ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ
Team Udayavani, Mar 11, 2017, 8:23 AM IST
ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮೇಲೆ ಬಜೆಟ್ ಪ್ರಭಾವ ಬೀರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ರಾಜ್ಯ ಮುಖ್ಯ
ಚುನಾವಣಾಧಿಕಾರಿಗಳಿಗೆ ಬಿಜೆಪಿ ಮನವಿ ಮಾಡಿದೆ.
ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ವಕ್ತಾರ ಸುರೇಶ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ಮುಖ್ಯ ಚುನಾವಣಾಧಿಕಾರಿಗಳ
ಕಚೇರಿಯ ಜಂಟಿ ಆಯುಕ್ತರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರ ನಿಯೋಗ, ಮಾರ್ಚ್ 15ರಂದು 2017-18ನೇ ಸಾಲಿನ
ಬಜೆಟ್ ಮಂಡನೆಯಾಗಲಿದೆ. ಇದೇ ವೇಳೆ, ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯೂ ಘೋಷಣೆ ಆಗಿದೆ.
ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಹಾಗೂ ಬಜೆಟ್ ಮಂಡನೆ ಸಂಬಂಧ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ
ಸಲ್ಲಿಸಿತು.
ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ಮಾ.15ರಂದು ರಾಜ್ಯದ ಬಜೆಟ್ ಮಂಡನೆಯಾಗಲಿದೆ. ಈ ನಡುವೆ
ನಂಜನಗೂಡು ಹಾಗೂ ಗುಂಡ್ಲುಪೇಟೆಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಈಗ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ, ಸಿಎಂ
ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಚುನಾವಣಾ ಪ್ರಣಾಳಿಕೆಯಾಗಿರಬಾರದು ಮತ್ತು ಅದು ಉಪಚುನಾವಣೆಗಳ ಮೇಲೆ
ಪ್ರಭಾವ ಬೀರುವಂತದ್ದು ಆಗಬಾರದು. ಜನಪ್ರಿಯ ಯೋಜನೆ ಘೋಷಿಸುವುದು ಕೂಡ ಸರಿಯಲ್ಲ. ಬಜೆಟ್ ಮೂಲಕ ಮತದಾರರನ್ನು ಸೆಳೆಯುವ ಕೆಲಸ ಆಗಬಾರದು ಎಂದರು.
ಆದರೆ, ಬಜೆಟ್ ಮುಂದೂಡಬೇಕೆನ್ನುವ ಒತ್ತಾಯ ಮಾಡುತ್ತಿಲ್ಲ. ಮುಕ್ತ ಚುನಾವಣೆಗೆ ಪೂರಕವಾಗಿರಬೇಕು. ಪ್ರಜಾಪ್ರಭುತ್ವ
ಮೌಲ್ಯಗಳು ಉಳಿಯಬೇಕು. ಅದಕ್ಕಾಗಿ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ್ ನಾರಾಯಣ, ಮುಖಂಡ ಸುಬ್ಬ ನರಸಿಂಹ ಇದ್ದರು. ಸಾಮಾನ್ಯ ಜ್ಞಾನವಿಲ್ಲ
ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳ ಮೇಲೆ ರಾಜ್ಯ ಬಜೆಟ್ ಪ್ರಭಾವ ಬೀರದಂತೆ ನೋಡಿಕೊಳ್ಳಬೇಕೆಂದು
ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಿಜೆಪಿ ನಾಯಕರಿಗೆ ಸಾಮಾನ್ಯ ಜ್ಞಾನವಿಲ್ಲ. ಪಂಚ ರಾಜ್ಯಗಳ ಚುನಾವಣೆ ಘೋಷಣೆಯಾದ ಬಳಿಕ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಾಗಲಿಲ್ಲವೇ? ಆಗ ಇವರಿಗೆ ನೀತಿ ಸಂಹಿತೆಯ ವಿಷಯ ತಿಳಿದಿರಲಿಲ್ಲವೇ?
ಸಿದ್ದರಾಮಯ್ಯ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.