Congress; ಇಂದಿನಿಂದ ಜೈ ಬಾಪು, ಜೈ ಭೀಮ ಅಭಿಯಾನ
ಬೆಳಗಾವಿಯಿಂದಲೇ ಚಾಲನೆ ದೊರೆಯಬೇಕಿತ್ತು, ಈಗ ಮತ್ತೆ ಚಾಲನೆ
Team Udayavani, Jan 3, 2025, 6:45 AM IST
ಹೊಸದಿಲ್ಲಿ: ಕಳೆದ ವಾರ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ವೇಳೆ ಘೋಷಿಸಿದಂತೆ ಕಾಂಗ್ರೆಸ್‌ನ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಮಹಾ ಅಭಿಯಾನ’ ಶುಕ್ರವಾರ ಆರಂಭವಾಗಲಿದೆ.
ದೇಶದ ಎಲ್ಲ ರಾಜ್ಯಗಳು, ಜಿಲ್ಲೆಗಳು, ಹಳ್ಳಿಗಳು ಹಾಗೂ ಬ್ಲಾಕ್ ಮಟ್ಟದಲ್ಲಿ ಈ ಅಭಿಯಾನ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಮತ್ತು ಬೇರು ಮಟ್ಟದ ನಾಯಕರು ಇದರ ನೇತೃತ್ವ ವಹಿಸಲಿದ್ದಾರೆ. ಇದರ ಅಂಗವಾಗಿ ವಿಚಾರ ಸಂಕಿರಣಗಳು, ಸಾರ್ವಜನಿಕ ಸಭೆಗಳು, ರ್ಯಾಲಿಗಳೂ ನಡೆಯಲಿವೆ. ಜ.26ರಂದು ಅಂಬೇಡ್ಕರ್ ಜನ್ಮಸ್ಥಳವಾದ ಮಧ್ಯಪ್ರದೇಶದ ಮಹೂವಿನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯೊಂದಿಗೆ ಸಮಾರೋಪಗೊಳ್ಳಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಮಾಹಿತಿ ನೀಡಿದ್ದಾರೆ.
ಡಿ.27ರಂದೇ ಈ ಅಭಿಯಾನಕ್ಕೆ ಬೆಳಗಾವಿಯಿಂದಲೇ ಚಾಲನೆ ನೀಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ನಿಧನ ಹಾಗೂ 7 ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಅದನ್ನು ಮುಂದೂಡಲಾಗಿತ್ತು. ಈಗ ಶುಕ್ರವಾರ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದೂ ಜೈರಾಂ ತಿಳಿಸಿದ್ದಾರೆ.
ಇದೇ ವೇಳೆ, ಪ್ರಸಕ್ತ ವರ್ಷದ ಜ.26ರಿಂದ 2026ರ ಜ.26ರ ವರೆಗೆ ಕಾಂಗ್ರೆಸ್ ರಾಷ್ಟ್ರಮಟ್ಟದ ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆಯನ್ನೂ ನಡೆಸಲಿದ್ದು, ಅದರಲ್ಲಿ ಪಕ್ಷದ ಹಲವು ನಾಯಕರು ಭಾಗಿಯಾಗಲಿದ್ದಾರೆ. ಇದು ರಿಲೇ ಮಾದರಿಯಲ್ಲಿ ಒಂದು ಗ್ರಾಮದಿಂದ ಮತ್ತೂಂದು ಗ್ರಾಮ, ಒಂದು ಪಟ್ಟಣದಿಂದ ಮತ್ತೂಂದು ಪಟ್ಟಣಕ್ಕೆ ಮುಂದುವರಿಯಲಿದೆ ಎಂದೂ ತಿಳಿಸಿದ್ದಾರೆ. 2025ರ ಎಪ್ರಿಲ್‌ನಲ್ಲಿ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ ಹಮ್ಮಿಕೊಳ್ಳಲಾಗುವುದು ಎಂದೂ ಹೇಳಿದ್ದಾರೆ.
ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಸತತವಾಗಿ ದಾಳಿ ನಡೆಸುತ್ತಿದೆ ಎನ್ನುವುದು ಕಾಂಗ್ರೆಸ್ ಆರೋಪವಾಗಿದೆ. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಡಾ| ಬಿ.ಆರ್. ಅಂಬೇಡ್ಕರ್ ಕುರಿತು ವಿವಾದಿತ ಹೇಳಿಕೆಯನ್ನೂ ನೀಡಿದ್ದರು. ಇದನ್ನೇ ಅಸ್ತ್ರವಾಗಿಸಿಕೊಂಡು ಈಗ ಕಾಂಗ್ರೆಸ್ ಈ ಅಭಿಯಾನಕ್ಕೆ ಮುನ್ನುಡಿ ಬರೆದಿದೆ.
ಅಭಿಯಾನ ಹೇಗೆ?
ಅಂಬೇಡ್ಕರ್‌ಗೆ ಸಚಿವ ಅಮಿತ್ ಶಾ ಅವಮಾನ ಹಿನ್ನೆಲೆ ಅಭಿಯಾನ
ದೇಶ, ರಾಜ್ಯ, ಜಿಲ್ಲೆ, ಬ್ಲಾಕ್ ಮಟ್ಟದಲ್ಲಿ ಹಲವು ಕಾರ್ಯಕ್ರಮ
ವಿಚಾರ ಸಂಕಿರಣಗಳು, ಸಾರ್ವಜನಿಕ ಸಭೆಗಳು, ರ್ಯಾಲಿ ಆಯೋಜನೆ
ಜ.26ರಂದು ಮಧ್ಯಪ್ರದೇಶದ ಮಹೂವಿನಲ್ಲಿ ಸಮಾರೋಪ
ಜ.26ರಿಂದ 1 ವರ್ಷ ಕಾಲ ಸಂವಿಧಾನ ಬಚಾವೋ ಪಾದಯಾತ್ರೆ
ಈ ವರ್ಷದ ಎಪ್ರಿಲ್‌ನಲ್ಲಿ ಎಐಸಿಸಿ ಅಧಿವೇಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.