ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರನ್ನು ವಾರಿಯರ್ಸ್ ಎಂದು ಪರಿಗಣಿಸಿ, 50 ಲಕ್ಷ ರೂ ಪರಿಹಾರ ನೀಡಿ
ಎಚ್.ಡಿ.ಕುಮಾರಸ್ವಾಮಿ ಆಗ್ರಹ
Team Udayavani, May 24, 2021, 9:12 AM IST
ಬೆಂಗಳೂರು: ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ಪ್ರತಿಯೊಬ್ಬ ಭಾರತೀಯನೂ ಡಿಸೆಂಬರ್ ಒಳಗೆ ಕೋವಿಡ್ ಲಸಿಕೆ ಪಡೆದಿರಬೇಕು: ಕೇಂದ್ರ ಸಚಿವ ಶೇಖಾವತ್
ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.