ಅಭ್ಯರ್ಥಿಗಳ ಆಯ್ಕೆಗೆ ಇಂದು, ನಾಳೆ ಕಾಂಗ್ರೆಸ್ ಸಭೆ
Team Udayavani, Mar 7, 2023, 7:05 AM IST
ಬೆಂಗಳೂರು: ಸುಮಾರು 70ರಿಂದ 80 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ 2ನೇ ಹಂತದ ಕಸರತ್ತು ಮಂಗಳವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ನಡೆಯಲಿದೆ.
ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಪ್ರಮುಖರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಈ ಸಭೆ ನಡೆಯಲಿದೆ. ಪ್ರಥಮ ಹಂತದಲ್ಲಿ ಈಗಾಗಲೇ 130ರಿಂದ 150 ಕ್ಷೇತ್ರಗಳಿಗೆ ಒಂದೊಂದೇ ಅಭ್ಯರ್ಥಿ ಆಯ್ಕೆ ಮಾಡಿ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲೂ ಸಮ್ಮತಿ ಪಡೆಯಲಿದೆ. ಉಳಿದಂತೆ ಒಂದಕ್ಕಿಂತ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿರುವ 70 ರಿಂದ 80 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ ಈ ಸಭೆ ನಡೆಯಲಿದೆ.
ಪ್ರತಿಯೊಂದು ಕ್ಷೇತ್ರಕ್ಕೂ ಟಿಕೆಟ್ ಆಕಾಂಕ್ಷಿಗಳಾಗಿರುವ ಎಲ್ಲರನ್ನೂ ಒಟ್ಟಿಗೆ ಸೇರಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಯಾರಿಗೆ ಟಿಕೆಟ್ ನೀಡಿದರೂ ಒಟ್ಟಾಗಿ ಕೆಲಸ ಮಾಡಿ ಪಕ್ಷ ಗೆಲ್ಲಿಸುವಂತೆ ಸೂಚನೆ ನೀಡುವುದೇ ಈ ಸಭೆಯ ಉದ್ದೇಶವಾಗಿದೆ.
ಲಿಂಗಾಯತರ ಪ್ರತ್ಯೇಕ ಸಭೆ
ಈ ಮಧ್ಯೆ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಲಿಂಗಾಯತ ನಾಯಕರು ಸಭೆ ಸೇರಿ ಸಮಾಲೋಚನೆ ನಡೆಸಿರುವುದು ಅಚ್ಚರಿ ತಂದಿದೆ. ಈ ಸಭೆಯಲ್ಲಿ ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ವಿನಯ ಕುಲಕರ್ಣಿ ಸಹಿತ ಅನೇಕರು ಭಾಗವಹಿಸಿದ್ದರು. ಈಗಾಗಲೇ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಈ ಸಲ ವೀರಶೈವ-ಲಿಂಗಾಯತ ಸಮಾಜದವರಿಗೆ 70ರಿಂದ 80 ಸೀಟು ಕೊಡಬೇಕೆಂದು ಬೇಡಿಕೆ ಸಲ್ಲಿಸಿದ್ದಾರೆ. ಮಂಗಳವಾರ, ಬುಧವಾರ ಅಭ್ಯರ್ಥಿ ಆಯ್ಕೆಗೆ ಸಭೆ ಸೇರುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.