CM ಪುತ್ರ ಯತೀಂದ್ರ, ಸಚಿವ ಬೋಸರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌?

11 ಸ್ಥಾನಗಳ ಪರಿಷತ್‌ ಚುನಾವಣೆ: ಉಗ್ರಪ್ಪ, ಇಸ್ಮಾಯಿಲ್‌, ಕಾರ್ತಿಕ್‌, ಐವನ್‌ಗೆ ಅವಕಾಶ?

Team Udayavani, May 30, 2024, 7:15 AM IST

CM ಪುತ್ರ ಯತೀಂದ್ರ, ಸಚಿವ ಬೋಸರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌?

ಬೆಂಗಳೂರು: ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜ್‌ ಹಾಗೂ ಸಿಎಂ ಪುತ್ರ ಡಾ| ಯತೀಂದ್ರ ಅವರಿಗೆ ವಿಧಾನ ಪರಿಷತ್ತಿನ ಚುನಾವಣೆಯ ಟಿಕೆಟ್‌ ದೊರೆಯುವುದು ಬಹುತೇಕ ಖಚಿತ. ಹಾಲಿ ಸದಸ್ಯ ಕೆ. ಗೋವಿಂದ ರಾಜ್‌ ಮತ್ತೆ ಟಿಕೆಟ್‌ ಗಿಟ್ಟಿಸುವಲ್ಲಿ ವಿಫ‌ಲವಾಗಿದ್ದು, ಅವರ ಬದಲಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತ ವಿನಯ್‌ ಕಾರ್ತಿಕ್‌ಗೆ ಅದೃಷ್ಟ ಒಲಿದಿದೆ ಎನ್ನಲಾಗಿದೆ.

ಪರಿಷತ್ತಿನ 11 ಸ್ಥಾನಗಳಿಗೆ ಜೂ. 13ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಗಳ ಆಯ್ಕೆಗೆ ಎರಡು ದಿನಗಳಿಂದ ದಿಲ್ಲಿಯಲ್ಲಿ ಕಸರತ್ತು ನಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯು ಸಂಭವನೀಯರ ಪಟ್ಟಿಗೆ ಅಂತಿಮ ಸ್ಪರ್ಶ ನೀಡಿದ್ದು, ಗುರುವಾರ ರಾಹುಲ್‌ ಗಾಂಧಿ ಒಪ್ಪಿಗೆ ಪಡೆದು ಘೋಷಿ ಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುಜೇìವಾಲ ಸಭೆಯಲ್ಲಿದ್ದರು.

ಕಾಂಗ್ರೆಸ್‌ಗೆ ಲಭ್ಯವಾಗುವ 7 ಸ್ಥಾನಗಳಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾಕರಿಗೆ (ಒಂದು ಮುಸ್ಲಿಂ ಮತ್ತೂಂದು ಕ್ರಿಶ್ಚಿಯನ್‌) ತಲಾ ಎರಡು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ತಲಾ ಒಂದೊಂದು, ಒಕ್ಕಲಿಗ ಸಮುದಾಯಕ್ಕೆ ಒಂದು ಸ್ಥಾನ ಕೊಡುವ ಬಗ್ಗೆ ತೀರ್ಮಾನಿಸಲಾಗಿದೆ. ಅದರಂತೆ ಹಿಂದುಳಿದ ವರ್ಗದಿಂದ ಹಾಲಿ ಸದಸ್ಯ ಹಾಗೂ ಸಚಿವ ಬೋಸರಾಜು, ಡಾ| ಯತೀಂದ್ರ, ಅಲ್ಪಸಂಖಾಕ‌ರ ಕೋಟಾ ದಲ್ಲಿ ಮೇಲ್ಮನೆ ಮಾಜಿ ಸದಸ್ಯ ಐವನ್‌ ಡಿ’ ಸೋಜ (ಕ್ರಿಶ್ಚಿಯನ್‌), ಹುಬ್ಬಳ್ಳಿ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್‌ ತಮಟಗಾರ, ಪರಿಶಿಷ್ಟ ಪಂಗಡದಿಂದ ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಅವರಿಗೆ ಟಿಕೆಟ್‌ ಸಿಗುವುದು ಬಹುತೇಕ ಖಾತರಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಪರಿಶಿಷ್ಟ ಜಾತಿಯಿಂದ ಇದುವರೆಗೂ ಪ್ರಾತಿನಿಧ್ಯ ಸಿಗದ ಕೊರಮ, ಕೊರಚ ಸಮುದಾಯಕ್ಕೆ ಅವಕಾಶ ಕೊಡಬೇಕೆಂಬ ಬೇಡಿಕೆ ಇದೆ, ಒಕ್ಕಲಿಗ ಕೋಟಾದಲ್ಲಿ ಕೆಪಿಸಿಸಿ ಖಜಾಂಚಿ ವಿನಯ್‌ ಕಾರ್ತಿಕ್‌ಗೆ ಅದೃಷ್ಟ ಒಲಿದಿದೆ ಎನ್ನಲಾಗಿದೆ.

ಸೋತವರಿಗೆ ಇಲ್ಲ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ, ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌, ಮಾಜಿ ಸಚಿವ ಪಿ.ಟಿ.ಪರಮೇಶ್ವರ್‌ ನಾಯ್ಕ ಸಹಿತ ಹಲವರ ಹೆಸರು ಚರ್ಚೆಗೆ ಬಂದಿತ್ತು. ಆದರೆ ಸೋತವರಿಗೆ ಅವಕಾಶ ಕೊಡಬಾರದೆಂಬ ಮಾನದಂಡದಡಿ ಇವರನ್ನು ಹೊರಗಿಡಲಾಗಿದೆ.

ಶೆಟ್ಟರ್‌ ಸ್ಥಾನ ಲಿಂಗಾಯತರಿಗೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ ವಿಧಾನ ಪರಿಷತ್ತಿಗೆ ಕಳುಹಿಸಿತ್ತು. ಆದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತ್ತೆ ಬಿಜೆಪಿ ಸೇರಿದ್ದರಿಂದ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗೆ ತೆರವಾಗಿರುವ ಸ್ಥಾನಕ್ಕೆ ಇನ್ನೂ ಚುನಾವಣೆ ಘೋಷಣೆ ಆಗಿಲ್ಲ. ಆದರೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್‌ ಕೊಡಲಿಲ್ಲ ಎಂಬ ಆಕ್ರೋಶ ಎದುರಿಸುವ ಬದಲಿಗೆ ಶೆಟ್ಟರ್‌ ಸ್ಥಾನಕ್ಕೆ ಲಿಂಗಾಯತ ಅಭ್ಯರ್ಥಿಯನ್ನೇ ಘೋಷಿಸಲಿದೆ. ಶೆಟ್ಟರ್‌ ತೆರವುಗೊಳಿಸಿರುವ ಅವಧಿಯು 2028ರ ಜೂನ್‌ 14ರ ವರೆಗೂ ಇದೆ.

ಸಂಭಾವ್ಯ ಅಭ್ಯರ್ಥಿಗಳು
1. ಎನ್‌.ಎಸ್‌.ಬೋಸರಾಜ್‌
2. ಡಾ| ಯತೀಂದ್ರ
3. ಐವನ್‌ ಡಿ’ಸೋಜಾ
4.ಇಸ್ಮಾಯಿಲ್‌ ತಮಟಗಾರ
5. ವಿ.ಎಸ್‌.ಉಗ್ರಪ್ಪ

ಯಾರಿಗೆಲ್ಲ ತಪ್ಪಬಹುದು?
1.ಕೆ.ಗೋವಿಂದರಾಜ್‌
2. ಕೆ.ಆರ್‌.ರಮೇಶ್‌ ಕುಮಾರ್‌
3. ಪಿ.ಟಿ.ಪರಮೇಶ್ವರ್‌ ನಾಯ್ಕ

 

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.