ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ
ದರ್ಶನ್ ಕೇಸ್, ನೇಹಾ, ಅಂಜಲಿ ಹತ್ಯೆ ಪ್ರಕರಣದ ಬಳಿಕ ಎಚ್ಚೆತ್ತ ಕಾಂಗ್ರೆಸ್ ಪಾಳಯ
Team Udayavani, Jun 15, 2024, 6:40 AM IST
ಬೆಂಗಳೂರು: ರಾಜ್ಯದಲ್ಲಿ ನಡೆಯುವ ಯಾವುದೇ ಸೂಕ್ಷ್ಮ ಮತ್ತು ಗಂಭೀರ ಘಟನೆಗಳ ಬಗ್ಗೆ ಸರಕಾರ ಹಾಗೂ ಪಕ್ಷದ ನಿಲುವು ಪ್ರಕಟಿಸಿ, ಆ ಮೂಲಕ ವಿಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡುವ ಸಲುವಾಗಿ ಸಲಹಾ ಸಮಿತಿ ರಚಿಸಲು ಕಾಂಗ್ರೆಸ್ ನಿರ್ಧರಿಸಿದೆ.
ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈಚೆಗೆ ದರ್ಶನ್ ಮತ್ತು ಇತರರು ಸೇರಿ ನಡೆಸಿದ್ದಾರೆ ಎನ್ನಲಾದ ಕೊಲೆ ಪ್ರಕರಣ, ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣ ಸಹಿತ ಯಾವುದೇ ಸೂಕ್ಷ್ಮ ಅಥವಾ ಗಂಭೀರ ಘಟನೆಗಳು ನಡೆದಾಗ, ಅದಕ್ಕೆ ವಿಪಕ್ಷಗಳು ರಾಜಕೀಯ ಬಣ್ಣ ನೀಡುತ್ತವೆ. ಆ ಮೂಲಕ ಸರಕಾರದ ಬಗ್ಗೆ ನಕಾರಾತ್ಮಕ ಭಾವನೆ ಮೂಡುವಂತೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ನಡೆದಾಗ, ಪಕ್ಷದ ಚೌಕಟ್ಟಿನಲ್ಲಿ ಸಮಾಲೋಚಿಸಿ ಸೂಕ್ತ ನಿಲುವು ಪ್ರಕಟಿಸಲು ಸಲಹಾ ಸಮಿತಿ ರಚಿಸಬೇಕೆಂಬ ಒಕ್ಕೊರಲ ಅಭಿಪ್ರಾಯ ಕೇಳಿಬಂತು.
ಅದರಂತೆ ಘಟನೆಗಳು ಸಂಭವಿಸಿದಾಗ, ಅದರ ಎಲ್ಲ ಸೂಕ್ಷ್ಮತೆಗಳು, ಕೈಗೊಳ್ಳುವ ತೀರ್ಮಾನಗಳಿಂದ ಆಗಬಹು ದಾದ ಪರಿಣಾಮಗಳ ಬಗ್ಗೆ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಸಲಹಾ ಸಮಿತಿಯಲ್ಲಿ ಚರ್ಚಿಸುವುದು. ಅನಂತರ ಅದಕ್ಕೆ ಪೂರಕವಾಗಿ ವಿಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಬೇಕು ಎಂದು ನಿರ್ಧರಿಸಲಾಯಿತು.
ಸೋತವರು ಪರ್ಯಾಯ ಶಾಸಕರು
ಇನ್ನು ರಾಜ್ಯದ 87 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸೋಲು ಅನುಭವಿಸಿದ್ದರೂ, ಅವರೆಲ್ಲರನ್ನೂ ನಾವು “ಪರ್ಯಾಯ ಶಾಸಕರು’ ಅಂತ ಪರಿಗಣಿಸಿ ಪಕ್ಷ ಸಂಘ ಟನೆಗೆ ಒತ್ತು ನೀಡಬೇಕು. ನಿಗಮ-ಮಂಡಳಿಗಳ ಅಧ್ಯಕ್ಷ ರು ಅಧಿಕಾರಾವಧಿಯಲ್ಲಿ ಯಾವುದೇ ಅನಗತ್ಯ ಗೊಂದಲ ಸೃಷ್ಟಿಸಿಕೊಳ್ಳಬಾರದು. ಪಾರದರ್ಶಕ ಆಡಳಿತ ನೀಡುವುದರ ಜತೆಗೆ ಸಾಧ್ಯವಾದಷ್ಟು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಅನುಕೂಲ ಮಾಡಿ ಕೊಡ ಬೇಕು ಎಂದೂ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮಾಜಿ ಸಭಾಪತಿ ಬಿ.ಎಲ್. ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಪಕ್ಷದ ಮೂಲ ಸಿದ್ಧಾಂತವನ್ನು ಯಾವ ಕಾರಣಕ್ಕೂ ಕೈ ಬಿಡಬಾರದು. ಕಾರ್ಯಕರ್ತರ ಪಕ್ಷವಾಗಿ ಮಾಡಲು ಹಾಗೂ ತಳಮಟ್ಟದಿಂದ ಪಕ್ಷ ಬಲಪಡಿಸುವ ಬಗ್ಗೆ ನಮ್ಮ ನಾಯಕರು ಸಲಹೆ ನೀಡಿ¨ªಾರೆ. ಪಕ್ಷ ಸಂಘಟನೆ ಬಗ್ಗೆಯೂ ಮಾರ್ಗದರ್ಶನಗಳನ್ನು ನೀಡಿದ್ದಾರೆ.
-ಡಿ.ಕೆ. ಶಿವಕುಮಾರ್, ಅಧ್ಯಕ್ಷ, ಕೆಪಿಸಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.