Congress ರಾಷ್ಟ್ರೀಯ ವಕ್ತಾರ ಸಂಕೇತ ಏಣಗಿ ಪಕ್ಷಕ್ಕೆ ಗುಡ್‌ಬೈ
Team Udayavani, Mar 17, 2024, 8:20 PM IST
ಬೆಂಗಳೂರು: ತಾವೊಬ್ಬ ವೀರಶೈವ ಲಿಂಗಾಯತ ಆಗಿದ್ದುದಕ್ಕಾಗಿ ಪಕ್ಷದಲ್ಲಿ ಉಸಿರುಗಟ್ಟುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿರುವ ರಾಷ್ಟ್ರೀಯ ವಕ್ತಾರ ಹಾಗೂ ರಂಗಕರ್ಮಿ ಏಣಗಿ ಬಾಳಪ್ಪ ಅವರ ಮೊಮ್ಮಗ ಸಂಕೇತ ಏಣಗಿ, ಇದರಿಂದ ಬೇಸತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಹಾಗೂ ಪಕ್ಷದ ಎಲ್ಲ ಜವಾಬ್ದಾರಿಗಳಿಗೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಸಂಕೇತ ಏಣಗಿ, ನಾನು ಈವರೆಗೆ ತಮ್ಮಿಂದಾಗಲಿ, ಪಕ್ಷದಿಂದಾಗಲಿ ಅಥವಾ ಸರ್ಕಾರದಿಂದಾಗಲಿ ಯಾವುದೇ ವೈಯಕ್ತಿಕ ಲಾಭ ಅಥವಾ ಅಧಿಕಾರ ಬಯಸಿಲ್ಲ ಮತ್ತು ಪಡೆದಿಲ್ಲ ಎಂಬ ಸ್ಪಷ್ಟ ಮಾಹಿತಿ ಕೂಡ ತಮಗಿದೆ.
ಆದಾಗ್ಯೂ ವೈಯಕ್ತಿಕವಾಗಿ ಜಾತಿಭೇದವಿಲ್ಲದೆ ಪ್ರಾಮಾಣಿಕತೆ ಮತ್ತು ನಿಷ್ಠುರತೆಯ ವೀರಶೈವ ಲಿಂಗಾಯತನಾಗಿದ್ದುದಕ್ಕಾಗಿ ಹಾಗೂ ಪಕ್ಷದ ಯಾವುದೇ ನಾಯಕರ ಬಾಗಿಲು ತಟ್ಟದಿದ್ದುದಕ್ಕಾಗಿ ಪಕ್ಷದಲ್ಲಿ ಇಂದು ನನಗೆ ಉಸಿರುಗಟ್ಟಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದ್ದಾರೆ. ಪಕ್ಷದ ಗೆಲುವಿಗೆ ಕಾರಣರಾದ ಸಹಸ್ರಾರು ಕಾರ್ಯಕರ್ತರ ಅಳಲು ಕೂಡ ಇದೇ ಆಗಿದೆ. ಅಧಿಕಾರದ ಗದ್ದುಗೆ ಏರಲು ಕಾರ್ಯಕರ್ತರು ಮೆಟ್ಟಿಲು ಆಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಾರ್ಯಕರ್ತರ ಸೇವೆ ಗುರುತಿಸುವ ಮತ್ತು ಅವರಿಗೆ ಶಕ್ತಿ ತುಂಬುವ ಪ್ರಯತ್ನ ಮಾಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.