ಕಾಂಗ್ರೆಸ್‌ ಪ್ರಬಲ ಸಮುದಾಯದ ವಿರುದ್ಧವೇ ಇದೆ: ಸಚಿವ ಡಾ.ಕೆ.ಸುಧಾಕರ್‌

ಎಚ್‌.ಡಿ.ದೇವೇಗೌಡ ಅವರ ಮನೆಗೆ ಸಚಿವ ಸುಧಾಕರ್‌ ಭೇಟಿ

Team Udayavani, Sep 26, 2022, 7:42 PM IST

dr-sdk

ಬೆಂಗಳೂರು: ಕಾಂಗ್ರೆಸ್‌ ಪ್ರಬಲ ಸಮುದಾಯದ ವಿರುದ್ಧ ನಿಂತಿದೆ ಎಂಬುದು ಇತಿಹಾಸದಿಂದಲೇ ತಿಳಿದುಬರುತ್ತದೆ. ಕಾಂಗ್ರೆಸ್‌ ಅಧಿಕಾರದಿಂದ ಕೆಳಕ್ಕಿಳಿಸಿದ ನಾಯಕರ ಪಟ್ಟಿಯನ್ನೇ ನಾನು ನೀಡಿದ್ದೇನೆ. ಇದರ ಬಗ್ಗೆ ಕಾಂಗ್ರೆಸ್‌ ಮೊದಲು ಉತ್ತರ ನೀಡಲಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸವಾಲೆಸೆದಿದ್ದಾರೆ.

ಇದನ್ನೂ ಓದಿ : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ; ಅಂತಿಮ ಪಟ್ಟಿ ಈ ವಾರ ಪ್ರಕಟ:ಬಿ.ಸಿ ನಾಗೇಶ್

ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಷ್ಟು ನಾನು ಬುದ್ಧಿವಂತನಲ್ಲ. ಆದರೆ ಇತಿಹಾಸವನ್ನು ನಾನು ಕೂಡ ಅಧ್ಯಯನ ಮಾಡಿದ್ದು, ವಿಚಾರ ಮಾಡಿಯೇ ಮಾತನಾಡುತ್ತೇನೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಜಮ್ಮು ಕಾಶ್ಮೀರದಲ್ಲಿ ಶಾಂತಿಯುತವಾಗಿ ಚುನಾವಣೆ ಮಾಡಿಸಿದ್ದರು. ಈಶಾನ್ಯ ರಾಜ್ಯಗಳಿಗೆ ಅಂದಿನ ಕಾಲದಲ್ಲೇ ಒಂದೇ ಬಾರಿಗೆ 6 ಸಾವಿರ ಕೋಟಿ ರೂ. ಅನುದಾನ ನೀಡಿದ್ದರು. ಅಂತಹವರನ್ನೇ ಪ್ರಧಾನಿ ಸ್ಥಾನದಿಂದ ಕಾಂಗ್ರೆಸ್‌ನವರು ಕೆಳಕ್ಕಿಳಿಸಿದರು. ಆದರೆ ಕಾಂಗ್ರೆಸ್‌ ಈವರೆಗೆ ಇದಕ್ಕೆ ಉತ್ತರ ನೀಡಿಲ್ಲ. ಪಿ.ವಿ.ನರಸಿಂಹರಾವ್‌, ರಾಜಶೇಖರಮೂರ್ತಿ, ಎಸ್‌.ನಿಜಲಿಂಗಪ್ಪ, ಎಸ್‌.ಎಂ.ಕೃಷ್ಣ ಮೊದಲಾದ ನಾಯಕರಿಗೆ ಕಾಂಗ್ರೆಸ್‌ ಏನು ಮಾಡಿದೆ ಎಂಬ ಪಟ್ಟಿಯೇ ಇದೆ. ನಾನು ಹೇಳಿರುವುದಕ್ಕೆ ಕಾಂಗ್ರೆಸ್‌ ಮೊದಲು ಉತ್ತರ ನೀಡಲಿ ಎಂದು ಸವಾಲೆಸೆದರು.

ಬಿಜೆಪಿಯು ಎಲ್ಲರಿಗೂ ಸ್ಥಾನಮಾನ ನೀಡಿದೆ. ಜಗದೀಶ ಶೆಟ್ಟರ್‌ ಅವರಿಗೂ ಸಿಎಂ ಸ್ಥಾನ ನೀಡಲಾಗಿತ್ತು. ಬಸವರಾಜ ಬೊಮ್ಮಾಯಿ ಅವರಿಗೂ ಉತ್ತಮ ಸ್ಥಾನ ನೀಡಲಾಗಿದೆ. ಬಿಜೆಪಿಯಲ್ಲಿ ಜಾತಿ ನೋಡಿ ಮಣೆ ಹಾಕುವುದಿಲ್ಲ. ಯಾವುದೇ ಜಾತಿಯನ್ನು ಟಾರ್ಗೆಟ್‌ ಕೂಡ ಮಾಡುವುದಿಲ್ಲ ಎಂದರು.

ಭ್ರಷ್ಟಾಚಾರಕ್ಕೂ ಜಾತಿಗೂ ಸಂಬಂಧವಿಲ್ಲ

ಭ್ರಷ್ಟಾಚಾರಕ್ಕೂ ಜಾತಿಗೂ ಯಾವುದೇ ಸಂಬಂಧ ಇಲ್ಲ ಎಂಬುದು ಸತ್ಯ. ಆದರೆ ಪ್ರಬಲ ಸಮುದಾಯದ ಸಿಎಂ ಇದ್ದಾಗ, ಅವರನ್ನು ವಿಶೇಷವಾಗಿ ಟಾರ್ಗೆಟ್‌ ಮಾಡುವುದು ಕಾಂಗ್ರೆಸ್‌ನ ಸಂಪ್ರದಾಯ ಎಂದು ಹೇಳಿದ್ದೇನೆ. ಕಾಂಗ್ರೆಸ್‌ ಸದಾ ಪ್ರಬಲ ಸಮುದಾಯದ ವಿರುದ್ಧ ನಿಂತಿದೆ. ಯಾವ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಪ್ಪಿದ್ದಾರೆ ಎಂಬುದನ್ನು ಕಾಂಗ್ರೆಸ್‌ ಹೇಳಬೇಕು. ಅವರು ಸಮರ್ಥ ಆಡಳಿತ ನೀಡುತ್ತಿರುವುದರಿಂದಲೇ ತಮಗೆ ಉಳಿಗಾಲ ಇಲ್ಲ ಎಂಬುದು ಕಾಂಗ್ರೆಸ್‌ಗೆ ಅರ್ಥವಾಗಿದೆ ಎಂದರು.

ಆಂಬ್ಯುಲೆನ್ಸ್‌ ಸೇವೆಯಲ್ಲಿ ವ್ಯತ್ಯಯವಾದಾಗ ಕೆಲವೇ ಗಂಟೆಗಳಲ್ಲಿ ಸಮಸ್ಯೆ ಸರಿಪಡಿಸಲಾಗಿದೆ. ಇಂತಹ ತ್ವರಿತ ಕಾರ್ಯವನ್ನು ʼತಳ್ಳುವ ಸರ್ಕಾರʼ ಮಾಡುತ್ತದೆಯೇ ಅಥವಾ ʼಸರ್ವಶಕ್ತ ಕ್ರಿಯಾಶೀಲ ಸರ್ಕಾರʼ ಮಾಡುತ್ತದೆಯೇ ಎಂಬುದನ್ನು ಡಿ.ಕೆ.ಶಿವಕುಮಾರ್‌ ಅವರೇ ವಿಚಾರ ಮಾಡಬೇಕು ಎಂದರು.

ಕೆಲವೇ ಗಂಟೆಗಳ ಕಾಲ ಆಂಬ್ಯುಲೆನ್ಸ್‌ ಸೇವೆಗೆ ಅಡಚಣೆ ಉಂಟಾಗಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆಯಿಂದಲೇ ಸೇವೆ ಪುನರಾರಂಭವಾಗಿದೆ. ತಾಂತ್ರಿಕ ಸಮಸ್ಯೆ ಪರಿಹರಿಸಲು ಸುಮಾರು 8 ಲಕ್ಷ ರೂ. ವೆಚ್ಚದ ಮದರ್‌ಬೋರ್ಡ್‌ ಖರೀದಿಗೆ ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾನ್ಯುವಲ್‌ ಕಾಲ್‌ಸೆಂಟರ್‌ಗೂ ಬ್ಯಾಕ್‌ಅಪ್‌ ಇರಿಸಲಾಗಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಭೇಟಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಸಚಿವ ಡಾ.ಕೆ.ಸುಧಾಕರ್‌ ಭೇಟಿ ಮಾಡಿದರು. ನಂತರ ಮಾತನಾಡಿದ ಅವರು, ಹುಟ್ಟು ಹೋರಾಟಗಾರ, ಹಿರಿಯ ಚೇತನ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿ ಮಾತನಾಡಿಸಿದೆ. ಅವರನ್ನು ನೋಡಿದರೆ ನನಗೆ ಭಕ್ತಿಯ ಭಾವ ಮೂಡಿಬರುತ್ತದೆ. ಮೊಣಕಾಲಿನ ತೊಂದರೆ ಬಿಟ್ಟರೆ, ಅವರು ಬಹಳ ಆರೋಗ್ಯವಂತರಾಗಿದ್ದಾರೆ. ಜತೆಗೆ ಅವರ ಮಾನಸಿಕ ಶಕ್ತಿಯೂ ಗಟ್ಟಿಯಾಗಿದೆ. ಅವರಿಗೆ ಉತ್ತಮ ಆರೋಗ್ಯ ದೊರೆತು ನಮ್ಮೆಲ್ಲರಿಗೂ ಮಾರ್ಗದರ್ಶನ ನೀಡಲಿ ಎಂದು ಆಶಿಸುತ್ತೇನೆ. ಮಾಜಿ ಪ್ರಧಾನಿಗಳ ಪೈಕಿ ಸಕ್ರಿಯರಾಗಿ ಜನಸೇವೆಯಲ್ಲಿ ತೊಡಗಿರುವವರೇ ದೇವೇಗೌಡರು. ಆದ್ದರಿಂದಲೇ ಅವರು ಮಹಾಚೇತನ ಎಂದರು.

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಸಂಜೆ ಹಾಗೂ ಬೆಳಗ್ಗೆ ನಾನು ಅವರ ಆರೋಗ್ಯದ ಕುರಿತು ಅಪ್‌ಡೇಟ್‌ ಪಡೆಯುತ್ತಿದ್ದೇನೆ. ಅವರು ಬೇಗ ಗುಣಮುಖರಾಗಿ ರಾಜ್ಯದ ಸೇವೆಗೆ ಮರಳಲಿದ್ದಾರೆ ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.