ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ, ಬೊಮ್ಮಾಯಿ ನಾಲಾಯಕ್ ಸಚಿವ: ಕಾಂಗ್ರೆಸ್ ನಾಯಕ ಮನೋಹರ್
Team Udayavani, Aug 13, 2020, 12:42 PM IST
ಬೆಂಗಳೂರು: ಕಾವಲ್ ಭೈರಸಂದ್ರ ಗಲಭೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಫಲವಾಗಿದ್ದು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಮನೋಹರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಅದರಲ್ಲಿ ಪಾಲ್ಗೊಂಡು ಮನೋಹರ್ ಮಾತನಾಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಶಾಸಕರಿಗೆ ರಕ್ಷಣೆ ನೀಡದಂತಹ ಪರಿಸ್ಥಿತಿ ಉದ್ಭವಿಸಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವುದೇ ಸರ್ಕಾರದ ಸಾಧನೆಯಾಗಿದ್ದು, ಧರ್ಮದ ಹೆಸರಿನಲ್ಲಿ ಕೀಳು ಮಟ್ಟದ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಅಖಂಡ ಶ್ರೀನಿವಾಸ್ ನಿವಾಸದ ಮೇಲೆ ದಾಳಿಯಾಗಿದೆ. ರಾಜ್ಯದಲ್ಲಿ ಗೃಹ ಸಚಿವರು ಇದ್ದಾರೆಯೇ, ಇಲ್ವವೋ ಗೊತ್ತಿಲ್ಲ. ಗುಪ್ತಚರ ಇಲಾಖೆಗೆ ಯಾಕೆ ಈ ವಿಚಾರ ತಿಳಿಯಲಿಲ್ಲ. ಇಡೀ ಗೃಹ ಇಲಾಖೆಯೇ ಸಂಪೂರ್ಣ ವಿಫಲವಾಗಿದೆ. ಬಸವರಾಜ ಬೊಮ್ಮಾಯಿ ಒಬ್ಬ ನಾಲಾಯಕ್ ಸಚಿವ ಎಂದರು.
ನವೀನ್ ಒಬ್ಬ ಬಿಜೆಪಿ ಕಾರ್ಯಕರ್ತ. ಅವನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನೋಹರ್ ಹೇಳಿದರು. ಪ್ರತಿಭಟನೆಯಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.