ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿ ಗೆಲ್ಲಿಸಲು ಕಾಂಗ್ರೆಸ್‌ ಸೂಚನೆ 


Team Udayavani, Oct 18, 2018, 7:04 AM IST

7.jpg

ಬೆಂಗಳೂರು: ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಪಕ್ಷದ ನಿರ್ಧಾರದ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಶಾಸಕರು ಹಾಗೂ ಸ್ಥಳೀಯ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಬುಧವಾರ ಸಭೆ ನಡೆಸಿ ಜೆಡಿಎಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ತಾಕೀತು ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌, ಮಾಜಿ ಸಚಿವರಾದ ಚಲುವರಾಯಸ್ವಾಮಿ, ಪಿ.ಎಂ. ನರೇಂದ್ರಸ್ವಾಮಿ ಮುಖಂಡರಾದ ರವಿ ಗಣಿಗ, ರಾಮಕೃಷ್ಣ, ಮಧು ಮಾದೇಗೌಡ, ಕೆ.ಬಿ. ಚಂದ್ರಶೇಖರ್‌ ಸೇರಿದಂತೆ 2018ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಅಭ್ಯರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮ ಮೇಲಿದೆ. ಜಿಲ್ಲೆಯ ಸ್ಥಳೀಯ ಸಮಸ್ಯೆಗಳ ಬಗ್ಗೆ ಉಪ ಚುನಾವಣೆ ಮುಗಿದ ನಂತರ ಮಾತುಕತೆ ನಡೆಸಿ ಬಗೆಹರಿಸಲಾಗುವುದು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಸಂದೇಶ ರವಾನೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಂಡ್ಯ ಜಿಲ್ಲಾ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯ ನಂತರ ಮಾತನಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ, ಶಿವಮೊಗ್ಗ ಹಾಗೂ ಬಳ್ಳಾರಿ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಮಂಡ್ಯದಲ್ಲಿ ಅಷ್ಟೊಂದು ಜೋರಾಗಿಲ್ಲ. ಆದರೆ, ಪಕ್ಷದ ತೀರ್ಮಾನಕ್ಕೆ ನಾವೆಲ್ಲ ಬದ್ದರಾಗಿದ್ದೇವೆ. ಮಂಡ್ಯ ಅಭ್ಯರ್ಥಿ ಆಯ್ಕೆ ಬಗ್ಗೆ ಬೇಸರವಿಲ್ಲ. ಮಾಧ್ಯಮಗಳಲ್ಲಿ ಊಹಾಪೋಹದ ಸುದ್ದಿಗಳು ಬಿತ್ತರವಾಗುತ್ತಿವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಶಿವರಾಮೇಗೌಡರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.