15 ಕ್ಷೇತ್ರ ಸಂಭಾವ್ಯರು:ಮಾ.11ರ ಸಭೆಯಲ್ಲಿ ಕಾಂಗ್ರೆಸ್ ಪಟ್ಟಿ ಅಂತಿಮ
Team Udayavani, Mar 8, 2019, 12:30 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದ್ಧತೆ ಚುರುಕುಗೊಳಿಸಿರುವ ಕಾಂಗ್ರೆಸ್ ರಾಜ್ಯದ 15 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದೆ. ಗುರುವಾರ ನಡೆದ ರಾಜ್ಯ ಕಾಂಗ್ರೆಸ್ ಚುನಾವಣ ಸಮಿತಿ ಸಭೆಯಲ್ಲಿ ಹಾಲಿ ಇರುವ ಜೆಡಿಎಸ್‌ನ ಎರಡು, ಶಿವಮೊಗ್ಗ ಮತ್ತು ಕಾಂಗ್ರೆಸ್‌ನ 10 ಸಂಸದರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 15 ಕ್ಷೇತ್ರಗಳಿಗೆ ಸಂಭಾವ್ಯರ ಪಟ್ಟಿ ಸಿದ್ಧ ಮಾಡಲಾಗಿದೆ. ಇದನ್ನು ಹೈಕಮಾಂಡ್‌ಗೆ ಕಳುಹಿಸಿಕೊಡಲಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ಪರಿಶೀಲನೆ ನಡೆಸಲಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮಾ. 11ರಂದು ನಡೆಯಲಿರುವ ಕೇಂದ್ರ ಚುನಾವಣ ಸಮಿತಿ (ಸಿಇಸಿ) ಸಭೆಯಲ್ಲಿ ಈ ಪಟ್ಟಿ ಅಂತಿಮ ಗೊಳ್ಳಲಿದೆ. ಜೆಡಿಎಸ್ ನಾಯಕರ ಜತೆ ಚರ್ಚಿಸಿ ಸೀಟು ಹೊಂದಾಣಿಕೆ ಅಂತಿಮಗೊಂಡ ಬಳಿಕವೇ ಸಿಇಸಿ ಸಭೆ ನಡೆಯಲಿದೆ.
ಚುನಾವಣ ಸಮಿತಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಸಹಿತ ಹಿರಿಯ ನಾಯಕರು ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರು ಪಾಲ್ಗೊಂಡಿದ್ದರು.
ಜೆಡಿಎಸ್‌ಗೆ ಹೆಚ್ಚು ಕ್ಷೇತ್ರ ಬೇಡ
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಹೆಚ್ಚು ಕ್ಷೇತ್ರಗಳನ್ನು ಬಿಟ್ಟು ಕೊಡುವುದರಿಂದ ಭವಿಷ್ಯದಲ್ಲಿ ಕಾಂಗ್ರೆಸ್‌ಗೆ ನಷ್ಟವುಂಟಾಗಲಿದೆ. ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಮೈತ್ರಿ ಮಾಡಿಕೊಳ್ಳಲಾಗಿದೆಯೇ ಹೊರತು ಜೆಡಿಎಸ್‌ನ್ನು ಉದ್ಧಾರ ಮಾಡಲು ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಹಾಲಿ ಕ್ಷೇತ್ರ: ಹೈಕಮಾಂಡ್ ನಿರ್ಧಾರ
ಕಾಂಗ್ರೆಸ್‌ನ ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಬಿಟ್ಟುಕೊಡು ವಂತೆ ಜೆಡಿಎಸ್ ಬೇಡಿಕೆ ಇಟ್ಟಿರುವುದರಿಂದ ಆ ಬಗ್ಗೆ ಹೈಕಮಾಂಡ್ ನಿರ್ಧಾರಕ್ಕೆ ಬಿಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದಕ್ಕಿಂತ ಮೊದಲು ಅವರ ಕಾರ್ಯವೈಖರಿ ಮತ್ತು ಸಾಧನೆಯ ಪಟ್ಟಿ ತಯಾರಿಸಲು ನಿರ್ಧರಿಸಲಾಗಿದೆ.
ಸಂಭಾವ್ಯ ಅಭ್ಯರ್ಥಿಗಳು
ದಕ್ಷಿಣ ಕನ್ನಡ: ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಬಿ.ಕೆ. ಹರಿಪ್ರಸಾದ್
ಉಡುಪಿ-ಚಿಕ್ಕಮಗಳೂರು: ಪ್ರಮೋದ್ ಮಧ್ವರಾಜ್, ಡಾ| ವಿಜಯ್ ಕುಮಾರ್
ಬೀದರ್: ಈಶ್ವರ್ ಖಂಡ್ರೆ, ವಿಜಯ್ ಸಿಂಗ್, ಅಯಾಜ್ ಖಾನ್
ಬಾಗಲಕೋಟೆ: ಬಾಯಕ್ಕ ಮೇಟಿ, ವೀಣಾ ಕಾಶಪ್ಪನವರ್, ಅಜಯ್‌ಕುಮಾರ್
ವಿಜಯಪುರ: ರಾಜು ಅಲಗೂರು, ಪ್ರಕಾಶ್ ರಾಠೊಡ್, ಶಿವರಾಜ್ ತಂಗಡಗಿ
ಕೊಪ್ಪಳ: ಬಸನಗೌಡ ಬಾದರ್ಲಿ, ಬಸವರಾಜ್ ಹಿಟ್ನಾಳ್, ಕೆ.ವಿರೂಪಾಕ್ಷಪ್ಪ
ಬೆಳಗಾವಿ: ಅಂಜಲಿ ನಿಂಬಾಳ್ಕರ್, ಸತೀಶ್/ರಮೇಶ್ ಜಾರಕಿಹೊಳಿ, ಚೆನ್ನರಾಜ್
ಧಾರವಾಡ: ವಿನಯ ಕುಲಕರ್ಣಿ, ಶಾಖೀರ್ ಸನದಿ, ವೀರಣ್ಣ ಮತ್ತಿಕಟ್ಟಿ , ಅನಿಲ್‌ಕುಮಾರ್
ಹಾವೇರಿ: ಬಸವರಾಜ್, ಸಲೀಂ ಅಹಮದ್, ಡಿ.ಆರ್. ಪಾಟೀಲ್, ನಂಜಯ್ಯನಮಠ
ದಾವಣಗೆರೆ: ಎಸ್.ಎಸ್. ಮಲ್ಲಿಕಾರ್ಜುನ, ಎಚ್.ಎಂ. ರೇವಣ್ಣ
ಉತ್ತರ ಕನ್ನಡ: ಪ್ರಶಾಂತ್ ದೇಶಪಾಂಡೆ, ನಿವೇದಿತ್ ಆಳ್ವ, ಭೀಮಣ್ಣ ನಾಯ್ಕ
ಬೆಂಗಳೂರು ಕೇಂದ್ರ: ರಿಜ್ವಾನ್, ಬಿ.ಕೆ. ಹರಿ ಪ್ರಸಾದ್, ರೋಶನ್ ಬೇಗ್, ಸಾಂಗ್ಲಿಯಾನ
ಬೆಂಗಳೂರು ದಕ್ಷಿಣ: ಪ್ರಿಯಾ ಕೃಷ್ಣ, ರಾಮಲಿಂಗಾ ರೆಡ್ಡಿ
ಬೆಂಗಳೂರು ಉತ್ತರ: ನಾರಾಯಣ ಸ್ವಾಮಿ, ಬಿ.ಎಲ್. ಶಂಕರ್, ರಾಜಕುಮಾರ್, ಶ್ರೀನಿವಾಸ್
ಮೈಸೂರು: ವಿಜಯ್‌ಶಂಕರ್, ಸೂರಜ್ ಹೆಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.