ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಾಳೆ
Team Udayavani, Sep 25, 2019, 3:03 AM IST
ಬೆಂಗಳೂರು: 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲು ಕಾಂಗ್ರೆಸ್ ಗುರುವಾರ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದ ರಾಜ್ಯ ಚುನಾವಣಾ ಸಮಿತಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಎಂ.ಬಿ. ಪಾಟೀಲ್, ಎಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿ ಪಕ್ಷದ ಪ್ರಮುಖ ನಾಯಕರು ಸಮಿತಿಯಲ್ಲಿದ್ದಾರೆ.
15 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಜಿಲ್ಲಾ ಮುಖಂಡರು ಹಾಗೂ ಕ್ಷೇತ್ರಗಳ ಸ್ಥಳೀಯ ನಾಯಕರಿಂದ ಅಭಿಪ್ರಾಯ ಪಡೆಯ ಲಾಗಿದ್ದು, ಬುಧವಾರ ಬೆಳಗಾವಿ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳನ್ನು ಹೊರತು ಪಡಿಸಿ ಉಳಿದ ಕ್ಷೇತ್ರಗಳ ಆಕಾಂಕ್ಷಿಗಳ ಸಭೆ ಕರೆಯಲಾಗಿದೆ. ಪ್ರತಿಯೊಂದು ಕ್ಷೇತ್ರದ ಆಕಾಂಕ್ಷಿಗಳ ಜೊತೆ ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾ ಮಯ್ಯ ಸಭೆ ನಡೆಸಲಿದ್ದಾರೆ.
ಬೆಳಗಾವಿ ಬಹುತೇಕ ಕ್ಲಿಯರ್: ಬೆಳಗಾವಿ ಜಿಲ್ಲೆಯ 3 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಂಗಳವಾರ ಬೆಳಗಾವಿಯಲ್ಲಿಯೇ ನಾಯಕರು ಸಭೆ ನಡೆಸಿದ್ದು, ಗೋಕಾಕ್ ಕ್ಷೇತ್ರಕ್ಕೆ ಲಖನ್ ಜಾರಕಿಹೊಳಿ, ಕಾಗವಾಡಕ್ಕೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ, ಅಥಣಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ. ಪಾಟೀಲ್ ಅವರ ಹೆಸರು ಬಹುತೇಕ ಅಂತಿಮಗೊಳಿಸಲಾಗಿದ್ದು, ಗುರುವಾರ ನಡೆಯುವ ಚುನಾವಣಾ ಸಮಿತಿ ಸಭೆಯಲ್ಲಿ ಅಧಿಕೃತ ತೀರ್ಮಾನ ಕೈಗೊಂಡು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ರಾಜ್ಯ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.