ಕಾನ್‌ಸ್ಟೆಬಲ್ ಹುದ್ದೆ: ವಯೋಮಿತಿ 2 ವರ್ಷ ಹೆಚ್ಚಳ
Team Udayavani, Nov 3, 2022, 9:40 PM IST
ಬೆಂಗಳೂರು: ಪೊಲೀಸ್ ಕಾನ್‌ಸ್ಟೆಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್‌ಸ್ಟೆಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2 ವರ್ಷಗಳ ಕಾಲ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಾನ್‌ಸ್ಟೆಬಲ್ ಹುದ್ದೆ ಆಕಾಂಕ್ಷಿಗಳ ಹಲವು ತಿಂಗಳ ಬೇಡಿಕೆ ಈಡೇರಿದಂತಾಗಿದೆ.
ಈ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ(2022-23ನೇ ಸಾಲಿನಲ್ಲಿ) ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್‌ಸ್ಟೆಬಲ್ (ಸಿಎಆರ್ ಮತ್ತು ಡಿಎಆರ್) 420+3,064 ಸೇರಿ ಒಟ್ಟು 3,484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್‌ಸ್ಟೆಬಲ್ (ಸಿವಿಲ್ ) 1,137+454 ಸೇರಿ 1,591 ಹುದ್ದೆಗಳಿಗೆ ಮಾತ್ರ 2 ವರ್ಷಗಳಿಗೆ ಹೆಚ್ಚಿಸಲಾಗಿದೆ.
ಸಾಮಾನ್ಯ ವರ್ಗಕ್ಕೆ 27, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ 29 ಮತ್ತು ಬುಡಕಟ್ಟು ಸಮುದಾಯದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ವಯೋಮಿತಿ ಹೆಚ್ಚಿಸಲಾಗಿದೆ.
ಪಿಎಸ್‌ಐ ವಯೋಮಿತಿ ಹೆಚ್ಚಳ? :
ಇದರ ಬೆನ್ನಲ್ಲೇ ಪಿಎಸ್‌ಐ ಅಭ್ಯರ್ಥಿಗಳ ವಯೋಮಿತಿ ಹೆಚ್ಚಳ ಬೇಡಿಕೆಯ ಕೂಗು ಬಲವಾಗಲಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆ ಇಡೀ ಪರೀಕ್ಷೆಯನ್ನೇ ರದ್ದುಪಡಿಸಲಾಗಿದೆ. ಉತ್ತೀರ್ಣರಾದ ನೂರಾರು ಮಂದಿ ನಿರಂತರ ಪ್ರತಿಭಟನೆ ನಡೆಸಿ ಪ್ರಾಮಾಣಿಕರನ್ನು ಹುದ್ದೆಗೆ ಆಯ್ಕೆ ಮಾಡಿ, ಇಲ್ಲವೇ ವಯೋಮಿತಿ ಹೆಚ್ಚಳ ಮಾಡಿ ಎಂದು ಸರಕಾರವನ್ನು ಆಗ್ರಹಿಸಿದ್ದಾರೆ. ಹೀಗಾಗಿ ಇವರ ಬೇಡಿಕೆಯೂ ಈಡೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಯಾವ ಕಾರಣಕ್ಕೆ ಹೆಚ್ಚಳ? :
2020, 2021ರಲ್ಲಿ ಕೊರೊನಾದಿಂದ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೆಬಲ್ ಸೇರಿ ಯಾವುದೇ ಹುದ್ದೆ ನೇಮಕಾತಿ ನಡೆದಿರಲಿಲ್ಲ. ಹೀಗಾಗಿ ಸಾವಿರಾರು ಅಭ್ಯರ್ಥಿಗಳು ಅವಕಾಶ ವಂಚಿತರಾಗಿದ್ದರು. ವಯೋಮಿತಿಯಲ್ಲಿ 2 ವರ್ಷ ವಿನಾಯಿತಿ ನೀಡುವಂತೆ ನೂರಾರು ಮನವಿಗಳು ಬಂದಿದ್ದವು. ಈ ಅಭ್ಯರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈಗ ವಯೋಮಿತಿ ಹೆಚ್ಚಳ ಮಾಡಲಾಗಿದೆ ಎಂದು ಸರಕಾರ ತಿಳಿಸಿದೆ. ಸರಕಾರದ ಈ ಆದೇಶದಿಂದ 5 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.