್ಷ ನಿರ್ನಾಮ ಮಾಡಲು ಹೊರಟಿದ್ದಾರೆ. ಅವರಿಗಿಂತ 20 ವರ್ಷ ಮುಂಚೆ ಪಕ್ಷದಲ್ಲಿದ್ದುಕೊಂಡು ಬೆಳೆಸಿದ್ದೇವೆ. ಈಗ ಬಂದವರಿಂದ ಪಕ್ಷ ಬೆಳವಣಿಗೆ ಆಗುತ್ತಿಲ್ಲ ಎಂದು ಟೀಕಿಸಿದರು.
ನಾಯಕರೆನಿಸಿಕೊಂಡವರಿಗೆ ನಾಯಕತ್ವ ಗುಣ ಇರಬೇಕು. ಕಾಂಗ್ರೆಸ್‌ನಲ್ಲಿ ಭಿನ್ನಮತ ಇದ್ದಾಗ ಒಂದೇ ಒಂದು ದಿನ ಸಿದ್ದರಾಮಯ್ಯ ನಮಗೆ ಹಿರಿಯರಾಗಿ ತಿಳಿ ಹೇಳಿಲ್ಲ. ಒಂದು ಮಾತು ಅವರು ಹೇಳಿದ್ದರೆ ಈಗಲೇ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಸವಾಲು ಹಾಕಿದರು. ರಾಷ್ಟ್ರ ಹಾಗೂ ರಾಜ್ಯಮಟ್ಟದ ನಾಯಕ ರಿಂದಲೇ ದೋಸ್ತಿ ಸರ್ಕಾರ ಪತನವಾಗಿದೆ. ಸರ್ಕಾರ ಬೀಳಿಸಿದ್ದು ನಾವಲ್ಲ ಎಂದು ಸ್ಪಷ್ಟಪಡಿಸಿದರು.
ವೇಣುಗೋಪಾಲ ಬೇಕಾರ್: ವೇಣು ಗೋಪಾಲ ಅಂತಹ ಬೇಕಾರ್ (ಕೆಲಸಕ್ಕೆ ಬಾರದವರು) ಮನುಷ್ಯ ಯಾರೂ ಇಲ್ಲ. ಮಾಣಿಕ ಠಾಕೂರ್ ಅವರಿಗೆ ಉಸ್ತುವಾರಿ ಕೊಟ್ಟಿದ್ದರೆ ಪಕ್ಷ ಇನ್ನಷ್ಟು ಬೆಳೆಯುತ್ತಿತ್ತು. ವೇಣುಗೋಪಾಲಗೆ ಉಸ್ತುವಾರಿ ಕೊಟ್ಟಿದ್ದರಿಂದ ಪಕ್ಷ ಹಾಳಾಗಿ ಹೋಗುತ್ತಿದೆ ಎಂದು ಆಪಾದಿಸಿದರು. ಸುಪ್ರೀಂ ತೀರ್ಪಿಗಾಗಿ ಕಾಯುತ್ತಿದ್ದೇವೆ. ಯಾವಾಗ ಚುನಾವಣೆ ನಡೆದರೂ ಸಿದ್ಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.