29ರಂದು ಕೈ ಶಾಸಕಾಂಗ ಪಕ್ಷದ ಸಭೆ
Team Udayavani, May 26, 2019, 3:06 AM IST
ಬೆಂಗಳೂರು: ಲೋಕಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ಮೇ 29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಪರಾಮರ್ಶಿಸಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಸಿಎಲ್‌ಪಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಎಲ್ಲ ಶಾಸಕರಿಗೆ ಪತ್ರ ರವಾನಿಸಿದ್ದಾರೆ.
ನಗರದ ಅಶೋಕ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಅವರು ಉಪಸ್ಥಿತಲಿರಲಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಶನಿವಾರ ಸಿಡಬ್ಲೂಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ, ಅಲ್ಲಿಂದಲೇ ಶಾಸಕಾಂಗ ಪಕ್ಷದ ಸಭೆ ನಿಗದಿಪಡಿಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಹೇಳಲಾಗಿದೆ.
ದೆಹಲಿ ಭೇಟಿ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸಿ, ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ನಿರೀಕ್ಷಿತ ಸ್ಥಾನ ಬಂದಿಲ್ಲ.
ಜೆಡಿಎಸ್ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್‌ಗೆ ನಷ್ಟವುಂಟಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ, ಲೋಕಸಭೆ ಚುನಾವಣೆ ಫಲಿತಾಂಶದ ಆಧಾರದಲ್ಲಿ ಮೈತ್ರಿ ಸರ್ಕಾರದ ಸಂಬಂಧ ಕಡಿದುಕೊಳ್ಳುವುದು ಬೇಡ. ಸರ್ಕಾರಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಿ. ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ರಾಹುಲ್, ಸಿದ್ದರಾಮಯ್ಯಗೆ ತಿಳಿಸಿದರು ಎನ್ನಲಾಗಿದೆ.
ಈ ಮಧ್ಯೆ, ಸಿದ್ದರಾಮಯ್ಯ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿ ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಳ್ಳುವ ಬಗ್ಗೆಯೂ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ಚರ್ಚೆ ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಸಿದ್ದರಾಮಯ್ಯನವರ ಆಪ್ತ ಮೂಲಗಳು ಇದನ್ನು ನಿರಾಕರಿಸಿವೆ.
ಶಂಕರ್ ಭೇಟಿ ಕುತೂಹಲ: ಸಿಡಬ್ಲೂಸಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರನ್ನು ಪಕ್ಷೇತರ ಶಾಸಕ ಆರ್.ಶಂಕರ್ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.
“ಆಪರೇಷನ್ ಕಮಲ’ ಕಾರ್ಯಾಚರಣೆ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದ ಶಂಕರ್, ಇದೀಗ ದಿಢೀರ್ ಸಿದ್ದರಾಮಯ್ಯ ಅವರ ಜತೆಯೇ ವಿಮಾನದಲ್ಲಿ ದೆಹಲಿಗೆ ತೆರಳಿ ಕರ್ನಾಟಕ ಭವನದಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ. ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.
ಆದರೆ, ಭೇಟಿಗೆ ಏನೂ ವಿಶೇಷ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರೆ, ನಾನು ಪಕ್ಷೇತರ ಶಾಸಕ, ಮೈತ್ರಿ ಸರ್ಕಾರಕ್ಕೆ ಮತ್ತೆ ಬೆಂಬಲ ನೀಡುವ ವಿಚಾರ ಇಲ್ಲ. ಸಿದ್ದರಾಮಯ್ಯ ಅವರ ಜತೆಯೂ ಆ ವಿಚಾರ ಚರ್ಚಿಸಿಲ್ಲ. ನಾನು ಪಕ್ಷೇತರನಾಗಿಯೇ ಇರುತ್ತೇನೆ ಎಂದು ಶಂಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.