Lok Sabha ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಸಭೆ
ಜ.4ರಂದು ರಾಜ್ಯ ನಾಯಕರಿಂದ ದಿಲ್ಲಿ ಪ್ರವಾಸ; ಜ. 10ರಂದು ಹೈಕಮಾಂಡ್ ನಾಯಕರ ಜತೆ ಸಭೆ
Team Udayavani, Dec 30, 2023, 11:56 PM IST
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟು ವಟಿಕೆಗಳು ಗರಿಗೆದರುತ್ತಿದ್ದು, ಅಭ್ಯರ್ಥಿ ಆಯ್ಕೆ, ಸರಣಿ ಸಭೆಗಳು ಸಹಿತ ವಿವಿಧ ಪ್ರಕ್ರಿಯೆಗಳಿಗೆ ಸಿದ್ಧತೆ ಗಳು ಆರಂಭಗೊಂಡಿವೆ.
ಜ. 10ರಂದು ಕಾಂಗ್ರೆಸ್ ನಾಯ ಕರು, ಶಾಸಕರು, ಎಐಸಿಸಿ ನಾಯಕರ ಸಭೆ ನಡೆಯಲಿದೆ. ಇದಕ್ಕೂ ಮುನ್ನವೇ ಅಂದರೆ ಜ. 4ರಂದು ರಾಜ್ಯ ನಾಯಕರು ದಿಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಈ ವೇಳೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ರಾಷ್ಟ್ರೀಯ ನಾಯಕರ ಜತೆ ಚರ್ಚೆ ನಡೆಯಲಿದೆ. ಈ ಮಧ್ಯೆ ಆಯಾ ಸಚಿವರು ತಮಗೆ ವಹಿಸಿದ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ್ದಾರೆ.
“ಜ. 4ರಂದು ದಿಲ್ಲಿ ಪ್ರವಾಸ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿ ಸಿ ಪಕ್ಷದ ಸಭೆ ನಡೆಯಲಿದೆ. ಅಭ್ಯರ್ಥಿ ವಿಷಯದಲ್ಲಿ ಕೆಲವು ಸಚಿವರು ವರದಿ ನೀಡಿದ್ದಾರೆ. ಅವರ ಬಗ್ಗೆಯೂ ಸಮೀಕ್ಷೆ ನಡೆಸಬೇಕಿದೆ. ಇವೆಲ್ಲದರ ಕುರಿತು ಸಮಾಲೋಚಿಸಲು ದಿಲ್ಲಿಗೆ ಹೋಗುತ್ತಿದ್ದೇವೆ’ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ. 4ರ ದಿಲ್ಲಿ ಪ್ರವಾಸದ ಬೆನ್ನಲ್ಲೇ ಮುಂದೊಂದು ವಾರದಲ್ಲಿ ಅಂದರೆ ಜ. 10ರಂದು ಲೋಕಸಭೆ ಚುನಾವಣೆ ಸಿದ್ಧತೆ ವಿಚಾರ ವಾಗಿ ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯ ಕರ ಜತೆ ಸಭೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಅಲ್ಪಸಂಖ್ಯಾಕರಿಗೆ
ಸಾವಿರ ಕೋಟಿ; ತಪ್ಪೇನು?
ಅಲ್ಪಸಂಖ್ಯಾತರಿಗೆ ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವ ಕುಮಾರ್, “ನಿಮ್ಮನ್ನು ರಾಮನಗರಕ್ಕೆ ಕರೆದು ಕೊಂಡು ಹೋಗುತ್ತೇನೆ. ಅಲ್ಲಿನ ಸ್ಥಿತಿಗತಿ ಹೇಗಿದೆ ಎಂದು ನೋಡಿ. ಅವರು ಹೇಗೆ ಬದುಕು ತ್ತಿದ್ದಾರೆ ಎಂಬುದೇ ಆಶ್ಚರ್ಯ. ಜನರ ಬದುಕು ಸುಧಾರಣೆಗೆ ಈ ಕ್ರಮ ಕೈಗೊಳ್ಳಲಾಗಿದೆ. 224 ಕ್ಷೇತ್ರಗಳಿಗೆ ಈ ಅನುದಾನ ಹಂಚಿದರೆ ಎಷ್ಟು ಸಿಗುತ್ತದೆ? ಹಳ್ಳಿಗಳಲ್ಲಿ ನರೇಗಾ ಯೋಜನೆಗೆ ಅವಕಾಶವಿದೆ. ಆದರೆ ಈ ಸಮುದಾಯ ಹೆಚ್ಚಾಗಿ ನಗರ ಪ್ರದೇಶದಲ್ಲಿದ್ದಾರೆ. ಹೀಗಾಗಿ ಅವರಿಗೆ ಹೆಚ್ಚು ಅವಕಾಶ ಇಲ್ಲ. ಅವರ ಪ್ರದೇಶ ಸ್ವತ್ಛ ಮಾಡಿ, ಬದುಕು ಬದಲಿಸಬೇಕು ಎಂದು ಮುಖ್ಯ ಮಂತ್ರಿಗಳು ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಇದ ರಲ್ಲಿ ತಪ್ಪೇನಿದೆ ಎಂದರು.
ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿದೆ ಎಂದಾಗ, “ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚುಕಮ್ಮಿ ಆಗಿರುತ್ತದೆ. ಅದೇನು ವಿಚಾರ ಅಂತ ನೋಡುತ್ತೇನೆ’ ಎಂದು ತಿಳಿಸಿದರು.
ಬಾಗಿಲಿಗೆ ಬಂತು ಸರಕಾರ,
ಸೇವೆಗೆ ಇರಲಿ ಸಹಕಾರ
“ಜನಸಾಮಾನ್ಯರು ತಮ್ಮ ಕಷ್ಟಗಳನ್ನು ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಕಷ್ಟಗಳನ್ನು ಕೇಳಲು ನಾವೇ ಅವರ ಬಳಿ ಹೋಗಬೇಕು, ಅವರ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮುಂದಿನ ತಿಂಗಳು ದಿನಕ್ಕೆ ಎರಡು-ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ, ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಏರ್ಪಡಿಸಿದ್ದೇವೆ. ಈ ಮಧ್ಯೆ ದಿಲ್ಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.