ಸಿ.ಎಂ.ಇಬ್ರಾಹಿಂಗೆ ಪರ್ಯಾಯ ಶೋಧದಲ್ಲಿ ಕಾಂಗ್ರೆಸ್
ಜಮೀರ್, ನಸೀರ್, ಸಲೀಂ ಮೂಲಕ ತಿರುಗೇಟಿಗೆ ಕಾರ್ಯತಂತ್ರ
Team Udayavani, Dec 25, 2020, 11:16 PM IST
ಬೆಂಗಳೂರು: ತನ್ನ ಪರಮಾಪ್ತ ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರ್ಪಡೆ ಖಚಿತ ವಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಪರ್ಯಾಯ ಮುಸ್ಲಿಂ ನಾಯಕತ್ವವನ್ನು ರೂಪಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.
ಮಾಜಿ ಸಚಿವರಾದ ಜಮೀರ್ ಅಹಮದ್, ನಸೀರ್ ಅಹಮದ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಆಹಮದ್ ಮೂಲಕ ಇಬ್ರಾಹಿಂಗೆ ತಿರುಗೇಟು ನೀಡಲು ಹಾಗೂ ಮುಸ್ಲಿಂ ಸಮುದಾಯವನ್ನು ಹಿಡಿದಿಟ್ಟು ಕೊಳ್ಳಲು ಮುಂದಾಗಿದ್ದಾರೆ. ಇವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಸ್ಲಿಂ ಧರ್ಮ ಗುರುಗಳು ಸಹಿತ ಸಮುದಾಯದ ಪ್ರಮುಖರನ್ನು ಭೇಟಿ ಮಾಡಲು ಯೋಜನೆ ರೂಪಿಸಲಾಗಿದೆ. ಕರಾವಳಿ ಭಾಗದಲ್ಲಿ ಯು. ಟಿ. ಖಾದರ್‌ಗೆ ಈ ಉಸ್ತುವಾರಿ ನೀಡಲು ತೀರ್ಮಾನಿಸಲಾಗಿದೆ.
ಬಿಜೆಪಿಗೆ ಹತ್ತಿರವಾಗುತ್ತಿರುವ ಜೆಡಿಎಸ್ ಜತೆಗೂಡಲು ಸಜ್ಜಾಗುತ್ತಿರುವ ಸಿ.ಎಂ. ಇಬ್ರಾಹಿಂ ನಿಲುವನ್ನು ಪ್ರಮುಖವಾಗಿ ಪ್ರಸ್ತಾವಿಸಿ ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಸಮುದಾಯದ ಮುಖಂಡರ ಜತೆ ಸಮಾಲೋಚಿಸುವುದು. ಅನಂತರ ಮುಸ್ಲಿಂ ಸಮುದಾಯ ಕಾಂಗ್ರೆಸ್ ಜತೆಗಿದೆ ಎಂಬ ಸಂದೇಶ ಸಾರಲು ಬೃಹತ್ ಸಮಾವೇಶ ಆಯೋಜಿಸುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.
ಆತಂಕ
ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮಂಡ್ಯ, ಮೈಸೂರು ಸಹಿತ ಹಳೆ ಮೈಸೂರು, ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಮುಸ್ಲಿಂ ಸಮುದಾಯದ ಪ್ರಭಾವ ಇರುವ ಕ್ಷೇತ್ರಗಳಲ್ಲಿ ಸಿ. ಎಂ. ಇಬ್ರಾಹಿಂ ರಾಜ್ಯ ಪ್ರವಾಸ ಮಾಡುತ್ತಿರುವುದು ಕಾಂಗ್ರೆಸ್‌ನಲ್ಲಿ ಆತಂಕ ಮೂಡಿಸಿದೆ.
ಪರಮಾಪ್ತ ನಾಯಕ
ಸಿದ್ದರಾಮಯ್ಯ ಎಲ್ಲಿದ್ದರೂ ಅಲ್ಲಿ ಎಚ್. ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಹಾಗೂ ಸಿ.ಎಂ.ಇಬ್ರಾಹಿಂ ಇರುತ್ತಾರೆ ಎಂಬ ಮಾತಿದೆ. ಸಿದ್ದ ರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಇಬ್ರಾಹಿಂಗೆ ಯೋಜನ ಆಯೋಗದ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಅನಂತರ ಭದ್ರಾವತಿಯಲ್ಲಿ ಟಿಕೆಟ್ ನೀಡಿ ಸೋತರೂ ವಿಧಾನ ಪರಿಷತ್ ಸದಸ್ಯರಾಗಿ ಮಾಡ ಲಾಗಿತ್ತು. ಆದರೆ, ಇತ್ತೀಚೆಗೆ ಸಿದ್ದರಾಮಯ್ಯ ಅವರು ಜಮೀರ್ ಹಾಗೂ ನಸೀರ್ ಅಹಮದ್ ಅವರಿಗೆ ಹೆಚ್ಚು ಪ್ರಾಮುಖ್ಯ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಸಿ.ಎಂ.ಇಬ್ರಾಹಿಂ ದೂರವಾಗಿದ್ದರು.
ಸಿ.ಎಂ.ಇಬ್ರಾಹಿಂಗೆ ಪರ್ಯಾಯ ನಾಯಕ ಅಗತ್ಯವಿಲ್ಲ: ಸತೀಶ್
ಲಿಂಗಸುಗೂರು: ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಅವರಿಗೆ ಪರ್ಯಾಯವಾಗಿ ಮುಸ್ಲಿಂ ನಾಯಕರನ್ನು ಬೆಳೆಸಬೇಕಾದ ಅಗತ್ಯ ಕಾಂಗ್ರೆಸ್‌ಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ. ಇಬ್ರಾಹಿಂ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ. ಪಕ್ಷ ಅಂದ ಮೇಲೆ ಕೆಲವು ಸಣ್ಣಪುಟ್ಟ ಗೊಂದಲಗಳಿರುವುದು ಸಹಜ. ಈ ಸಂಬಂಧ ಇಬ್ರಾಹಿಂ ನೀಡಿರುವ ಸಲಹೆಯನ್ನು ಪಕ್ಷದ ಮುಖಂ ಡರು ಗಂಭೀರವಾಗಿ ಪರಿಗಣಿಸುತ್ತಾರೆ ಎಂದರು.
ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ರಾಮಮಂದಿರ, ಪಾರ್ಲಿಮೆಂಟ್ ಕಟ್ಟುವ ಅಗತ್ಯವೇನಿತ್ತು? ಬರ ಮತ್ತು ಕೋವಿಡ್ ನಿರ್ವಹಣೆಗೆ ಕಾಳಜಿ ತೋರದೆ 8,000 ಕೋ. ರೂ. ಕೊಟ್ಟು ವಿಮಾನ ಖರೀದಿಸಿದ್ದಾರೆ. ಸಾಮಾನ್ಯ ಜನರು ಹಾಗೂ ಕಾರ್ಮಿಕರ ಹಿತವನ್ನು ಬಲಿ ನೀಡಲಾಗಿದೆ ಎಂದ ಸತೀಶ್, ರಾಜ್ಯದಲ್ಲಿ ಸರಕಾರ ಇದ್ದೂ ಇಲ್ಲದಂತಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ಬಗ್ಗೆ ಅ ಧಿವೇಶನದಲ್ಲಿ ಹೋರಾಟ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಜನತೆಯೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.