ಮಾರ್ಚ್‌ನಲ್ಲಿ ಕಾಂಗ್ರೆಸ್‌ ಜನಾಶೀರ್ವಾದ ಯಾತ್ರೆ


Team Udayavani, Nov 29, 2017, 8:56 AM IST

29-6.jpg

ಬೆಂಗಳೂರು: ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ನಿರ್ಮಾಣದ ಪರಿವರ್ತನಾ ಯಾತ್ರೆಗೆ
ಪರ್ಯಾಯವಾಗಿ ಕಾಂಗ್ರೆಸ್‌ ಹಮ್ಮಿಕೊಳ್ಳಲು ಉದ್ದೇಶಿಸಿರುವ “ಜನಾಶೀರ್ವಾದ ಯಾತ್ರೆ’ ಮುಂದಿನ ವರ್ಷದ ಮಾರ್ಚ್‌ ತಿಂಗಳಲ್ಲಿ ನಡೆಯಲಿದೆ.

ಬಿಜೆಪಿಯ ಪರಿವರ್ತನಾ ಯಾತ್ರೆಗೆ ಪರ್ಯಾಯವಾಗಿ ಕಾಂಗ್ರೆಸ್‌ನಿಂದ ಜನಾಶೀರ್ವಾದ ಯಾತ್ರೆಯನ್ನು ಡಿಸೆಂಬರ್‌ನಿಂದ ಆರಂಭಿಸಲು ಈ ಹಿಂದೆ ಕಾಂಗ್ರೆಸ್‌ ಯೋಚಿಸಿತ್ತು. ಆದರೆ, ಕಾಂಗ್ರೆಸ್‌ನ ಯಾತ್ರೆ ಮಾರ್ಚ್‌ನಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖಚಿತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಜಿಲ್ಲಾಮಟ್ಟದಲ್ಲಿ  ನಡೆಯುತ್ತಿರುವ ಸರ್ಕಾರಿ ಕಾರ್ಯಕ್ರಮಗಳ ಪ್ರವಾಸದಲ್ಲಿ ನಿರತನಾಗಿದ್ದೇನೆ. ಎಲ್ಲಾ ಜಿಲ್ಲೆಗಳಲ್ಲೂ ಸರ್ಕಾರಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನಡೆಯುತ್ತಿದೆ. ಡಿ.13ರ ನಂತರ ಈ ಕೆಲಸ ಇನ್ನಷ್ಟು ಚುರುಕಾಗಲಿದೆ. ಬಳಿಕ ಪಕ್ಷದ ವತಿಯಿಂದ ಜನಾಶೀರ್ವಾದ ಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದರು.

ಬಿಜೆಪಿಯ ಪರಿವರ್ತನಾ ಯಾತ್ರೆಗೆ ಪರ್ಯಾಯವಾಗಿ ಕಾಂಗ್ರೆಸ್‌ನಿಂದ ಡಿಸೆಂಬರ್‌ನಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿತ್ತಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾವೇನು ಬಿಜೆಪಿಯವರಂತೆ ಪರಿವರ್ತನೆ, ಪರಿವರ್ತನೆ ಎಂದು ತಮಟೆ ಹೊಡೆದುಕೊಂಡು ಹೋಗಬೇಕೇ? ನಾವೇನು ಬಿಜೆಪಿಯವರಂತೆ ಕೆಲಸ ಇಲ್ಲದೆ ಕುಳಿತಿಲ್ಲ. ನಮಗೆ ಸಾಕಷ್ಟು ಕೆಲಸಗಳಿದ್ದು, ಆಡಳಿತ ನಡೆಸಬೇಕು, ಕಡತ ಪರಿಶೀಲಿಸಿ ವಿಲೇವಾರಿ ಮಾಡಬೇಕು ಎಂದು ಹೇಳಿದರು.

ಸರ್ಕಾರದ ವತಿಯಿಂದ ನಡೆಸುತ್ತಿರುವ ಕಾರ್ಯಕ್ರಮಗಳಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಬಾರದೇ ಇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪರಮೇಶ್ವರ್‌ ಅವರು ಒಂದು ಪಕ್ಷದ ಅಧ್ಯಕ್ಷರು. ಪಕ್ಷದ ಅಧ್ಯಕ್ಷರು ಸರ್ಕಾರದ ಕಾರ್ಯಕ್ರಮಗಳಿಗೆ ಸಾಮಾನ್ಯವಾಗಿ ಬರುವುದಿಲ್ಲ ಅಷ್ಟೆ. ಆ ವಿಚಾರದಲ್ಲಿ ಏನೇನೋ ಊಹಾಪೋಹಗಳನ್ನು ಸೃಷ್ಟಿಸುವುದು ಸರಿಯಲ್ಲ. ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಬರುತ್ತಾರೆ, ನಾನೂ ಹೋಗುತ್ತೇನೆ ಎಂದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.