ಬಿಜೆಪಿಗೆ ಹೆದರಿ ಕಾಂಗ್ರೆಸ್ ಶಾಸಕರು ರೆಸಾರ್ಟ್‌ಗೆ ಶಿಫ್ಟ್
Team Udayavani, Jan 20, 2019, 12:35 AM IST
ಹುಬ್ಬಳ್ಳಿ: ನಮ್ಮ ಶಾಸಕರನ್ನು ಬಿಜೆಪಿಯವರು ಸೆಳೆಯುತ್ತಿದ್ದಾರೆ. ಆದ್ದರಿಂದ ಅವರನ್ನು ಹಿಡಿದಿಟ್ಟುಕೊಳ್ಳಬೇಕೆಂಬ ಕಾರಣಕ್ಕೆ ರೆಸಾರ್ಟ್‌ನಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸಮರ್ಥಿಸಿಕೊಂಡರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ರೆಸಾರ್ಟ್ ಸಂಸ್ಕೃತಿ ಬೆಳೆದಿದೆ. ಇದು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಪ್ರತಿಯೊಂದು ಪಕ್ಷ ತನ್ನ ಶಾಸಕರಿಗೆ ಯಾರೂ ಗಾಳ ಹಾಕಬಾರದು, ಅವರಿಗೆ ತೊಂದರೆ ಆಗಬಾರದೆಂದು ಅವರ ಮೇಲೆ ನಿಗಾ ವಹಿಸಿ ಕ್ರಮ ಕೈಗೊಳ್ಳುತ್ತಿದೆ. ಬಿಜೆಪಿ ಶಾಸಕರು ಕಳೆದ ಒಂದು ವಾರದಿಂದ ರೆಸಾರ್ಟ್‌ನಲ್ಲಿ¨ªಾರೆ. ಅವರು, ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಿದ್ದಾರೆ. ನಮ್ಮ ಪಕ್ಷದ ಶಾಸಕರು ನಮಗೆ ಒತ್ತಡ ಇದೆ ಎಂದು ನಮ್ಮ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಕ್ಕೆ ಶುಕ್ರವಾರ ರಾತ್ರಿ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಆದರೆ, ನಮ್ಮ ಶಾಸಕರ ಮೇಲೆ ನಮಗೆ ವಿಶ್ವಾಸವಿದೆ. ನಮ್ಮ ಶಾಸಕರ್ಯಾರೂ ಪಕ್ಷ ಬಿಡುವುದಿಲ್ಲ ಎಂದರು.
ಅತೃಪ್ತರು ಇರುವುದು ಸಹಜ. ಆದರೆ, ರಾಜ್ಯದ ಸಮ್ಮಿಶ್ರ ಸರ್ಕಾರ ಸ್ಥಿರವಾಗಿದೆ. ರಮೇಶ ಜಾರಕಿಹೊಳಿ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಶಾಸಕ ಜಾಧವ ಅವರು ಸಿಎಲ್‌ಪಿ ಮೀಟಿಂಗ್‌ಗೆ ಪತ್ರ
ಬರೆದು ತಿಳಿಸಿದ್ದಾರೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಹೊಸ ಸೇರ್ಪಡೆ
Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.