Congress: ಕುರುಡುಮಲೆ ದೇವಸ್ಥಾನದಿಂದ “ಪ್ರಜಾಧ್ವನಿ-2’ಕ್ಕೆ ನಾಳೆ ಚಾಲನೆ
Team Udayavani, Apr 5, 2024, 6:41 AM IST
ಬೆಂಗಳೂರು: ಕೋಲಾರ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಂಟಾದ ಗೊಂದಲದಿಂದ ಮುಂದೂಡಲ್ಪಟ್ಟಿದ್ದ ಕಾಂಗ್ರೆಸ್‌ನ ಲೋಕಸಭಾ ಚುನಾವಣ ಪ್ರಚಾರ ಕಾರ್ಯಕ್ರಮ ಶನಿವಾರ (ಎ. 6) ನಿಗದಿಯಾಗಿದ್ದು, ಅಂದು ಕುರುಡುಮಲೆ ದೇವಸ್ಥಾನದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ದೊರೆಯಲಿದೆ.
ಅಂದು ಬೆಳಗ್ಗೆ 10.30ಕ್ಕೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿರುವ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಚುನಾವಣ ಪ್ರಚಾರಕ್ಕೆ ಕೆಪಿಸಿಸಿ ಅಧಿಕೃತ ಚಾಲನೆ ನೀಡಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಈ ಮೊದಲು ಮಾ.29ರಂದು ಮುಳಬಾಗಿಲಿನ ಕುರುಡುಮಲೆ ಹಾಗೂ ಮಾ.30ರಂದು ಹಾಸನದ ಹೊಳೆನರಸೀಪುರದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ನೀಡಲು ಕಾಂಗ್ರೆಸ್ ಉದ್ದೇಶಿಸಿತ್ತು. ಈ ಸಂಬಂಧ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ ಕೋಲಾರದಲ್ಲಿ ಪಕ್ಷದ ನಾಯಕರ ಭಿನ್ನಮತ ಸ್ಫೋಟಗೊಂಡು, ಅದು ರಾಜೀನಾಮೆ ಪ್ರಹಸನಕ್ಕೂ ತಲುಪಿದ್ದ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು.
ಅದಕ್ಕೂ ಮುನ್ನ ಮಾ. 26ರಂದು ಬೀದರ್‌ನ ಬಸವಕಲ್ಯಾಣ ಮತ್ತು ಕುರುಡುಮಲೆಯಿಂದ ಹೊರಟು ಶಿವಮೊಗ್ಗದಲ್ಲಿ ಮೊದಲ ಹಂತದ ಪ್ರಚಾರ ಅಂತ್ಯಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಘೋಷಣೆ ಬಳಿಕ ಅಸಮಾಧಾನ ಸ್ಫೋಟಗೊಂಡಿದ್ದರಿಂದ ಪ್ರಚಾರದ ವೇಳೆ ದುಷ್ಪರಿಣಾಮ ಬೀರಬಾರದೆಂದು, ಅತೃಪ್ತಿ ಶಮನಕ್ಕೆ ಮೊದಲ ಆದ್ಯತೆ ನೀಡಿ, ಎ. 1ರಿಂದ ಪ್ರವಾಸ ಕೈಗೊಳ್ಳಲು ಸಿಎಂ ಚಿಂತನೆ ನಡೆಸಿದ್ದರು. ಅಂತಿಮವಾಗಿ ಈಗ ಎ. 6ಕ್ಕೆ ಮುಹೂರ್ತ ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.