ಪಾಟೀಲರ ಪದಗ್ರಹಣದಲ್ಲಿ ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶನ


Team Udayavani, Jan 19, 2019, 1:05 AM IST

18.jpg

 ಬೆಂಗಳೂರು: ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಚ್‌.ಕೆ.ಪಾಟೀಲ್‌ ಪದಗ್ರಹಣ ಕಾರ್ಯಕ್ರಮದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿರುವ ಪಕ್ಷದ ನಾಯಕರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಸಂಕಲ್ಪ ತೊಟ್ಟಿದ್ದಾರೆ. ಆ ಮೂಲಕ ಲೋಕಸಭಾ ಚುನಾವಣೆಗೆ ಪಕ್ಷ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಎಲ್ಲ ನಾಯಕರೂ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ ನಮ್ಮ ಮುಂದಿದೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕನಿಷ್ಠ 25 ಕ್ಷೇತ್ರ ಗೆಲ್ಲಬೇಕು ಎಂದರೆ, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ.ಸಿದ್ದರಾಮಯ್ಯ 28 ಕ್ಷೇತ್ರಗಳನ್ನೂ ಗೆಲ್ಲಬೇಕು ಎಂದು ತಿಳಿಸಿದರು. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎಚ್‌.ಕೆ.ಪಾಟೀಲ್‌, ರಾಜ್ಯದಲ್ಲಿ ಕನಿಷ್ಠ 22 ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಯಂತಹ ಸುಳ್ಳುಗಾರ ಈ ದೇಶದಲ್ಲಿ ಯಾರೂ ಇಲ್ಲ. ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷದಲ್ಲಿ ಸುಳ್ಳುಗಳನೆ°à ಹೇಳಿ ಜನರಿಗೆ ವಂಚನೆ ಮಾಡಿ¨ªಾರೆ. ಅಂಥವರು ಅಧಿಕಾರದಲ್ಲಿ ಇರಲು ಅರ್ಹರಲ್ಲ. ಅವರನ್ನು ಅಧಿಕಾರದಿಂದ ಕಿತ್ತೂಗೆದು ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ 50 ದಿನ ಮಾತ್ರ ಬಾಕಿ ಉಳಿದಿವೆ. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು. ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಲ್ಲದ ಬಿಜೆಪಿಯವರಿಗೆ ಅಧಿಕಾರದಲ್ಲಿ ಇರುವ ನೈತಿಕತೆ ಇಲ್ಲ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಬಡವರು, ದಲಿತರು ಹಿಂದುಳಿದವರ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರು ಯಾವುದೇ ಯೋಜನೆ ಮಾಡುವುದಿಲ್ಲ. ಆರ್‌ಎಸ್‌ಎಸ್‌ ಹಿಡನ್‌ ಅಜೆಂಡಾಗಳನ್ನು ಮಾತ್ರ ಜಾರಿಗೆ ತರುತ್ತಾರೆ ಎಂದರು.

ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ 40 ಸಾವಿರ ಕೋಟಿ ರೂ.ನುಂಗಿ ಹಾಕಿದ್ದಾರೆ. ರಕ್ಷಣಾ ಇಲಾಖೆಯ ಇತಿಹಾಸದಲ್ಲಿಯೇ ಇಷ್ಟು ದೊಡ್ಡ ಹಗರಣ ಆಗಿರಲಿಲ್ಲ. ಬಿಜೆಪಿಯವರ ನಿಜವಾದ ಬಣ್ಣವನ್ನು ಬಯಲು ಮಾಡುವ ಕೆಲಸ ಮಾಡಬೇಕು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಾಯಿ ಬಿಡದ ಬಿಜೆಪಿಯವರು, ಈಗ ದೇಶಭಕ್ತಿಯ ಬಗ್ಗೆ ಮಾತನಾಡುತ್ತಾರೆ. ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡುತ್ತೇವೆ ಎನ್ನುವುದು ಕೂಡ ಮೂಗಿಗೆ ತುಪ್ಪ ಸವರುವ ಕೆಲಸ ಎಂದು ಹೇಳಿದರು.

ರಾಜ್ಯದ ಜನರು ಹಿಂದಿನ ಕಾಂಗ್ರೆಸ್‌ ಸರ್ಕಾರದ ಕೆಲಸಗಳನ್ನು ಈಗ ನೆನಪು ಮಾಡಿಕೊಳ್ಳುತ್ತಿದ್ದಾ ರೆ. ಜನರಿಗೆ ಸುಳ್ಳು ಹೇಳಿ ದಾರಿ ತಪ್ಪಿಸುವ ಡೋಂಗಿಗಳನ್ನು ಅಧಿಕಾರದಿಂದ ಕಿತ್ತೂಗೆಯಲು ಜನರಿಗೆ ಕಾಂಗ್ರೆಸ್‌ ಸಾಧನೆಗಳ ಸತ್ಯ ಹೇಳಬೇಕು ಎಂದು ಹೇಳಿದರು.

ಆಪರೇಷನ್‌ ಹುಟ್ಟು ಹಾಕಿದ್ದೇ ಯಡಿಯೂರಪ್ಪ’
ರಾಜ್ಯದಲ್ಲಿ ಆಪರೇಷನ್‌ ಕಮಲವನ್ನು ಹುಟ್ಟು ಹಾಕಿದ್ದೇ ಯಡಿಯೂರಪ್ಪ. 2008ರಲ್ಲಿ ಅಧಿಕಾರಕ್ಕೆ ಬಂದು ಆಪರೇಷನ್‌ ಕಮಲದಂತ ಕೆಟ್ಟ ವ್ಯವಸ್ಥೆಯನ್ನು ಜಾರಿಗೆ ತಂದರು. ಈಗ ಮತ್ತೆ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಿಮಗೆ ವಯಸ್ಸಾಗಿದೆ. ಈಗ ಅದನ್ನೆಲ್ಲ ಮಾಡಬೇಡಿ ಅಂತ ಹೇಳಿದರೂ ಅವರು ಕೇಳುವುದಿಲ್ಲ. ಆದರೆ, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಕಾಂಗ್ರೆಸ್‌ ಶಾಸಕರು ನಮ್ಮ ಪಕ್ಷದ ಚಿಹ್ನೆಯಿಂದ ಗೆದ್ದು ಹಣ, ಅಧಿಕಾರದ ಆಸೆಗಾಗಿ ಆಪರೇಷನ್‌ ಕಮಲಕ್ಕೆ ಒಳಗಾಗಬಾರದು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.