ಡಿಕೆಶಿ ಕೈತಪ್ಪಿದ ಇಂಧನ; ಕಾಂಗ್ರೆಸ್ ಹಾಗೂ JDS ಗೆ ಯಾವ್ಯಾವ ಖಾತೆ?
Team Udayavani, Jun 1, 2018, 5:18 PM IST
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸಂಪುಟದ ಖಾತೆ ಹಂಚಿಕೆ ಕೊನೆಗೂ ಅಂತ್ಯಗೊಂಡಿದ್ದು, ಭಾರೀ ಲಾಬಿ ನಡೆಸಿದ ನಂತರವೂ ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಗೆ ಇಂಧನ ಖಾತೆ ಕೈತಪ್ಪಿದೆ.
ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಸಿಎಂ ಎಚ್ ಡಿ ಕುಮಾರ್ ಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್, ಕಾಂಗ್ರೆಸ್ ಮತ್ತು ಜೆಡಿಎಸ್ ಪಾಲಾದ ಖಾತೆಗಳ ವಿವರ ನೀಡಿದರು.
ಕಾಂಗ್ರೆಸ್ ಪಕ್ಷಕ್ಕೆ ಹಂಚಿಕೆಯಾದ ಖಾತೆಗಳು:
ಗೃಹ, ಜಲಸಂಪನ್ಮೂಲ, ಕೈಗಾರಿಕೆ ಮತ್ತು ಸಕ್ಕರೆ ಇಲಾಖೆ, ನೀರಾವರಿ, ಕಂದಾಯ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ವಿಜ್ಞಾನ ಮತ್ತು ತಂತ್ರಜ್ಞಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆರೋಗ್ಯ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ, ಸಮಾಜ ಕಲ್ಯಾಣ, ಅರಣ್ಯ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ. ಕಾರ್ಮಿಕ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ, ಬಂದರು, ಒಳನಾಡು ಸಾರಿಗೆ ಇಲಾಖೆ,
ಜೆಡಿಎಸ್ ಪಕ್ಷಕ್ಕೆ ಹಂಚಿಕೆಯಾದ ಖಾತೆಗಳು:
ಹಣಕಾಸು, ಲೋಕೋಪಯೋಗಿ, ಇಂಧನ, ಉನ್ನತ ಮತ್ತು ಪ್ರಾಥಮಿಕ ಶಿಕ್ಷಣ, ಸಣ್ಣ ಕೈಗಾರಿಕೆ, ಸಾರಿಗೆ, ಯೋಜನೆ ಮತ್ತು ಸಾಂಖ್ಯಿಕ, ಸಣ್ಣ ನೀರಾವರಿ, ಗುಪ್ತಚರ, ಮಾಹಿತಿ ಮತ್ತು ತಂತ್ರಜ್ಞಾನ, ಸಹಕಾರ-ಪ್ರವಾಸೋದ್ಯಮ, ತೋಟಗಾರಿಕೆ ಮತ್ತು ರೇಷ್ಮೆ.
ಬುಧವಾರ ಮಧ್ಯಾಹ್ನ ಪ್ರಮಾಣವಚನ:
ಎರಡೂ ಪಕ್ಷಗಳ ನಿರ್ಧಾರದಂತೆ ಬುಧವಾರ ಮಧ್ಯಾಹ್ನ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಟ್ಟು 22 ಖಾತೆಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ. ಜೆಡಿಎಸ್ ಗೆ 12 ಖಾತೆಗಳು ಸಿಕ್ಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
MUST WATCH
ಹೊಸ ಸೇರ್ಪಡೆ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.