ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್ ಸಿದ್ಧತೆ
Team Udayavani, Apr 19, 2024, 11:22 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಭೇಟಿಯ ಕೇವಲ ಒಂದು ದಿನದ ಹಿಂದೆ ಕಾಂಗ್ರೆಸ್ ನೀಡಿದ ಚೊಂಬಿನ ಜಾಹೀರಾತು ರಾಜ್ಯಾದ್ಯಂತ ಸದ್ದು ಮಾಡಿದ್ದು, ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ಅದೇ ಚೊಂಬಿನ ಮೂಲಕ ಪ್ರಧಾನಿಯನ್ನು ಸ್ವಾಗತಿಸಲು ಕಾಂಗ್ರೆಸ್ ಸಜ್ಜಾಗಿದೆ.
ಎಲ್ಲ ಪತ್ರಿಕೆಗಳಲ್ಲೂ “ರಾಜ್ಯಕ್ಕೆ ಮೋದಿ ನೇತೃತ್ವದ ಸರಕಾರದ ಕೊಡುಗೆ ಚೊಂಬು’ ಎಂದು ಕಾಂಗ್ರೆಸ್ ಜಾಹೀರಾತು ನೀಡಿದೆ. ಅದನ್ನು ನಾಯಕರು, ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲೂ ಗರಿಷ್ಠ ಮಟ್ಟದಲ್ಲಿ ಹಂಚಿಕೊಂಡಿದ್ದಾರೆ. ಇದರ ಜತೆಗೆ ಚುನಾವಣ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಮೋದಿಗೆ ಶನಿವಾರ ಚೊಂಬು ಪ್ರದರ್ಶಿಸಲು ನಿರ್ಧರಿಸಿದೆ.
ಚುನಾವಣ ಪ್ರಚಾರಕ್ಕಾಗಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಅಲ್ಲಿಂದ ನಗರದ ಅರಮನೆ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ “ಕರ್ನಾಟಕಕ್ಕೆ ಮೋದಿ ಸರಕಾರದ ಕೊಡುಗೆ ಚೊಂಬು’ ಎಂಬ ಸಂದೇಶವನ್ನು ವಿನೂತನ ಪ್ರತಿಭಟನೆಯೊಂದಿಗೆ ತಲುಪಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.