ಕಾಂಗ್ರೆಸ್-ಜೆಡಿಎಸ್ ಕುದುರೆ ವ್ಯಾಪಾರ ಯತ್ನ: ಬೊಮ್ಮಾಯಿ
Team Udayavani, Jul 10, 2019, 3:06 AM IST
ಬೆಂಗಳೂರು: “ರಾಜೀನಾಮೆ ನೀಡಿದ ಶಾಸಕರಿಗೆ ಸಚಿವ ಸ್ಥಾನದ ಆಫರ್ ನೀಡುವ ಮೂಲಕ ಕಾಂಗ್ರೆಸ್, ಜೆಡಿಎಸ್ ಕುದುರೆ ವ್ಯಾಪಾರಕ್ಕೆ ಪ್ರಯತ್ನ ನಡೆಯುತ್ತಿವೆ’ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್, ಜೆಡಿಎಸ್‌ನ ಕೆಲ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಸಂಖ್ಯಾಬಲ ಕಳೆದುಕೊಂಡಿದೆ. ಜತೆಗೆ ನೈತಿಕತೆಯನ್ನೂ ಕಳೆದುಕೊಂಡಿದೆ. ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ರಾಜೀನಾಮೆ ನೀಡಿದವರೆಲ್ಲಾ ಅನುಭವಿ ಶಾಸಕರು. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಶಾಸಕರಿಗೆ ಸಚಿವ ಸ್ಥಾನದ ಆಫರ್ ನೀಡುವ ಮೂಲಕ ಕುದುರೆ ವ್ಯಾಪಾರ ಪ್ರಯತ್ನ ನಡೆಸುತ್ತಿವೆ. ಜತೆಗೆ ರಾಜೀನಾಮೆ ನೀಡಿರುವ ಶಾಸಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಹೆಸರಿನಲ್ಲಿ ಬೆದರಿಕೆ ಒಡ್ಡಲಾಗುತ್ತಿದೆ. ಸದನದ ಹೊರಗಿನ ಚಟುವಟಿಕೆಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗದು.
ತಮಿಳುನಾಡಿನ ಪ್ರಕರಣಕ್ಕೂ ರಾಜ್ಯದ ಪ್ರಕರಣಕ್ಕೂ ವ್ಯತ್ಯಾಸವಿದೆ. ಸ್ವಯಂಪ್ರೇರಿತ ರಾಜೀನಾಮೆಗೆ ಪಕ್ಷಾಂತರ ಕಾಯ್ದೆ ಅನ್ವಯವಾಗದು ಎಂದು ಹೇಳಿದರು. ಶಾಸಕರು ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ವಿಪ್ ನೀಡಿದೆ. ಶಾಸಕರ ಸಂವಿಧಾನ ಬದ್ಧವಾದ ಕಾರ್ಯಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಡ್ಡಿಪಡಿಸುತ್ತಿವೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.