ಡಿಸೆಂಬರ್‌ಗೆ 150 ಕೈ ಅಭ್ಯರ್ಥಿಗಳ ಪಟ್ಟಿ ರಿಲೀಸ್?
Team Udayavani, Sep 17, 2022, 12:48 PM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ 150 ಟಾರ್ಗೆಟ್‌ನಡಿ ಸಜ್ಜಾಗುತ್ತಿರುವ ಕಾಂಗ್ರೆಸ್ ಡಿಸೆಂಬರ್ ವೇಳಗೆ 150ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕಳೆದ ಚುನಾವಣೆಯಲ್ಲಿ 200 ರಿಂದ 5 ಸಾವಿರ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದ28 ಕ್ಷೇತ್ರ ಹಾಗೂ 10 ಸಾವಿರ ಮತಗಳ ಅಂತರದಲ್ಲಿ ಸೋತಿದ್ದ 33 ಕ್ಷೇತ್ರಗಳಲ್ಲಿಈ ಬಾರಿ ಗೆಲ್ಲಲು ಹೆಚ್ಚು ಒತ್ತು ನೀಡಲು ಕಾರ್ಯತಂತ್ರ ರೂಪಿಸಿದೆ. ಎರಡು ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲದಿರುವ 35 ಕ್ಷೇತ್ರ ಗುರುತಿಸಿ ಹೊಸಮುಖಗಳಿಗೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜತೆಗೆ, ಹಾಲಿ ಇರುವ ಶಾಸಕರ ಪೈಕಿ 10 ರಿಂದ 15 ಕ್ಷೇತ್ರಗಳಲ್ಲಿ ಸ್ವಲ್ಪ ಮಟ್ಟಿಗೆ ಹಿನ್ನೆಡೆಯಿದ್ದು ಯಾವ್ಯಾವ ರೀತಿಯಲ್ಲಿ ಸರಿಪಡಿಸಿಕೊಳ್ಳಬೇಕು ಎಂಬ ಬಗ್ಗೆ ಸಲಹೆ ನೀಡಲಾಗಿದೆ.
ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಆಧರಿಸಿ ಮೊದಲ ಹಂತದಲ್ಲಿ 150 ಕ್ಷೇತ್ರಗಳ
ಅಭ್ಯರ್ಥಿಗಳನ್ನು ಸಿದ್ಧಪಡಿಸಿದ್ದು ಸ್ವ ಸಾಮರ್ಥ್ಯ, ಸಮುದಾಯ ಬೆಂಬಲ, ವರ್ಚಸ್ಸು ಪ್ರಮುಖವಾಗಿ ಪರಿಗಣಿಸಲಾಗುತ್ತಿದೆ ಎಂದು ಹೇಳಲಾಗಿದೆ. ಮೇಕೆದಾಟು ಪಾದಯಾತ್ರೆ, ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ತಿರಂಗ ನಡಿಗೆ, ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಸಮಾವೇಶ, ಇದೀಗ ಭಾರತ್ ಜೋಡೋ ಯಾತ್ರೆಯಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗಿರುವ ಮುಂದೆ ಆಗಲಿರುವ ಅನುಕೂಲ, ನಾಯಕರ ಒಗ್ಗಟ್ಟು, ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸಿದರೆ ಆಗಬಹುದಾದ ಲಾಭ ಇವೆಲ್ಲದರ ಬಗ್ಗೆಯೂ ಖಾಸಗಿ ಸಮೀಕ್ಷೆ ವರದಿ ನೀಡಿದೆ. ಹಳೇ ಮೈಸೂರು, ಕರಾವಳಿ-ಮಲೆನಾಡು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗ ಗಳಲ್ಲಿ ಅಲ್ಲಿನ ಪ್ರಸಕ್ತ ರಾಜಕೀಯ ಪರಿಸ್ಥಿತಿ ಆಧರಿಸಿ ಸಮೀಕ್ಷೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಈ ನಡುವೆ, ಬೆಂಗಳೂರಿನಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆಯಡಿ ಕಾಂಗ್ರೆಸ್ ಬಿಟ್ಟುಬಿಜೆಪಿ ಸೇರಿದ ಶಾಸಕರ ಕ್ಷೇತ್ರಗಳಲ್ಲಿ ಸಮರ್ಥಅಭ್ಯರ್ಥಿಗಳು ಇನ್ನೂ ಸಿಕ್ಕಿಲ್ಲ. ಇದರ ನಡುವೆ,ಈ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಟಿಕೆಟ್‌ಆಕಾಂಕ್ಷಿತರಾಗಿದ್ದ ಕೆಲವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.
ಮಹತ್ವದ ಸಭೆ: ಭಾರತ್ ಜೋಡೋ ಯಾತ್ರೆ ಮುಗಿದ ನಂತರ ದೆಹಲಿಯಲ್ಲಿ ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಯಲಿದ್ದು, ಅಲ್ಲಿ 150 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಚರ್ಚೆಯಾಗಲಿದೆ. ನಾಲ್ಕು ತಿಂಗಳ ಮುಂಚೆ ಅಭ್ಯರ್ಥಿ ಘೋಷಣೆಯಾದರೆಮಾತ್ರ ನಾವು ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್ ಇಬ್ಬರೂ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಬಿಜೆಪಿ-ಜೆಡಿಎಸ್ ಯಾತ್ರೆಗೆ ಟಕ್ಕರ್ ನೀಡಲು ತಂತ್ರ :
ಬಿಜೆಪಿಯ ಜನಸ್ಪಂದನ ಯಾತ್ರೆ, ಜೆಡಿಎಸ್‌ನ ಪಂಚರತ್ನ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಸಹ ಸರ್ಕಾರದ ವೈಫಲ್ಯಗಳ ಸರಮಾಲೆ ಹೆಸರಿನಲ್ಲಿ ರಾಜ್ಯ ಪ್ರವಾಸದ ಜತೆಗೆ ಸಮಾವೇಶ ಮಾಡಲು ಕಾರ್ಯತಂತ್ರ ರೂಪಿಸಿದೆ. ಎರಡು-ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡಲು ರೂಪು-ರೇಷೆ ನಿಗದಿ ಮಾಡಲಾಗುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ತಂಡ ಒಂದು ತಿಂಗಳ ಕಾಲ 224 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
– ಎಸ್.ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.