Congress; ಸಂಡೂರು, ಸವಣೂರಲ್ಲಿ ಶಕ್ತಿ ಪ್ರದರ್ಶನ
Team Udayavani, Dec 8, 2024, 11:01 PM IST
ಹುಬ್ಬಳ್ಳಿ: ಮೂರು ಕ್ಷೇತ್ರಗಳ ಉಪಚುನಾವಣೆ ಗೆದ್ದ ಹುಮ್ಮಸ್ಸಿನಲ್ಲಿರುವ ಹಳೇ ಮೈಸೂರು ಭಾಗದ ಕಾಂಗ್ರೆಸ್ ಹಾಸನದಲ್ಲಿ ಅಬ್ಬರಿಸಿದ ಬೆನ್ನಲ್ಲೇ ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕದಲ್ಲಿ ಮತದಾರರಿಗೆ ಅಭಿನಂದನ ಸಮಾವೇಶದ ಮೂಲಕ ಬಲ ಪ್ರದರ್ಶನ ಮಾಡಿದೆ. ರವಿವಾರ ಸಂಡೂರು, ಸವಣೂರಿನಲ್ಲಿ ನಡೆದ ಎರಡೂ ಕಾರ್ಯಕ್ರಮಗಳಿಗೆ ಸಾವಿರಾರು ಜನರನ್ನು ಸೇರಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿದೆ.
ಹಾವೇರಿ ಜಿಲ್ಲೆ ಸವಣೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ 25 ವರ್ಷಗಳಿಂದ ಗೆದ್ದಿರಲಿಲ್ಲ. ಕಳೆದ 5 ಚುನಾವಣೆಗಳಲ್ಲೂ ನಾವು ಸೋತಿದ್ದೆವು. ಆದರೆ, ಶಿಗ್ಗಾವಿ ಕ್ಷೇತ್ರದ ಜನ ಜಾತಿ, ಧರ್ಮ ನೋಡಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ, ಸಿದ್ಧಾಂತ ನೋಡಿ ಮತ ಹಾಕುತ್ತಾರೆ. ಹೀಗಾಗಿ ನಾವು ಗೆಲ್ಲುತ್ತೇವೆ ಎಂಬ ಧೈರ್ಯ ಇತ್ತು ಎಂದು ಹೇಳಿದರು.
ಸಂಡೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, “ರಿಪಬ್ಲಿಕ್ ಆಫ್ ಬಳ್ಳಾರಿ’ ಮಾಡಿಕೊಂಡಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಸಂಡೂರು ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದರು. ಹಿಂದೆ ಬಳ್ಳಾರಿಗೆ ಬನ್ನಿ ನೋಡಿಕೊಳ್ಳುತ್ತೇನೆ’ ಎಂದಾಗ ಹೆದರದೆ ಪಾದಯಾತ್ರೆ ಮಾಡಿದ್ದೆ. ಈ ಬಾರಿ ಸಂಡೂರಿನಲ್ಲಿ 3 ದಿನ ಪ್ರಚಾರ ಮಾಡಿದೆ. ಸಂಸದ ತುಕಾರಾಂ ಮಾಡಿರುವ ಅಭಿವೃದ್ಧಿ ಕಾರ್ಯಗಳು, ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ, ಲಾಡ್ ಉಸ್ತುವಾರಿಯಲ್ಲಿ ಗೆಲುವು ಸಾಧಿಸಿ ಬಿಜೆಪಿಗೆ ಪಾಠ ಕಲಿಸಿದ್ದೇವೆ ಎಂದರು.
ಎರಡೂ ಕಡೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸರಕಾರದ ಗ್ಯಾರಂಟಿ ಯೋಜನೆಗಳ ಕಟೌಟ್‌ಗಳು ರಾರಾಜಿಸಿದವು. ಅಪಾರ ಸಂಖ್ಯೆಯಲ್ಲಿ ಜನರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.