Congress; ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ: ಶಿವಕುಮಾರ್
Team Udayavani, Dec 3, 2024, 2:07 AM IST
ಹಾಸನ: ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟದ ಆಶ್ರಯದಲ್ಲಿ ಡಿ. 5ರಂದು ಹಾಸನದಲ್ಲಿ ನಡೆಯಲಿರುವ ಜನ ಕಲ್ಯಾಣ ಸಮಾವೇಶದಲ್ಲಿ ರಾಜ್ಯಕ್ಕೆ ದೊಡ್ಡ ಸಂದೇಶ ರವಾನಿಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಪಿಸಿಸಿ ನೇತೃತ್ವದಲ್ಲಿ, ನನ್ನ ಅಧ್ಯಕ್ಷತೆಯಲ್ಲೇ ಕಾರ್ಯಕ್ರಮ ನಡೆಯಲಿದ್ದು, ಜನ ಕಲ್ಯಾಣ ಸಮಾವೇಶ ಎಂದು ಹೆಸರಿಸಿದ್ದೇವೆ ಎಂದು ಘೋಷಿಸುವ ಮೂಲಕ ಸಿದ್ದರಾಮಯ್ಯ ಅವರಿಗಾಗಿ ನಡೆಸುವ ಸ್ವಾಭಿಮಾನಿ ಸಮಾವೇಶ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದರಲ್ಲದೆ, ಇದು 6 ಜಿಲ್ಲೆಗಳ ವ್ಯಾಪ್ತಿಯ ಸಮಾವೇಶವಲ್ಲ. ಹಾಸನದ್ದೇ ಸಮಾವೇಶ, ಯಾವ ಜಿಲ್ಲೆಯಿಂದ, ಎಷ್ಟು ಜನರು ಬೇಕಾದರೂ ಬರಬಹುದು. ಸೊನ್ನೆಯಿಂದ ಎಷ್ಟು ಲಕ್ಷ ಬೇಕಾದರೂ ಸೇರಬಹುದು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಬೆಂಬಲಿಗರ ಯೋಜನೆ, ಯೋಚನೆಗಳಿಗೆಲ್ಲಾ ಉಲ್ಟಾ ಹೊಡೆದರು.
ಹಾಸನದಲ್ಲೇ ಏಕೆ ಸಮಾವೇಶ?
25 ವರ್ಷಗಳಿಂದ ಹಾಸನದಲ್ಲಿ ಕಾಂಗ್ರೆಸ್ ಸಂಸದರು ಇರಲಿಲ್ಲ. ಈಗ ಜಿಲ್ಲೆಯ ಜನರು ಕಾಂಗ್ರೆಸ್‌ಗೆ ಲೋಕಸಭಾ ಸದಸ್ಯರನ್ನು ಕೊಟ್ಟಿದ್ದಾರೆ. ಉಳಿದ ಕೆಲವು ಜಿಲ್ಲೆಗಳಲ್ಲಿ ಒಂದಕ್ಕಿಂತ ಹೆಚ್ಚಿನ ಶಾಸಕರನ್ನು ಕಾಂಗ್ರೆಸ್ ಹೊಂದಿದೆ. ಒಬ್ಬರೇ ಶಾಸಕರಿರುವ ಹಾಸನದಲ್ಲಿಯೂ ಶಾಸಕರ ಸಂಖ್ಯೆ ಹೆಚ್ಚು ಮಾಡುವ ಉದ್ದೇಶದಿಂದ ಅಲ್ಲಿ ಸಮಾವೇಶ ಮಾಡುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.