ಮಧ್ಯಂತರ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
Team Udayavani, Aug 27, 2019, 3:06 AM IST
ಹುಬ್ಬಳ್ಳಿ: “ಯಡಿಯೂರಪ್ಪ ಸರ್ಕಾರ ಬಹಳ ದಿನ ಇರುತ್ತೆ ಅಂತ ಯಾರಿಗೂ ನಂಬಿಕೆಯಿಲ್ಲ. ರೆಬಲ್ಸ್‌ಗಳನ್ನಿಟ್ಟುಕೊಂಡು ಸರ್ಕಾರ ಮುನ್ನ ಡೆಸುವುದು ಕಷ್ಟ. ಹಾಲು ಕುಡಿದ ಮಕ್ಕಳೇ ಬದುಕು ವುದು ಕಷ್ಟ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೆಯೇ’ ಎಂದು ಮಾಜಿ ಸಿಎಂ ಸಿದ್ದಾರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಿಂಬಾಗಿಲ ರಾಜಕೀಯ ಮಾಡಿ ಅಧಿ ಕಾರಕ್ಕೆ ಬಂದಿರುವ ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ಭವಿಷ್ಯ ನುಡಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಈಗಾಗಲೇ ನಾನು ಸುದೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಅವರು ನನ್ನ ಮೇಲೆ ಗೂಬೆ ಕೂರಿಸಿ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ಜನರು ರಾಜಕೀಯವಾಗಿ ಪ್ರಬುದ್ಧರು. ಇವರ ರಾಜಕೀಯ ಹುನ್ನಾರ ಹಾಗೂ ಷಡ್ಯಂತ್ರದ ಬಗ್ಗೆ ಜನರಿಗೆ ಗೊತ್ತಿದೆ ಎಂದರು.
ಬೈರತಿ ಬಸವರಾಜು, ಸೋಮಶೇಖರ ಅವರನ್ನು ನಾನು ಮುಂಬೈಗೆ ಕಳುಹಿಸಿದ್ದೇನೆ ಅಂತಾರೆ. ಹಾಗಾದರೆ ಗೋಪಾಲಯ್ಯ, ಎಚ್.ವಿಶ್ವನಾಥ, ನಾರಾಯಣಗೌಡರನ್ನು ಕಳುಹಿಸಿದ್ದು ಯಾರು? ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗಲಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು ಎಂದು ಹೇಳಿದರು.
ನೆರೆ ಪರಿಹಾರಕ್ಕೆ ಕೇಂದ್ರ ಸ್ಪಂದಿಸುತ್ತಿಲ್ಲ: ಕೇಂದ್ರದ ಪ್ರವಾಹ ಅಧ್ಯಯನ ತಂಡವು ನೆರೆಯಿಂದಾದ ನಷ್ಟದ ಬಗ್ಗೆ ಸರಿಯಾಗಿ ಪರಿಶೀಲನೆ ಮಾಡಿ ಜನರಿಗೆ ಪರಿಹಾರ ನೀಡಬೇಕು. ಪ್ರವಾಹ ಬಂದು 20 ದಿನವಾದರೂ ಕೇಂದ್ರ ಇದುವರೆಗೆ ಒಂದು ರೂಪಾಯಿ ಪರಿಹಾರ ನಿಧಿ ಕೊಟ್ಟಿಲ್ಲ ಎಂದರು.
ಇಂದಿರಾ ಕ್ಯಾಂಟೀನ್ ಮುಚ್ಚುವ ಹುನ್ನಾರ: ದಿನೇಶ್
ಬೆಂಗಳೂರು: ಇಂದಿರಾ ಕ್ಯಾಂಟೀನ್‌ನಲ್ಲಿ ಅಕ್ರಮ ನಡೆದಿದೆ ಎಂಬ ನೆಪದಲ್ಲಿ ಜನಪ್ರಿಯ ಕಾರ್ಯಕ್ರಮ ಸ್ಥಗಿತಗೊಳಿಸುವ ಹುನ್ನಾರ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ದ್ವೇಷದ ರಾಜಕಾರಣ ಮಾಡಲ್ಲ ಎಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿರುವುದೆಲ್ಲಾ ದ್ವೇಷದ ರಾಜಕಾರಣವೇ ಎಂದು ದೂರಿದರು. ಇಂದಿರಾ ಕ್ಯಾಂಟೀನ್‌ನಲ್ಲಿ ಇಂದಿರಾಗಾಂಧಿಯವರ ಹೆಸರು ಇರುವುದು ಬಿಜೆಪಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹುನ್ನಾರ ಮಾಡಿ ಸ್ಥಗಿತಗೊಳಿಸುವ ಸಂಚು ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.