ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ: ಬಿಜೆಪಿ
Team Udayavani, Dec 6, 2024, 12:46 AM IST
ಬೆಂಗಳೂರು: ಹಾಸನದಲ್ಲಿ ನಡೆದ ಕಾಂಗ್ರೆಸ್ ಸರಕಾರದ ಜನಕಲ್ಯಾಣ ಮತ್ತು ಸ್ವಾಭಿಮಾನಿ ಸಮಾ ವೇಶಕ್ಕೆ ರಾಜ್ಯ ಬಿಜೆಪಿ ನಾಯಕರು ಕಿಡಿಕಾರಿದ್ದು, ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳನ್ನೂ ಮಾಡದೆಯೇ ಹಗರಣಗಳ ಸರಮಾಲೆಯನ್ನೇ ಮಾಡಿರುವ ಕಾಂಗ್ರೆಸ್ ಸರಕಾರ ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ದಿಲ್ಲಿಯಲ್ಲಿ ಈ ಕುರಿತು ಪ್ರತಿಕ್ರಿಯಿ ಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸಿನ
ವರು ಯಾವುದಕ್ಕೆ ಸಂಭ್ರಮಿಸುತ್ತಿ ದ್ದಾರೆ? ರಾಜ್ಯವನ್ನು ಒಂದೂವರೆ ವರ್ಷದಲ್ಲಿ ಅಧೋಗತಿಗೆ ತೆಗೆದುಕೊಂಡು ಹೋಗಿರುವುದಕ್ಕಾ? ಆರ್ಥಿಕತೆ ದಿವಾಳಿ ಮಾಡಿರುವುದಕ್ಕಾ? ಅಭಿವೃದ್ಧಿ ಶೂನ್ಯ ಆಗಿರುವುದಕ್ಕಾ? 3 ಉಪ ಚುನಾವಣೆ ಗೆದ್ದ ಖುಷಿಗಿಂತ ಹಗರಣ ಗಳ ಸರಮಾಲೆ ನಡೆಸಿ, ಜನವಿರೋಧಿ ನೀತಿಗಳನ್ನು ತೆಗೆದುಕೊಂಡಿದ್ದಕ್ಕಾ? ಅಥವಾ ನ್ಯಾಯಾಲಯ, ತನಿಖಾ ಸಂಸ್ಥೆಗಳಿಗೆ ಶಕ್ತಿ ಪ್ರದರ್ಶನವೇ? ಎಂದು ಪ್ರಶ್ನಿಸಿದರು.
ದೇವೇಗೌಡರು ಒಂದು ದಿನ ಕಟ್ಟಿದ ಕೋಟೆಯಲ್ಲ ಅದು. ಇಂತಹ ಅನೇಕ ವಿರೋಧಿಗಳನ್ನು ಎದುರಿಸಿಯೇ ಕಟ್ಟಿದ್ದಾರೆ. ಅದನ್ನೆಲ್ಲಾ ಛಿದ್ರ ಮಾಡು ವುದಕ್ಕೆ ಆಗುವುದಿಲ್ಲ ಎಂದರು.
ಹೈಕಮಾಂಡ್ಗೆ ಸಂದೇಶ
ಸಂಸದ ಗೋವಿಂದ ಕಾರಜೋಳ ಮಾತನಾಡಿ, ಸಿದ್ದರಾಮಯ್ಯಗೆ ಭಯ ಕಾಡುತ್ತಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಹುನ್ನಾರ ನಡೆದಿರುವುದರಿಂದ ಮತ್ತು ಹೈಕಮಾಂಡ್ನವರು ಸೂಕ್ಷ್ಮವಾಗಿ ಹೇಳಿರುವುದರಿಂದ ಜನಕಲ್ಯಾಣ ಹೆಸರಿನಲ್ಲಿ ಹೈಕಮಾಂಡ್ಗೆ ಸಂದೇಶ ರವಾನಿಸಲು ಜನ ಸೇರಿಸಿದ್ದಾರೆ. ಯಾವುದೇ ಅಭಿವೃದ್ಧಿ ಮಾಡದೆಯೇ ಒಂದೂವರೆ ವರ್ಷ ವಾಲ್ಮೀಕಿ ನಿಗಮ, ಮುಡಾ ಹಗರಣಗಳಲ್ಲಿ ಸಿಲುಕಿದ್ದೇ ಸಾಧನೆಯೇ? ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.