ಕೋವಿಡ್ ಲಸಿಕೆ ವಿತರಣೆಗೆ ಕಾಂಗ್ರೆಸ್ ಪಕ್ಷ 100 ಕೋಟಿ ಯೋಜನೆ ರೂಪಿಸಿದೆ : ಡಿಕೆಶಿ
Team Udayavani, May 14, 2021, 12:47 PM IST
ಬೆಂಗಳೂರು : ಕೋವಿಡ್ ಲಸಿಕೆಗೆ ಕಾಂಗ್ರೆಸ್ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ 100 ಕೋಟಿ ರೂ. ನೀಡುತ್ತೇವೆ. ಶಾಸಕರು ತಲಾ ಒಂದು ಕೋಟಿ ರೂ. ನೀಡಲಿದ್ದಾರೆ. ಮೊದಲು ಲಸಿಕೆ ಕೊಡಿಸಲಿ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಿಕೆಶಿ, ಇದು ಕಾಂಗ್ರೆಸ್ ಪಕ್ಷದ ತೀರ್ಮಾನ. ಜನರ ಆರೋಗ್ಯ ಪ್ರಾಣ ಕಾಪಾಡಲು ನಮ್ಮ ಹೊಣೆಗಾರಿಕೆ ನಿಭಾಯಿಸಲಿದ್ದೇವೆ ಎಂದಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೋವಿಡ್ ನಿಯಂತ್ರಣ ಮತ್ತು ಲಸಿಕೆ ವಿತರಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ.
ಕೋವಿಡ್ ಲಸಿಕೆ ವಿತರಣೆ ಮಾಡಲು ಕಾಂಗ್ರೆಸ್ ಪಕ್ಷ 100 ಕೋಟಿ ಯೋಜನೆಯನ್ನು ರೂಪಿಸಿದೆ. ಅದ್ರಲ್ಲಿ 10 ಕೋಟಿಯನ್ನು ಕರ್ನಾಟಕ ಕಾಂಗ್ರೆಸ್ ನೀಡುತ್ತಿದೆ. ಉಳಿದ 90 ಕೋಟಿಯನ್ನು ಶಾಸಕರು ಮತ್ತು ಎಮ್ ಎಲ್ ಸಿ ಗಳು ನೀಡಲಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಲಸಿಕೆಗಾಗಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಮ್ಮ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ.1 ಕೋಟಿಯಂತೆ ಒಟ್ಟು ರೂ.100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ದೇಶದ ಪ್ರತಿಯೊಬ್ಬರಿಗೂ ಕೊರೊನಾ ವ್ಯಾಕ್ಸಿನ್ ನೀಡುವುದೇ ಸೋಂಕು ತಡೆಗಟ್ಟಲು ಇರುವ ಪರಿಣಾಮಕಾರಿ ಮಾರ್ಗವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಷ್ಟರೊಳಗೆ ಕನಿಷ್ಠ ಅರ್ಧದಷ್ಟು ಜನರಿಗೆ ವ್ಯಾಕ್ಸಿನ್ ನೀಡಿದ್ದರೆ ಕೊರೊನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ಬಂದಿರುತ್ತಿತ್ತು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಇಂದು ಜನ ವ್ಯಾಕ್ಸಿನ್ ಗಾಗಿ ಆಸ್ಪತ್ರೆಗಳಿಗೆ ಅಲೆಯುವ ಪರಿಸ್ಥಿತಿ ಬಂದಿದೆ. ಕರ್ನಾಟಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ವ್ಯಾಕ್ಸಿನ್ ನೀಡಿಕೆ ಸಂಬಂಧ ಎರಡೂ ಸರ್ಕಾರಗಳಿಗೆ ಛೀಮಾರಿ ಹಾಕಿವೆ. ಇಷ್ಟಾದರೂ ಬಿಜೆಪಿ ನಾಯಕರಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಕ್ಕೆ ವ್ಯಾಕ್ಸಿನ್ ಬರಲು ಇನ್ನು ಹಲವು ತಿಂಗಳುಗಳಾಗಬಹುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಕೊರೊನಾ 3ನೇ ಅಲೆ ಬರಲಿದ್ದು, ಅದರ ಬಗೆಗಿನ ತಜ್ಞರ ಅಭಿಪ್ರಾಯವನ್ನು ಗಮನಿಸಿದರೆ ಮುಂದಿನ ದಿನಗಳ ಬಗ್ಗೆ ಆತಂಕವಾಗುತ್ತದೆ ಎಂದರು.
ಕೊವಿಶೀಲ್ಡ್ ವ್ಯಾಕ್ಸಿನ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಪದೇ ಪದೇ ತನ್ನ ಮಾರ್ಗಸೂಚಿಯನ್ನು ಬದಲಾವಣೆ ಮಾಡುತ್ತಿದೆ. ಮೊದಲ ಹಾಗೂ ಎರಡನೇ ಡೋಸ್ ನಡುವಿನ ಅಂತರ 6 ವಾರ ಎಂದು ಈ ಹಿಂದೆ ಹೇಳಿತ್ತು, ಈಗ ಅದನ್ನು 12 ರಿಂದ 16 ವಾರಗಳಿಗೆ ಏರಿಸಿ ಹೊಸ ಮಾರ್ಗಸೂಚಿ ಹೊರಡಿಸಿದೆ.
ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತಿದೆ. ಇದೊಂದು ವೈಜ್ಞಾನಿಕ ಪ್ರಕ್ರಿಯೆ, ವ್ಯಾಕ್ಸಿನ್ ತಯಾರಿಕಾ ಹಂತದಲ್ಲಿಯೇ ಎರಡು ಡೋಸ್ ಗಳ ನಡುವಿನ ದಿನಗಳ ಅಂತರವನ್ನೂ ನಿರ್ಧರಿಸಲಾಗಿರುತ್ತದೆ, ಹಾಗಿದ್ದಾಗ ಪದೇ ಪದೇ ಬದಲಾವಣೆ ಹೇಗೆ ಸಾಧ್ಯ? ಸರ್ಕಾರ ಗಂಟೆಗೊಂದು, ದಿನಕ್ಕೊಂದು ಮಾರ್ಗಸೂಚಿ ಹೊರಡಿಸುವ ಮೂಲಕ ಜನರನ್ನು ಗೊಂದಲಕ್ಕೆ ದೂಡುತ್ತಿದೆ ಎಂದರು.
18 ರಿಂದ 45ರ ವಯೋಮಿತಿಯ ಜನರ ವ್ಯಾಕ್ಸಿನ್ ಗೆ ರಾಜ್ಯ ಸರ್ಕಾರಗಳೇ ಹಣ ಹಾಕಬೇಕು ಎಂದು ಕೇಂದ್ರ ಸರ್ಕಾರ ಹೇಳಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ. ಕೇಂದ್ರ ಸರ್ಕಾರವೇ ಇಡೀ ದೇಶದ ಜನತೆಗೆ ಉಚಿತವಾಗಿ ವ್ಯಾಕ್ಸಿನ್ ನೀಡುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!
Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್!
Kiran Raj: ಸೂಪರ್ ಹೀರೋ ಆಗಲಿದ್ದಾರೆ ಕಿರಣ್ ರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.