ಬಿಟ್ಟಿ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕರು ಟೀಕೆ ಮಾಡೋದು ಬೇಡ : ರೇಣುಕಾಚಾರ್ಯ
Team Udayavani, May 11, 2021, 2:58 PM IST
ಬೆಂಗಳೂರು : ಬಿಟ್ಟಿ ಪ್ರಚಾರಕ್ಕೆ ಮಾತಾಡೋದು ಸರಿಯಲ್ಲ. ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕರು ಟೀಕೆ ಮಾಡೋದು ಬೇಡ, ಅವರು ಸಲಹೆ ಕೊಡಲಿ. ಆದ್ರೆ ಸಿಎಂ ರಾಜೀನಾಮೆ ಕೇಳೋದು ಸರಿಯಲ್ಲ. ಇಂಥ ಸಂದರ್ಭದಲ್ಲಿ ರಾಜಕಾರಣ ಮಾಡೋದು ಬೇಡ. ಪ್ರತಿಪಕ್ಷಗಳು ಸಲಹೆ ಕೊಡಲಿ. ಚುನಾವಣೆ ಬಂದಾಗ ರಾಜಕೀಯ ಮಾಡಿ ಎಂದು ಬೆಂಗಳೂರಿನಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.
ಬೊಮ್ಮಾಯಿ, ವಿಜಯೇಂದ್ರ ಕೇಂದ್ರದ ನಾಯಕರನ್ನು ಭೇಟಿ ಮಾಡಿದ್ದು ಕೋವಿಡ್ ವಿಚಾರಕ್ಕೆ. ಕೋವಿಡ್ ನಿರ್ವಹಣೆ ವಿಚಾರಕ್ಕೆ ಕೇಂದ್ರಕ್ಕೆ ತೃಪ್ತಿ ಇದೆ. ನಾಯಕತ್ವ ಬದಲಾವಣೆ ಆಗುತ್ತೆ ಅನ್ನೋದೆಲ್ಲ ಸತ್ಯಕ್ಕೆ ದೂರವಾದ ವಿಷಯ ಎಂದು ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.
ಕಳೆದ ವರ್ಷ ಕೋವಿಡ್ ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು, ಈ ವರ್ಷ ಎರಡನೇ ಅಲೆ ಬಂದಿದೆ ಕಳೆದ ವರ್ಷ ಸರ್ಕಾರಿ ನೌಕರರ ವೇತನದಲ್ಲಿ ಕಡಿತ ಮಾಡಲಾಗಿತ್ತು. ಈಸಲ ನೌಕರರ ವೇತನದಲ್ಲಿ ಕಡಿತ ಮಾಡಿಲ್ಲ. ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರಿಗೆ ಹಿಂದೆ ಪರಿಹಾರ ಕೊಟ್ರು. ಕೋವಿಡ್ ಬಂದ್ರೂ ಅಭಿವೃದ್ಧಿಗೆ ಹಿನ್ನಡೆ ಆಗಿಲ್ಲ. ಕ್ಷೇತ್ರಗಳ ಅಭಿವೃದ್ಧಿಗೂ ಹಣ ಕೊಟ್ಟಿದ್ದಾರೆ ಎಂದರು.
ಇನ್ನು ಸಚಿವ ಸಿ ಪಿ ಯೋಗೇಶ್ವರ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ರೇಣುಕಾಚಾರ್ಯ, ದೆಹಲಿಗೆ ಹೋಗಿ ದೂರು ಕೊಡೋರು ಆತ್ಮಾವಲೋಕನ ಮಾಡಿಕೊಳ್ಳಲಿ. ಮಂತ್ರಿ ಆದೋರು ಇಂಥ ವೇಳೆ ಕೆಲಸ ಮಾಡಬೇಕು. ಕ್ಷೇತ್ರದಲ್ಲಿದ್ದು ಜನರ ಕೆಲಸ ಮಾಡಬೇಕು. ರಾಜಕೀಯ ಮಾಡೋದಲ್ಲ. ದೂರು ಕೊಡೋದ್ರಿಂದ ಏನೂ ಪ್ರಯೋಜನ ಇಲ್ಲ. ಇಂಥ ಸಂದರ್ಭದಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.